HomeಅಂಕಣಗಳುKarnataka against SIRSIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

- Advertisement -
- Advertisement -

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ) ಕಂಡುಬಂದಿದೆ ಎಂಬ ತಾಂತ್ರಿಕ ನೆಪವೊಡ್ಡಿ ಆಯೋಗವು ಈ ನೋಟಿಸ್ ನೀಡಿದೆ.

ಕೇಂದ್ರ ಸರ್ಕಾರದ ಆರ್ಥಿಕ ಮತ್ತು ಆಡಳಿತಾತ್ಮಕ ನೀತಿಗಳನ್ನು ಸದಾ ದತ್ತಾಂಶಗಳ ಸಮೇತ ಕಟುವಾಗಿ ವಿಮರ್ಶಿಸುವ ದೇಶದ ಪ್ರಮುಖ ಚಿಂತಕರೊಬ್ಬರ ಮತದಾನದ ಹಕ್ಕನ್ನೇ ‘ತಾಂತ್ರಿಕ ದೋಷ’ದ ಹೆಸರಲ್ಲಿ ಸಂಶಯಾಸ್ಪದ ವ್ಯಾಪ್ತಿಗೆ ತಂದಿಟ್ಟಿರುವುದು ಈ ಇಡೀ ಪ್ರಕ್ರಿಯೆಯ ಉದ್ದೇಶದ ಮೇಲೆಯೇ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ದೇಶದ ಪ್ರಭಾವಿ ವ್ಯಕ್ತಿಗಳು ಮತ್ತು ಸಾಂವಿಧಾನಿಕ ಜಾಗೃತಿಯುಳ್ಳ ನಾಗರಿಕರಿಗೇ ಈ ರೀತಿಯ ನೋಟಿಸ್‌ಗಳು ಬಂದು, ಅವರು ಕಚೇರಿಗಳಿಗೆ ಅಲೆದು ಪೌರತ್ವ ಸಾಬೀತುಪಡಿಸುವ ಸ್ಥಿತಿ ನಿರ್ಮಾಣವಾಗಿರುವಾಗ, ಯಾವುದೇ ಧ್ವನಿಯಿಲ್ಲದ ಸಾಮಾನ್ಯ ಬಡವರು ಮತ್ತು ಶ್ರಮಿಕರ ಸ್ಥಿತಿ ಏನು ಎಂಬ ಆತಂಕ ವ್ಯಕ್ತವಾಗಿದೆ.

ಸಾಫ್ಟ್‌ವೇರ್ ಅಲ್ಗಾರಿದಮ್‌ಗಳ ಸಣ್ಣಪುಟ್ಟ ದೋಷಗಳನ್ನು ಅಥವಾ ದಶಕಗಳ ಹಿಂದಿನ ದಾಖಲೆಗಳ ವ್ಯತ್ಯಾಸವನ್ನು ಮುನ್ನೆಲೆಗೆ ತಂದು ‘ತಾರ್ಕಿಕ ಅಸಂಗತತೆ’ ಎಂದು ವರ್ಗೀಕರಿಸುತ್ತಿರುವ ಚುನಾವಣಾ ಆಯೋಗದ ಈ ವೈಖರಿಯು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ತಂತ್ರವೇ ಎಂಬ ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Modi Appointed EC to Favour as his Wishes
    EC is fulfilling his Wishes
    In Such a Way ED, RBI Governor and so on & so Fourth
    All the Political Power Should be in his Whims….

  2. Modi Appointed EC to Favour as his Wishes
    EC is fulfilling his Wishes
    In Such a Way ED, RBI Governor and so on & so Fourth
    All the Political Power Should be in his Whims….

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...