Homeಚಳವಳಿಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾ ಉಪ ಚುನಾವಣೆಯಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆ ಘೋಷಣೆಯಾದ ಬಳಿಕ ಪಕ್ಷ ಬಿಟ್ಟು ಪಕ್ಷಕ್ಕೆ ಸೇರ್ಪಡೆಯಾಗುವ ಮುಖಂಡರ ಸಂಖ್ಯೆ ಹೆಚ್ಚತೊಡಗಿದೆ. ಕಳೆದ ಎರಡು ದಿನಗಳಿಂದ ಈ ಬೆಳವಣಿಗಳು ನಡೆಯತೊಡಗಿವೆ. ಇಂದು 15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾದಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ. ಈ ಬೆಳವಣಿಗೆ ಉಪ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೂ ಕಾರಣವಾಗಲಿದೆ.

ಮಾಜಿ ಪುರಸಭಾ ಅಧ್ಯಕ್ಷ ಹಾಗೂ ಕುಂಚಿಟಿಗರ ಸಂಘದ ತಾಲೂಕು ಅಧ್ಯಕ್ಷ ತ್ಯಾಗರಾಜು, ಜೆಡಿಎಸ್ ಮುಖಂಡ ರವಿಕುಮಾರ್ ಕಲ್ಕೆರೆ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ವಿನಯ್, ಮಾಗೋಡು ಮತ್ತು ತಾವರೆಕೆರೆ ವಿಎಸ್ಎಸ್ಎನ್ ಅಧ್ಯಕ್ಷರಾದ ಶ್ರೀರಂಗಪ್ಪ, ಕೃಷ್ಣಮೂರ್ತಿ, ಮಾಜಿ ಮಂಡಲ್ ಪಂಚಾಯತ್ ಅಧ್ಯಕ್ಷ ಚಿನ್ನಪ್ಪ, ಶಿರಾ ಬಲಿಜ ಸಂಘದ ಅಧ್ಯಕ್ಷ ಶ್ರೀರಂಗಪ್ಪ, ಯುವ ಬಲಿಜ ಸಂಘದ ಅಧ್ಯಕ್ಷ ವಿನಯ್ (ಕಿಶೋರ್), ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಆದರ್ಶ, ವಕೀಲರ ಸಂಘದ ಮಾಜಿ ಅಧ್ಯಕ್ಷ ಸರ್ವೇಶ್ ನಗರ ಯುವ ಜೆಡಿಎಸ್ ಅಧ್ಯಕ್ಷ ಮಣಿಕಂಠ, ತಾಲೂಕು ಪಂಚಾಯಿತಿ  ಮಾಜಿ ಅಧ್ಯಕ್ಷ ರಾಘವೇಂದ್ರ, ಜೆಡಿಎಸ್ ಮುಖಂಡರಾದ ಡಾಬ ಬಾಬು, ಶರತ್ ಮತ್ತು ರಾಘವೇಂದ್ರ ಕಾಂಗ್ರೆಸ್ ಸೇರ್ಪಡೆಯಾಗಿರುವ ಮುಖಂಡರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ವಿವಿಧ ಜಾತಿಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆಯಿಂದ ಜೆಡಿಎಸ್‌ಗೆ ತೀವ್ರ ಹಿನ್ನಡೆಯಾದಂತೆ ಆಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರ ಪತಿ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆಗೊಂಡು ಜೆಡಿಎಸ್‌ಗೆ ದೊಡ್ಡ ಪೆಟ್ಟನ್ನೇ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಮತ್ತು ತಾಲೂಕಿನಲ್ಲಿ ಪ್ರಮುಖ ಮುಖಂಡ ರಾಗಿರುವ ರವಿಕುಮಾರ್ ಗೌಡಗೆರೆ ಹೋಬಳಿಯಲ್ಲಿ ಸಾಕಷ್ಟು ಕೆಲಸ ಮಾಡಿರುವ ಬಗ್ಗೆ ಕ್ಷೇತ್ರದ ಜನರಲ್ಲಿ ಒಳ್ಳೆಯ ಭಾವನೆ ಇದೆ.

ರವಿಕುಮಾರ್ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳಲ್ಲಿ ಕೂಡ ಒಬ್ಬರಾಗಿದ್ದರು. ಜೊತೆಗೆ ಪಕ್ಷದ ವರಿಷ್ಠರೇ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರನ್ನು ಅಧಿಕಾರದಿಂದ ಇಳಿಸಲು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕುವಂತೆ ಸದಸ್ಯರಿಗೆ ಒಪ್ಪಿಗೆ ನೀಡಿದ್ದರು. ಇದರಿಂದ ರವಿಕುಮಾರ್ ಅಸಮಾಧಾನ ಹೊರಹಾಕಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮೃದು ಧೋರಣೆ ಹೊಂದಿದ್ದರಿಂದ ಜೆಡಿಎಸ್ ವರಿಷ್ಠರು ಜಿಪಂ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸುವ ತಂತ್ರಕ್ಕೆ ಮುಂದಾಗಿದ್ದರು.

ರವಿಕುಮಾರ್‌ ಕಲ್ಕೆರೆ, ಜೆಡಿಎಸ್ ಮುಖಂಡ

ಈಗ ರವಿಕುಮಾರ್ ಜೆಡಿಎಸ್ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಮತ್ತಷ್ಟು ಬಲ ತಂದುಕೊಟ್ಟಿದೆ. ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತಗಳು 13 ಸಾವಿರ ಇವೆ. ರವಿಕುಮಾರ್ ಬಗ್ಗೆ ಶಿರಾದಲ್ಲಿ ಒಳ್ಳೆಯ ಹೆಸರು ಕೂಡ ಇದೆ. ಇದು ಕಾಂಗ್ರೆಸ್  ಪಕ್ಷಕ್ಕೆ ವರವಾಗಿ ಪರಿಣಮಿಸಿದೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಹಾಗಾಗಿ ಅವಿಶ್ವಾಸ ಗೊತ್ತುವಳಿ ಪರ ಮತಗಳ ಕೊರತೆಯಾಗಿ ಬಿದ್ದುಹೋಗಲಿದೆ. ಅಧ್ಯಕ್ಷರು ಮುಂದಿನ ಅವಧಿಗೂ ಮುಂದುವರಿಯಲು ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ನಗರದಲ್ಲಿ ಬಲಿಜ ಸಮುದಾಯದ ಮತಗಳು ಏಳು ಸಾವಿರದಷ್ಟಿವೆ. ಈ ಸಮುದಾಯದ ಸಂಘದ ಅಧ್ಯಕ್ಷರು, ಯುವಕ ಸಂಘದ ಅಧ್ಯಕ್ಷರೂ ಮತ್ತು ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಸೇರ್ಪಡೆ ಆಗಿರುವುದು ಜಯಚಂದ್ರ ಅವರ ಗೆಲುವಿನ ಹಾದಿಯನ್ನು ಸುಗಮಗೊಳಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಪುರಸಭಾ ಅಧ್ಯಕ್ಷರು ಮತ್ತು ಕುಂಚಿಟಿಗರ ಸಂಘದ ಅಧ್ಯಕ್ಷರು, ವಿಎಸ್ಎಸ್ಎನ್‌ ಅಧ್ಯಕ್ಷರು, ಯುವ ಮುಖಂಡರಿಗೆ ಅವರದೇ ಆದ ಬೆಂಬಲಿಗರ ಮತ್ತು ಅಭಿಮಾನಿಗಳ ಪಡೆ ಇದೆ. ಇದು ಜೆಡಿಎಸ್ ಪಕ್ಷಕ್ಕೆ ಹೊಡೆತ ನೀಡುವುದು ಗ್ಯಾರೆಂಟಿ.

ಇನ್ನು ಮದಲೂರು ಜಿಲ್ಲಾ ಪಂಚಾಯತ್ ಸದಸ್ಯೆ ಪತಿ, ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶ್ರೀರಂಗ ಯಾದವ್ ನಾದೂರು ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ, ಜೆಡಿಎಸ್ ಮುಖಂಡ ಶ್ರೀರಂಗ ಯಾದವ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ ನವೆಂಬರ್ 3 ಕ್ಕೆ: 56 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...