Homeಕರ್ನಾಟಕಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ಬಹುತೇಕ ಮುಂದಿನ ವಾರದೊಳಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಮೂರೂ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ಬಿರುಸಾಗಿಯೇ ಸಾಗಿದೆ. ಮೂರು ಪಕ್ಷಗಳ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಗುಂಪು ಚರ್ಚೆಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆಂಬ ಸ್ಪಷ್ಟ ಚಿತ್ರಣ ಇದುವರೆಗೂ ಗೋಚರಿಸಿಲ್ಲ. ಹೀಗಾಗಿ ಈ ಎರಡೂ ಪಕ್ಷಗಳಿಗೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಿನ ವಿಷಯವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ದಿನಕ್ಕೊಬ್ಬ ಆಕಾಂಕ್ಷಿಗಳ ಹೆಸರು ಚಾಲ್ತಿಗೆ ಬರುತ್ತಲೇ ಇವೆ.

ಬಿಜೆಪಿ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಷಯವನ್ನು ಮುನ್ನೆಲೆಗೆ ತಂದಿತು. ಅದು ಉರುಳಿಸಿದ ದಾಳ ಬಿಜೆಪಿಗೆ ಮುಳುವಾಯಿತು. ಕ್ಷೇತ್ರದ ಮತದಾರರ ಆಕ್ರೋಶಕ್ಕೆ ಗುರಿಯಾಗಬೇಕಾಯಿತು. ಇದು ಜನರಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಅದೇ ಕಾರಣಕ್ಕಾಗಿಯೇ ಕ್ಷೇತ್ರದ ಜನ ಮೊದಲು ಮದಲೂರು ಕೆರೆಗೆ ನೀರು ಹರಿಸಿ, ಬಳಿಕ ಮತ ಕೇಳಲು ಬನ್ನಿ ಎಂದು ಅಭ್ಯರ್ಥಿಗಳಿಗೆ ಸವಾಲು ಹಾಕಿದ್ದಾರೆ. ಜನರ ಈ ಸವಾಲನ್ನು ಸ್ವೀಕರಿಸಲು ಯಾವ ಅಭ್ಯರ್ಥಿಯೂ ಮುಂದೆ ಬಂದಿಲ್ಲ. ಕೇವಲ ಮತಕ್ಕಾಗಿ ಮದಲೂರು ಕೆರೆಗೆ ನೀರು ಹರಿಸುವ ವಿಷಯವನ್ನು ಪ್ರಸ್ತಾಪಿಸಿದರೆ ಜನ ಕಣ್ಣು ಮುಚ್ಚಿ ಓಟು ಹಾಕುತ್ತಾರೆಂಬ ಭ್ರಮೆಯನ್ನು ಬಿಡಬೇಕು ಎನ್ನುತ್ತಾರೆ ಕ್ಷೇತ್ರದ ಮತದಾರರು.

ಇದನ್ನೂ ಓದಿ: ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಸ್ಥಳೀಯ ಮುಖಂಡ ರಾಚಪ್ಪ ನಾನುಗೌರಿ.ಕಾಂ ಜೊತೆ ವಸ್ತುಸ್ಥಿತಿಯನ್ನು ಹಂಚಿಕೊಂಡರು.”ಬಿಜೆಪಿ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆ-ನೋವು ಆಲಿಸುತ್ತಿಲ್ಲ. ನದಿ ಜೋಡಣೆ, ಕಪ್ಪುಹಣ, ಭ್ರಷ್ಟಾಚಾರ ನಿರ್ಮೂಲನೆ ಮೊದಲಾದ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ಗೆ 60 ವರ್ಷ ಆಳ್ವಿಕೆಗೆ ಅವಕಾಶ ಕೊಟ್ಟಿದ್ದೀರಿ. ನಮಗೆ 6 ವರ್ಷ ಕೊಡಿ ಎಂದು ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಮೋದಿ ಪ್ರಧಾನಿ ಆದರು. ಜನರ ಪರವಾದ ಯೋಜನೆಗಳನ್ನೇ ಜಾರಿಗೊಳಿಸಲಿಲ್ಲ. ಅವರು ಕೊಟ್ಟ ಭರವಸೆಗಳು ನನ್ನ ಕಿವಿಯಲ್ಲಿ ಗುಯ್ ಗುಡುತ್ತಿವೆ. ಏನೂ ಕೆಲಸ ಆಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಶಿರಾ ಕ್ಷೇತ್ರಕ್ಕೆ ಬಿಜೆಪಿ ಏನು ಮಾಡಿದೆ. ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ. ಶಾಸಕ ಬಿ.ಸತ್ಯನಾರಾಯಣ್ ಅವರಿದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಿದರು. ಬಡವರ ನೋವಿಗೆ ಮರುಗುತ್ತಿದ್ದರು. ಕೆಲಸ ಮಾಡಿಕೊಡುತ್ತಿದ್ದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ನೀರಾವರಿ ಯೋಜನೆಗಳನ್ನು ಶಿರಾಕ್ಕೆ ತಂದಿದ್ದಾರೆ. ಈಗ ಬಿಜೆಪಿ ಸರ್ಕಾರ ಇದೆ  ನಿಜ. ಹಾಗೆಂದು ಎಸ್.ಆರ್. ಗೌಡಗೆ ಟಿಕೆಟ್ ನೀಡಿದರೆ ಏನು ಕೆಲಸ ಮಾಡಬಲ್ಲ? ಅವರು ಕೇವಲ ಕಳ್ಳಂಬೆಳ್ಳ ಹೋಬಳಿಗೆ ಮಾತ್ರ ಸೀಮಿತರಾಗಿದ್ದಾರೆ” ಎನ್ನುತ್ತಾರೆ ರಾಚಪ್ಪ.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಬಿಜೆಪಿ, ಜೆಡಿಎಸ್ ಪಕ್ಷಗಳು ದೇವಾಲಯಗಳಿಗೆ ಹಣ ನೀಡುತ್ತಿವೆ. ಗೌಡಗೆರೆ ಹೋಬಳಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯ ಪತಿ ಕಲ್ಕೆರೆ ರವಿ ಕುಮಾರ್ ಸುಮಾರು 25 ದೇವಾಲಯಗಳ ಗೋಪುರ ನಿರ್ಮಾಣ, ಪ್ರಾಂಗಣ ನಿರ್ಮಾಣ ಮಾಡಿಸಿಕೊಟ್ಟಿದ್ದಾರೆ. ಜನರ ಒಲವು ಅವರ ಪರವಾಗಿದೆ. ಈಗ ಬಿಜೆಪಿ ದೇವಾಲಯಗಳಿಗೆ ಹಣ ಹಂಚಿಕೆ ಮಾಡುತ್ತಿದೆ ಎಂಬ ಮಾತುಗಳು ಚರ್ಚೆಯಾಗುತ್ತಿವೆ ಎನ್ನುತ್ತಾರೆ ಕ್ಷೇತ್ರದ ಜನ.

“ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ. ಆನಂತರವೇ ಯಾರು ಸಮರ್ಥರು ಎಂಬುದನ್ನು ತೀರ್ಮಾನಿಸಿ ಒಮ್ಮತಕ್ಕೆ ಬಂದು ಮತ ಚಲಾಯಿಸುತ್ತಾರೆ. ತಕ್ಷಣವೇ ಈ ಕ್ಷೇತ್ರದ ಜನ ಗುಟ್ಟು ಬಿಟ್ಟುಕೊಡುವುದಿಲ್ಲ. ಬಿಜೆಪಿ ಹೊಸಬರನ್ನು ತಂದು ನಿಲ್ಲಿಸಿದರೆ ಬೀಳುವ ಮತಗಳು ಮತ್ತೊಂದು ಕಡೆ ಚಲಾವಣೆಗೊಳ್ಳುತ್ತವೆ” ಇವು ಕ್ಷೇತ್ರದ ಮತದಾರರ ಆಂತರ್ಯದ ಮಾತುಗಳು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳು ಮತ್ತು ಸುಗ್ರೀವಾಜ್ಞೆಗಳನ್ನು ಅಂಗೀಕರಿಸಿವೆ. ರೈತ, ಕಾರ್ಮಿಕ, ದಲಿತ ಸಂಘಟನೆಗಳು ರೈತ ಕಾರ್ಮಿಕ ಮಸೂದೆಗಳನ್ನು ವಾಪಸ್ ಪಡೆಯುವಂತೆ ಹೋರಾಟ ಮಾಡುತ್ತಿವೆ. ಇದು ಜನರ ಮೇಲೆ ಪರಿಣಾಮ ಬೀರಿದ್ದು ಮತಗಳು ಕೂಡ ಆಡಳಿತ ಪಕ್ಷಕ್ಕೆ ವ್ಯತಿರಿಕ್ತವಾಗಿ ಬೀಳಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...