HomeಅಂಕಣಗಳುKarnataka against SIRSIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

sir-karnataka-government-issues-important-orders-countering-central-governments-sir

- Advertisement -
- Advertisement -

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌ SIR ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗುತ್ತಿದೆ.

ಕರ್ನಾಟಕದಲ್ಲಿ ಒಬ್ಬ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ರಕ್ಷಿಸಿಕೊಳ್ಳಲು ಕರ್ನಾಟಕ ಸರ್ಕಾರವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು SIR ವಿರೋಧಿ ಕರ್ನಾಟಕ, ಎದ್ದೇಳು ಕರ್ನಾಟಕ ಸೇರಿದಂತೆ ಹಲವು ಜನಪರ ಸಂಘಟನೆಗಳು ನಿರಂತರವಾಗಿ ಒತ್ತಾಯಿಸುತ್ತಿದ್ದವು.

ಕೇಂದ್ರ ಚುನಾವಣಾ ಆಯೋಗವು 11 ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅವುಗಳನ್ನು BLO ಗಳಿಗೆ ಒದಗಿಸಿದರೆ ತಮ್ಮ ಮತವನ್ನು ರಕ್ಷಿಸಿಕೊಳ್ಳಬಹುದು ಎಂದು ಹೇಳಿತ್ತು. ಆ ಪಟ್ಟಿಯಲ್ಲಿ ಶಾಶ್ವತ ಶಾಶ್ವತ ನಿವಾಸ ಪ್ರಮಾಣ ಪತ್ರವೂ ಒಂದಾಗಿತ್ತು. ಕರ್ನಾಟಕವು ಪ್ರಮುಖ ಆದೇಶವನ್ನು ಮಾಡುವ ಮೂಲಕ ಅರ್ಹ ಮತದಾರರನ್ನು SIR ಪ್ರಕ್ರಿಯಲ್ಲಿನ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಲು ಮುಂದಾಗಿದೆ. ಇದರ ಮೂಲಕ ಕರ್ನಾಟಕ ಸರ್ಕಾರವು ನಾಗರಿಕ ಸಂಘಟನೆಗಳ ನಿರಂತರ ಒತ್ತಾಯಕ್ಕೆ ಮನ್ನಣೆ ನೀಡಿ ಆದೇಶ ಹೊರಡಿಸಿದೆ.

ಆದೇಶ

ಗ್ರಾಮಪಂಚಾಯಿತಿಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಅಟಲ್‌ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಗಳ ಮೂಲಕ ಇಷ್ಟು ದಿನ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಪಡೆಯಬಹುದಿತ್ತು. ತಹಸೀಲ್ದಾರ್‌ ಈ ಪ್ರಮಾಣಪತ್ರವನ್ನು ನೀಡುವ ಅಧಿಕಾರವನ್ನು ಹೊಂದಿದ್ದರು. ಇದೀಗ ಕರ್ನಾಟಕ ಸರ್ಕಾರದ ಹೊಸ ಆದೇಶದಂತೆ ಗ್ರಾಮಪಂಚಾಯಿತಿಗಳಲ್ಲೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವಂತೆ ಆದೇಶ ಹೊರಡಿಸಿದೆ. ತಹಸೀಲ್ದಾರ್‌ ಹಾಗೂ ಉಪ ತಹಸೀಲ್ದಾರ್‌ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ವ್ಯಕ್ತಿಗಳಿಗೆ ಪ್ರಮಾಣ ಪತ್ರವನ್ನು ನೀಡಲು ಅವಕಾಶ ನೀಡಲಾಗಿದೆ. ಇದರ ಮೂಲಕ ಕರ್ನಾಟಕದ ಯಾವುದೇ ಒಬ್ಬ ವ್ಯಕ್ತ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಕ್ಕಣೆ ಪಡೆಯಲು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬಹುದು.

ಈ ಅದೇಶದಂತೆ ಇಂದಿನಿಂದ 7 ದಿನಗಳ ಒಳಗೆ ಕರ್ನಾಟಕದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಸೌಕರ್ಯಗಳನ್ನೊಳಗೊಂಡ ಕೇಂದ್ರಗಳನ್ನುಸ್ಥಾಪಿಸಲು ಆದೇಶಿಸಲಾಗಿದೆ. ಅರ್ಜಿಗಳನ್ನು ಶೀಫ್ರವಾಗಿ ವಿಲೇವಾರಿ ಮಾಡುವಂತೆಯೂ ಆದೇಶಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ SIR ವಿರೋಧಿ ಕರ್ನಾಟಕದ ಮುಖಂಡರಾದ ನೂರ್‌ ಶ್ರೀಧರ್‌ ರವರು, “ಇದು ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಒಳ್ಳೆಯ ನಿರ್ಧಾರ. ಕರ್ನಾಟಕದ ಯಾವುದೇ ಒಬ್ಬ ಅರ್ಹ ಮತದಾರರು ದಾಖಲೆ ಇಲ್ಲವೆಂದ ಮಾತ್ರಕ್ಕೆ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು. ಸರ್ಕಾರದ ಈ ಆದೇಶವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿ ಮಾಡಲು ನಾಗರಿಕ ಸಂಘಟನೆಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತೇವೆ. ಒಂದು ವೇಳೆ ಅಧಿಕಾರಿಗಳು ಜಾರಿ ಮಾಡಲು ಮೀನಾಮೇಶ ಎಣಿಸುತ್ತಿದ್ದರೆ ಕೂಡಲೇ ಅದನ್ನು ಪ್ರತಿಭಟಿಸುತ್ತೇವೆ” ಎಂದರು.

ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ಅರ್ಹತೆ

  1. ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆಯ ನಂತರ ಅರ್ಜಿದಾರರು ಕರ್ನಾಟಕ ರಾಜ್ಯದ ನಿಜವಾದ ಮತ್ತು ಶಾಶ್ವತ ನಿವಾಸಿಯಾಗಿದ್ದಾರೆ ಎಂಬ ಬಗ್ಗೆ, ಖಚಿತಪಡಿಸಿಕೊಂಡು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡಬಹುದು.
  2. ಮೇಲ್ಕಂಡಂತೆ ಖಚಿತಗೊಳಿಸಿಕೊಳ್ಳುವ ಸಂದರ್ಭದಲ್ಲಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಈ ಕೆಳಕಂಡ ಒಂದು ಅಥವಾ ಹೆಚ್ಚಿನ ಅಂಶಗಳನ್ನು ಪರಿಗಣಿಸಬಹುದು:

ಇತರೆ ಪುರಾವೆಗಳು ಕರ್ನಾಟಕವೇ ಅರ್ಜಿದಾರರ ಪ್ರಮುಖ ಹಾಗೂ ಶಾಶ್ವತ ವಾಸಸ್ಥಳವಾಗಿದೆ ಎಂಬುದನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ದಾಖಲಾತಿ, ವಿದ್ಯುನ್ಮಾನ ಅಥವಾ ಮೌಖಿಕ ಸಾಕ್ಷ

  • ಕರ್ನಾಟಕದಲ್ಲಿ ಜನನ- ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಜನಿಸಿರಬೇಕು.
  • ಸಾಮಾನ್ಯ ವಾಸಸ್ಥಳ ಅರ್ಜಿದಾರರು ಅಥವಾ ಅವರ ತಂದೆ/ತಾಯಿ ಅಥವಾ ಕಾನೂನುಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಸತತವಾಗಿ ಕನಿಷ್ಠ ಹತ್ತು (10) ವರ್ಷಗಳ ಕಾಲ ಸಾಮಾನ್ಯವಾಗಿ ವಾಸವಾಗಿರಬೇಕು.
  • ಶಿಕ್ಷಣ ಅರ್ಜಿದಾರರು ಕರ್ನಾಟಕದಲ್ಲಿನ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ಹಂತದವರೆಗೆ ಕನಿಷ್ಠ ಹತ್ತು (10) ಶೈಕ್ಷಣಿಕ ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು.
  • ಪೋಷಕರು ಅಥವಾ ಸಂಗಾತಿಯ ವಾಸಸ್ಥಳ ಅರ್ಜಿದಾರರ ತಂದೆ, ತಾಯಿ, ಕಾನೂನುಬದ್ಧ ಪಾಲಕರು ಅಥವಾ ಪತಿ/ಪತ್ನಿಯು ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಶಾಶ್ವತ ನಿವಾಸಿಯಾಗಿರಬೇಕು.
  • ವಸತಿ ಆಸ್ತಿ ಅಥವಾ ಅರ್ಜಿದಾರರು ಅಥವಾ ಅವರ ಕುಟುಂಬವು ಕರ್ನಾಟಕದಲ್ಲಿ ವಸತಿ ಇತರೆ ಸ್ಥಿರಾಸ್ತಿಯ ಮಾಲೀಕತ್ವವನ್ನು ಹೊಂದಿರಬೇಕು ಕಾನೂನುಬದ್ಧವಾದ ವಾರಸುದಾರರಾಗಿರಬೇಕು ಅಥವಾ ಬಳಸುತ್ತಿರಬೇಕು.
  • ಸರ್ಕಾರಿ ದಾಖಲೆಗಳು ಮತದಾರರ ಪಟ್ಟಿ, ಆಧಾರ್, ಪಡಿತರ ಚೀಟಿ, ಕಂದಾಯ ದಾಖಲೆಗಳು ಅಥವಾ ಇತರೆ ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರು ಅಥವಾ ಅವರ ಪೋಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಾಗಿರಬೇಕು.
  • ಸರ್ಕಾರಿ / ಸಾರ್ವಜನಿಕ ಸೇವೆ – ಅರ್ಜಿದಾರರು ಅಥವಾ ಅವರ ತಂದೆ/ತಾಯಿಯು ಕರ್ನಾಟಕ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಗಣನೀಯ ಅವಧಿಯಸೇವೆ ಸಲ್ಲಿಸಿರಬೇಕು.
  • ವಿವಾಹ – ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುವ ವ್ಯಕ್ತಿಯನ್ನು ವಿವಾಹವಾಗಿದ್ದು, ರಾಜ್ಯದಲ್ಲಿ ವಾಸವಿರಬೇಕು.

ಸರ್ಕಾರ ಹೊರಡಿಸಿರುವ ಆದೇಶ ಈ ಕೆಳಗಿದೆ.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...