Homeಮುಖಪುಟಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಅರ್ಜಿ ವಿಚಾರಣೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯ ವಿರುದ್ದ ಜನವರಿ 28ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್‌ಐಆರ್ ಚುನಾವಣಾ ಆಯೋಗದ ಅಪಾರದರ್ಶಕ, ಆತುರದ, ಅಸಂವಿಧಾನಿಕ ಮತ್ತು ಕಾನೂನುಬಾಹಿರ ಕ್ರಮ ಎಂದು ಅವರು ವಾದಿಸಿದ್ದು, ಲಕ್ಷಾಂತರ ಜನರ ಹಕ್ಕು ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.

‘ತಾರ್ಕಿಕ ವ್ಯತ್ಯಾಸ’ (Logical Discrepancy-LD)ವರ್ಗದ ಅಡಿಯಲ್ಲಿ ವ್ಯಕ್ತಿಗಳ ವರ್ಗೀಕರಣದಲ್ಲಿ ಗಂಭೀರ ಅಕ್ರಮಗಳಿವೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳ ಹೊರತಾಗಿಯೂ ಅಂತಹ ವ್ಯಕ್ತಿಗಳ ಪಟ್ಟಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಧಿಕೃತ ಪೋರ್ಟಲ್‌ನಲ್ಲಿ ಎಲ್‌ಡಿ ಪಟ್ಟಿಯನ್ನು ಪ್ರಕಟಿಸದಿರುವುದು ಪಾರದರ್ಶಕತೆಯ ಕೊರತೆಗೆ ಕಾರಣವಾಗಿದೆ. ಈ ಪಟ್ಟಿಯನ್ನು ಸಾರ್ವಜನಿಕಗೊಳಿಸದ ಕಾರಣ, ಇದರಿಂದ ಬಾಧಿತರಾಗುವ ವ್ಯಕ್ತಿಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲು ಅಥವಾ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಸಿಗದಂತಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಮೇಲೆ ನನಗೆ ನಂಬಿಕೆ ಇಲ್ಲ. ಈ ಹೊಸ ಪ್ರಕ್ರಿಯೆಯ ಬದಲಾಗಿ ಕಳೆದ ವರ್ಷ ಸಿದ್ಧಪಡಿಸಲಾದ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯ ಆಧಾರದ ಮೇಲೆಯೇ ಚುನಾವಣೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...