HomeಅಂಕಣಗಳುKarnataka against SIRSIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

- Advertisement -
- Advertisement -

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ, ನೈಜ ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸಲು ಹೊರಟಿದೆ. ಸ್ವಂತ ಮನೆಯಲ್ಲೇ ವಾಸಿಸುತ್ತಿರುವವರನ್ನು ‘ಸ್ಥಳಾಂತರಗೊಂಡಿದ್ದಾರೆ’ ಎಂದು ನಮೂದಿಸಿ ಮತಹಕ್ಕಿಗೆ ಕುತ್ತು ತಂದಿರುವುದು ಒಂದೆಡೆಯಾದರೆ, ವಾಸ್ತವದಲ್ಲಿ ಜೀವಂತವಾಗಿರುವವರನ್ನೇ ದಾಖಲೆಗಳಲ್ಲಿ ‘ಮೃತ’ ಎಂದು ಘೋಷಿಸಿ ಅವರ ಅಸ್ತಿತ್ವವನ್ನೇ ಅಳಿಸಿಹಾಕುವಂತಹ ಎಡವಟ್ಟನ್ನು ಆಯೋಗ ಮಾಡುತ್ತಿದೆ.

ಜೀವಂತ ಇರುವ 62 ವರ್ಷದ ಆನೆ ಪ್ರಕಾಶ ಅವರನ್ನು ಮೃತ ಎಂದು ಪಟ್ಟ ಮಾಡಿದ ಚುನಾವಣಾ ಆಯೋಗ

ಇದಕ್ಕೊಂದು ಜೀವಂತ ಉದಾಹರಣೆಯಾಗಿ, ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ರಾಮಸಾಗರ ಗ್ರಾಮದ 1ನೇ ವಾರ್ಡ್‌ನಲ್ಲಿ ಸ್ವಂತ ಮನೆಯಲ್ಲೇ ವಾಸಿಸುತ್ತಿರುವ 62 ವರ್ಷದ ಆನೆ ಪ್ರಕಾಶ (ತಂದೆ: ಆನೆ ಈರಪ್ಪ) ಎಂಬವರನ್ನು ಚುನಾವಣಾ ಆಯೋಗವು ತನ್ನ ಎಎಸ್‌ಡಿಡಿಒ ಪಟ್ಟಿಯಲ್ಲಿ ‘ಮೃತಪಟ್ಟಿದ್ದಾರೆ’ (Death) ಎಂದು ನಮೂದಿಸಿ, ಮತದಾರರ ಪಟ್ಟಿಯಿಂದ ಅವರ ಹೆಸರನ್ನೇ ತೆಗೆದುಹಾಕಲು ಮುಂದಾಗಿರುವುದು SIR ನಿಂದ ಆಗುತ್ತಿರುವ ಅವಾಂತರಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

62 ವರ್ಷ ವಯಸ್ಸಾಗಿದೆ ಎಂಬ ಒಂದೇ ಕಾರಣಕ್ಕೆ, ಯಾವುದೇ ಪ್ರತ್ಯಕ್ಷ ಪರಿಶೀಲನೆ ನಡೆಸದೇ ಬಿಎಲ್‌ಒ ಹಾಗೂ ಅಧಿಕಾರಿಗಳು ಅವರನ್ನು ದಾಖಲೆಯಲ್ಲಿ ಮೃತ ಎಂದು ದಾಖಲಿಸಿದ್ದಾರೆ. ಆದರೆ, ತಮ್ಮ ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದು ಮಾಧ್ಯಮಗಳ ಮುಂದೆ ನಿಂತಿರುವ ಆನೆ ಪ್ರಕಾಶ, “ನಾನು ಸತ್ತಿಲ್ಲ, ಬದುಕಿದ್ದೇನೆ. ನನ್ನ ಸ್ವಂತ ಮನೆಯಲ್ಲೇ ಜೀವನ ನಡೆಸುತ್ತಿದ್ದೇನೆ. ನನ್ನ ಮತದಾನದ ಹಕ್ಕನ್ನು ಕಸಿಯಬೇಡಿ” ಎಂದು ತಮ್ಮ ಅಸ್ತಿತ್ವವನ್ನು ಸಾಬೀತುಪಡಿಸುತ್ತಿದ್ದಾರೆ.

ಚುನಾವಣಾ ಆಯೋಗದ SIR ನ ASDDO ಪಟ್ಟಿಯಲ್ಲಿ ಆನೆ ಪ್ರಕಾಶ ಅವರನ್ನು ಮೃತ ಎಂದು ದಾಖಲಿಸಿದೆ

ಇದು ಕೇವಲ ತಾಂತ್ರಿಕ ಪ್ರಮಾದವಲ್ಲ, ಬದಲಿಗೆ ಪ್ರಜೆಗಳ ಸಾಂವಿಧಾನಿಕ ಹಕ್ಕಿನ ಮೇಲೆಯೇ ನಡೆದಿರುವ ಗಂಭೀರ ಸವಾರಿಯಾಗಿದೆ. ಅಧಿಕಾರಿಗಳು ಶ್ರಮವಹಿಸಿ ಮನೆ ಮನೆಗೆ ತೆರಳಿ ಪರಿಶೀಲಿಸದೇ, ಕಚೇರಿಯಲ್ಲಿ ಕುಳಿತು ಮನಸೋ ಇಚ್ಛೆ ಪಟ್ಟಿ ತಯಾರಿಸುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ಕನ್ನಡಿ ಹಿಡಿದಿದೆ.

ಈ ಅಸಂಬದ್ಧ ಮತ್ತು ಅಸಂವಿಧಾನಿಕ ನಡೆಯ ವಿರುದ್ಧ ಕರ್ನಾಟಕ ಜನಶಕ್ತಿ ಸಂಘಟನೆಯ ವಸಂತರಾಜ್ ಕಹಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸ್ವಂತ ಮನೆಯಲ್ಲೇ ವಾಸಿಸುತ್ತಿರುವ ನಾಗರಿಕನನ್ನು ಸತ್ತಿದ್ದಾನೆ ಎಂದು ನಮೂದಿಸಲು ಆಯೋಗಕ್ಕೆ ಧೈರ್ಯ ಬಂದಿದ್ದಾದರೂ ಎಲ್ಲಿಂದ? ಸಂವಿಧಾನ ನೀಡಿದ ಮೂಲಭೂತ ಮತಾಧಿಕಾರವನ್ನು ಕಸಿದುಕೊಳ್ಳುವ ಅಧಿಕಾರವನ್ನು ಆಯೋಗಕ್ಕೆ ಕೊಟ್ಟವರು ಯಾರು? ಈ ಅಕ್ಷಮ್ಯ ಲೋಪಕ್ಕೆ ಚುನಾವಣಾ ಆಯೋಗ, ಸ್ಥಳೀಯ ಜನಪ್ರತಿನಿಧಿಗಳು ಅಥವಾ ಬಿಎಲ್‌ಒಗಳಲ್ಲಿ ಯಾರು ಹೊಣೆ ಹೊರುತ್ತಾರೆ? ಆಯೋಗವು ತಕ್ಷಣವೇ ಈ ಎಡವಟ್ಟಿಗೆ ಸಾರ್ವಜನಿಕ ಸ್ಪಷ್ಟನೆ ನೀಡಬೇಕು ಮತ್ತು ಆನೆ ಪ್ರಕಾಶ ಅವರಿಗೆ ತಕ್ಷಣವೇ ಮತಹಕ್ಕನ್ನು ಮರುಸ್ಥಾಪಿಸಿ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...