HomeಅಂಕಣಗಳುKarnataka against SIRಕರ್ನಾಟಕದಲ್ಲಿ ಇಂದಿನಿಂದ ಎಸ್‌ಐಆರ್ ‘ಕಚೇರಿ ವಿಚಾರಣೆ’ ಸ್ಥಗಿತ: ಚುನಾವಣಾ ಆಯೋಗದಿಂದ ಹೊಸ ಮಾರ್ಗದರ್ಶಿ!

ಕರ್ನಾಟಕದಲ್ಲಿ ಇಂದಿನಿಂದ ಎಸ್‌ಐಆರ್ ‘ಕಚೇರಿ ವಿಚಾರಣೆ’ ಸ್ಥಗಿತ: ಚುನಾವಣಾ ಆಯೋಗದಿಂದ ಹೊಸ ಮಾರ್ಗದರ್ಶಿ!

- Advertisement -
- Advertisement -

ಮತದಾರರ ಪಟ್ಟಿಗಳ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಮತದಾರರು ಚುನಾವಣಾ ಕಚೇರಿಗಳಿಗೆ ನೇರವಾಗಿ ಹಾಜರಾಗುವ ‘ಕಚೇರಿ ವಿಚಾರಣೆ’ (Physical Hearing) ವ್ಯವಸ್ಥೆಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿಯು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.  ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿರುವ ವರದಿಯ ಪ್ರಕಾರ, ನವದೆಹಲಿಯಲ್ಲಿ ನಡೆದ ಭಾರತೀಯ ಚುನಾವಣಾ ಆಯೋಗದ ಪೂರ್ಣ ಪ್ರಮಾಣದ ಸಭೆಯಲ್ಲಿ ಕೈಗೊಳ್ಳಲಾದ ನೂತನ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಆಯೋಗದ ನೂತನ ನಿರ್ದೇಶನದಂತೆ, ದತ್ತಾಂಶಗಳಲ್ಲಿನ ವ್ಯತ್ಯಾಸಗಳು ಹಾಗೂ ‘ಅನ್‌ಮ್ಯಾಪ್ಡ್‌’ ವಿಭಾಗದಡಿಯಲ್ಲಿ ನೋಟಿಸ್ ಸ್ವೀಕರಿಸಿರುವ ಮತದಾರರು ಇನ್ಮುಂದೆ ಇಆರ್‌ಒ ಅಥವಾ ಎಇಆರ್‌ಒ ಕಚೇರಿಗಳಿಗೆ ಅಲೆಯುವ ಅಗತ್ಯವಿರುವುದಿಲ್ಲ. ಬದಲಿಗೆ, ಬೂತ್ ಮಟ್ಟದ ಅಧಿಕಾರಿಗಳು (BLO) ಸ್ವತಃ ಮತದಾರರ ಮನೆಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಿದ್ದಾರೆ ಮತ್ತು ಅವುಗಳನ್ನು ‘ಇಸಿಐನೆಟ್’ ಡಿಜಿಟಲ್ ವ್ಯವಸ್ಥೆಯಲ್ಲಿ ಅಪ್‌ಲೋಡ್ ಮಾಡಲಿದ್ದಾರೆ. ತೀರಾ ಅನಿವಾರ್ಯ ಹಾಗೂ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಆನ್‌ಲೈನ್ ಮೂಲಕ ವಿಚಾರಣೆ ನಡೆಸಲು ಸೂಚಿಸಲಾಗಿದ್ದು, ವಿಚಾರಣೆ ಕಡ್ಡಾಯವಾದಲ್ಲಿ ಮತದಾರರು ತಮ್ಮ ಪರವಾಗಿ ಕುಟುಂಬದ ಹಿರಿಯ ಸದಸ್ಯರೊಬ್ಬರನ್ನು ಹಾಜರಾಗಲು ನಿಯೋಜಿಸಬಹುದಾಗಿದೆ.

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಡಿಯಲ್ಲಿ ಒಟ್ಟು 43.82 ಲಕ್ಷ ಮತದಾರರಿಗೆ ವಿಚಾರಣೆಯ ನೋಟಿಸ್ ನೀಡಲಾಗಿತ್ತು. ಆ ಪೈಕಿ ಸೆಪ್ಟೆಂಬರ್ 26ರ ವೇಳೆಗೆ 28.80 ಲಕ್ಷ ವಿಚಾರಣೆಗಳು ಪೂರ್ಣಗೊಂಡಿದ್ದು, ಇನ್ನು 12.82 ಲಕ್ಷ ವಿಚಾರಣೆಗಳು ಬಾಕಿಯಿದ್ದವು. ಈ ಮೊದಲು ಬಾಕಿ ಇರುವ ವಿಚಾರಣೆಗಳನ್ನು ಪೂರ್ಣಗೊಳಿಸಲು ಅಕ್ಟೋಬರ್ 12 ಕೊನೆಯ ದಿನಾಂಕವಾಗಿತ್ತು ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿತ್ತು. ಚುನಾವಣಾ ಕಚೇರಿಗಳ ಮುಂದೆ ದಿನಗೂಲಿ ಕಾರ್ಮಿಕರು, ಬಡವರು ಮತ್ತು ಹಿರಿಯ ನಾಗರಿಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಕಚೇರಿಗೆ ಅಲೆಯುವ ಪ್ರಕ್ರಿಯೆಯಿಂದ ಸಾರ್ವಜನಿಕರಿಗೆ ಅಗಾಧ ತೊಂದರೆಯಾಗುತ್ತಿದೆ ಎಂಬ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಆಯೋಗವು ಈ ಸಡಿಲಿಕೆಯ ನಿರ್ಧಾರಕ್ಕೆ ಬಂದಿದೆ ಎಂದು ವರದಿಯಾಗಿದೆ.

ದೇಶಾದ್ಯಂತ ನಡೆಯುತ್ತಿರುವ ಎಸ್‌ಐಆರ್ ಪರಿಷ್ಕರಣೆಯಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಏಕಪಕ್ಷೀಯವಾಗಿ ಕೈಬಿಡಲಾಗುತ್ತಿದೆ ಎಂಬ ಆರೋಪಗಳು ಮತ್ತು ಡಿಜಿಟಲ್ ಫಾರ್ಮ್-6 ಬದಲಾವಣೆಗಳ ಕುರಿತು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರ ನಡುವೆ ವ್ಯಕ್ತವಾಗಿದ್ದ ಆಂತರಿಕ ಭಿನ್ನಾಪ್ರಾಯಗಳ ನಡುವೆಯೇ ಕರ್ನಾಟಕ ಸಿಇಒ ಕಚೇರಿ ಈ ಕ್ರಮಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...