Homeರಾಷ್ಟ್ರSIR: ಮತದಾರರ ಪರಿಷ್ಕರಣೆ - ಇಂದು ಮೊದಲ ಹಂತದ ದಿನಾಂಕ ಘೋಷಣೆ.

SIR: ಮತದಾರರ ಪರಿಷ್ಕರಣೆ – ಇಂದು ಮೊದಲ ಹಂತದ ದಿನಾಂಕ ಘೋಷಣೆ.

- Advertisement -
- Advertisement -

ನವದೆಹಲಿ: ಭಾರತದ ಚುನಾವಣಾ ಆಯೋಗ ಇಂದು (ಸೋಮವಾರ) Special Intensive Revision (SIR)ಗಾಗಿ ಮೊದಲ ಹಂತದ ದಿನಾಂಕಗಳನ್ನು ಪ್ರಕಟಿಸಲಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಸಂಜೆ 4:15 ಕ್ಕೆ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಲಿದೆ.

ಉದ್ದೇಶಪೂರ್ವಕವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಲಕ್ಷಾಂತರ ಮತದಾರರನ್ನು ಮತದಾರ ಪಟ್ಟಿಯಿಂದ ಹೊರಗಿಡುವ ಪ್ರಯತ್ನ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ.

ಮೊದಲ ಹಂತದಲ್ಲಿ 10 ರಿಂದ 15 ರಾಜ್ಯಗಳಲ್ಲಿ SIR ಕೈಗೊಳ್ಳಲಾಗುವುದು. ಕೇಂದ್ರಾಡಳಿತ ಪ್ರದೇಶಗಳು, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಉತ್ತರಾಖಂಡ, ತಮಿಳುನಾಡಿನಲ್ಲಿ ಮೊದಲ ಹಂತದ SIR ಕೈಗೊಳ್ಳಲಾಗುವುದು ಎನ್ನಲಾಗುತ್ತಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, SIR ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪಿತೂರಿ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್‌ ಸೇರಿದಂತೆ ಬಹುತೇಕ ಎಲ್ಲಾ ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಈ ಆರೋಪವನ್ನು ಮಾಡುತ್ತಿವೆ.

ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಗುರಿಯನ್ನು ಹೊಂದಿದೆ, ಹಾಗಾಗಿಯೇ ಪಶ್ಚಿಮ ಬಂಗಾಳದಲ್ಲಿ SIR ಅನ್ನು ಜಾರಿ ಮಾಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌ ಆರೋಪಿಸಿದೆ. ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್  SIR ಅನ್ನು ಬಲವಾಗಿ ವಿರೋಧಿಸುತ್ತಿದೆ ಮತ್ತು ಆಡಳಿತ ಪಕ್ಷವು ಯಾವುದೇ “ಮಾನ್ಯ ಮತದಾರರ ಹೆಸರನ್ನು” ಪಟ್ಟಿಯಿಂದ ಅಳಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Uttarakhand |ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...