HomeಅಂಕಣಗಳುKarnataka against SIRSIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ ಕೇವಲ ಎರಡರಿಂದ ಮೂರು ದಿನಗಳ ಅವಧಿಯಲ್ಲಿ ಮೂವರು ನೌಕರರು ಜೀವ ಕಳೆದುಕೊಂಡಿರುವುದು ಕಂದಾಯ ಇಲಾಖೆ ಹಾಗೂ ಬಿಎಲ್‌ಓ (BLO) ಸಿಬ್ಬಂದಿ ವಲಯವನ್ನು ತಲ್ಲಣಗೊಳಿಸಿದೆ. ಮೇಲಧಿಕಾರಿಗಳ ಈ ಕಠಿಣ ಧೋರಣೆಯ ವಿರುದ್ಧ ನೌಕರರು ಈಗ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ‘ದಿ ಫೆಡರಲ್ ಕರ್ನಾಟಕ’ ವರದಿ ಮಾಡಿದೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್‌ಓ ಆಗಿ ಕಾರ್ಯನಿರ್ವಹಿಸುತ್ತಿದ್ದ ನಟರಾಜ್ ಇತ್ತೀಚೆಗೆ ಜಾರಿಯಾದ ಕಡ್ಡಾಯ ಎಸ್‌ಐಆರ್ ಪ್ರಕ್ರಿಯೆಯ ಟಾರ್ಗೆಟ್‌ ಮುಗಿಸಲು ಹಗಲಿರುಳು ಶ್ರಮಿಸುತ್ತಿದ್ದರು. ತಡರಾತ್ರಿವರೆಗೂ ನಿಗದಿತ ಕೆಲಸ ಮುಗಿಸಿ ಮನೆಗೆ ಬಂದು ಮಲಗಿದ್ದ ಅವರು, ತೀವ್ರ ಮಾನಸಿಕ ಹಾಗೂ ದೈಹಿಕ ಒತ್ತಡದಿಂದಾಗಿ ರಾತ್ರಿಯೇ ಹೃದಯಾಘಾತಕ್ಕೊಳಗಾಗಿದ್ದು, ಮುಂಜಾನೆ ಎದ್ದೇಳಲೇ ಇಲ್ಲ. ಕರ್ತವ್ಯನಿರತ ಅಧಿಕಾರಿಯ ಈ ದಿಢೀರ್ ಸಾವು ಅವರ ಕುಟುಂಬವನ್ನು ತೀವ್ರ ಆಘಾತಕ್ಕೀಡು ಮಾಡಿದೆ.

ಬೀದರ್‌ನ ಬಿಎಲ್‌ಒ ಸುನೀಲ್‌ ಹಾಗೂ ಬೆಂಗಳೂರು ದಕ್ಷಿಣದ ಬಿಎಲ್‌ಒ ನಟರಾಜು (ಫೋಟೊ ಕೃಪೆ : ದಿ ಫೆಡರಲ್)

ಇದೇ ರೀತಿಯ ಮತ್ತೊಂದು ದಾರುಣ ಘಟನೆ ಬೀದರ್ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದ್ದು, ಭಾಲ್ಕಿ ತಾಲೂಕಿನ ಮೂಲದ 45 ವರ್ಷದ ಬಿಎಲ್‌ಒ ಸುನೀಲ್, ಕಳೆದ ಹಲವು ದಿನಗಳಿಂದ ಬಿಡುವಿಲ್ಲದೆ ಎಸ್‌ಐಆರ್ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಮನೆ ಮನೆಗೆ ತೆರಳಿ ಸರ್ವೆ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ಟಂಟ್ ಅಳವಡಿಸುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇತ್ತೀಚೆಗಷ್ಟೇ ತುಮಕೂರಿನ ಗೂಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಯಾಗಿದ್ದ 26 ವರ್ಷದ ಯುವತಿ ಭುವನಾ, ಶನಿವಾರ ಮುಂಜಾನೆ ಎಸ್‌ಐಆರ್ ಕೆಲಸದ ಗಡಿಬಿಡಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ದುರ್ಮರಣಕ್ಕೀಡಾಗಿದ್ದರು. ಇಲಾಖೆಯ ಅತಿಯಾದ ಒತ್ತಡವೇ ಈ ಸಾವುಗಳಿಗೂ ಕಾರಣ ಎಂದು ಆಕ್ರೋಶಗೊಂಡಿರುವ ಕಂದಾಯ ಇಲಾಖೆ ನೌಕರರು ಸದ್ಯ ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಗ್ರಾಮ ಆಡಳಿತ ಅಧಿಕಾರಿ ಭುವನಾ

ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಈ ಎಸ್‌ಐಆರ್ ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಸಿಂಹಸ್ವಪ್ನವಾಗಿ ಪರಿಣಾಮಿಸಿದೆ ಎಂದು ನೌಕರರ ಸಂಘಟನೆಗಳು ಗಂಭೀರ ಆರೋಪ ಮಾಡಿವೆ. ಈ ಕೆಲಸವನ್ನು ಕಟ್ಟುನಿಟ್ಟಾಗಿ ಮತ್ತು ಅತ್ಯಂತ ವೇಗವಾಗಿ ಮುಗಿಸುವಂತೆ ಉನ್ನತ ಅಧಿಕಾರಿಗಳು ತೀವ್ರ ಒತ್ತಡ ಮತ್ತು ಕಿರುಕುಳ ನೀಡುತ್ತಿರುವುದರಿಂದ ನೌಕರರು ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...