Homeಕರ್ನಾಟಕಶಿರಾ: ಕಾಂಗ್ರೆಸ್ ಬಿಜೆಪಿ ನಡುವೆ ನಿಕಟ ಪೈಪೋಟಿ - ಆರ್‌.ಆರ್‌.ನಗರ: ಬಿಜೆಪಿಗೆ ಭರ್ಜರಿ ಮುನ್ನಡೆ!

ಶಿರಾ: ಕಾಂಗ್ರೆಸ್ ಬಿಜೆಪಿ ನಡುವೆ ನಿಕಟ ಪೈಪೋಟಿ – ಆರ್‌.ಆರ್‌.ನಗರ: ಬಿಜೆಪಿಗೆ ಭರ್ಜರಿ ಮುನ್ನಡೆ!

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ನಡುವೆ ನಿಕಟ ಪೈಪೋಟಿ ನಡೆಯುತ್ತಿದೆ. ಇನ್ನು ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನಿರತ್ನ ಭರ್ಜರಿ ಮುನ್ನಡೆಯನ್ನು ಸಾಧಿಸುತ್ತಿದ್ದಾರೆ.

ಶಿರಾದಲ್ಲಿ ರಾಜೇಶ್‌ಗೌಡ ಅವರಿಗೆ 16909 ಮತಗಳು ಬಂದಿದ್ದು, ಟಿ.ಬಿ.ಜಯಚಂದ್ರ ಅವರಿಗೆ 15515 ಮತಗಳು ಬಂದಿವೆ. ಹಾಗಾಗಿ ಇವರಿಬ್ಬರ ನಡುವೆ ನಿಕಟ ಪೈಪೋಟಿ ನಡೆಯತ್ತಿದೆ. ಇನ್ನು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ 10348 ಮತಗಳು ದಕ್ಕಿವೆ.

ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ಆರ್.ಆರ್‌.ನಗರದಲ್ಲಿ ಮುನಿರತ್ನ 50387 ಮತಗಳನ್ನು ಪಡೆದಿದ್ದು, ಕುಸುಮಾ 25244 ಮತಗಳನ್ನು ಗಳಿಸಿದ್ದಾರೆ. ಇನ್ನು ಅತ್ಯಂತ ಕಡಿಮೆ ಮತಗಳನ್ನು ಗಳಿಸಿರುವ ಜೆಡಿಎಸ್ ಅಭ್ಯರ್ಥಿ ಸತ್ಯನಾರಾಯಣ 1711 ಮತಗಳನ್ನಷ್ಟೆ ಪಡೆದಿದ್ದಾರೆ.

ನವೆಂಬರ್ 3ರಂದು ಆರ್‌.ಆರ್‌. ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ಹಾಗೂ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ಅಕ್ಟೋಬರ್ 28ರಂದು ಚುನಾವಣೆ ನಡೆದಿತ್ತು. ಈ ಎರಡೂ ಚುನಾವಣೆಗಳ ಮತ ಎಣಿಕೆ ಕಾರ್ಯ ಈಗಾಗಲೇ ಆರಣಭವಾಗಿದ್ದು, ಕ್ಷೇತ್ರದ ಮತದಾರರು, ಕೈ ಹಿಡಿಯಲಿದ್ದಾರಾ, ತೆನೆ ಹೊರಲಿದ್ದಾರಾ ಅಥವಾ ಕಮಲ ಮುಡಿಯಲಿದ್ದಾರಾ ಎಂಬುದು ಇನ್ನೇನು ಕೆಲವೇ ಕ್ಷಣಗಳಿಂದ ತಿಳಿಯುತ್ತಾ ಹೋಗುತ್ತದೆ. ಮಧ್ಯಾಹ್ನದ ವೇಳೆಗೆ ಗೆಲುವು ಯಾರಿಗೆಂದು ಬಹುಪಾಲು ತಿಳಿಯಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...