Homeಮುಖಪುಟಜಾರಿ ನಿರ್ದೇಶನಾಲಯದಿಂದ ಸಿಸೋಡಿಯಾ ಅರೆಸ್ಟ್‌

ಜಾರಿ ನಿರ್ದೇಶನಾಲಯದಿಂದ ಸಿಸೋಡಿಯಾ ಅರೆಸ್ಟ್‌

- Advertisement -
- Advertisement -

ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮ ಆರೋಪಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ.

ಆಪಾದಿತ ಹಗರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಸಿಸೋಡಿಯಾ ಪ್ರಸ್ತುತ ಸಿಬಿಐನ ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿ ನ್ಯಾಯಾಲಯವು ಶುಕ್ರವಾರ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಅದಕ್ಕೂ ಒಂದು ದಿನ ಮುಂಚಿತವಾಗಿ ಈ ಬೆಳವಣಿಗೆಗಳು ಆಗಿವೆ.

ಬಂಧನಕ್ಕೊಳಗಾದ ಎರಡು ದಿನಗಳ ನಂತರ, ಸಿಸೋಡಿಯಾ ಅವರು ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರೊಂದಿಗೆ ದೆಹಲಿ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದರು. ಸತ್ಯೇಂದ್ರ ಜೈನ್‌ ಅವರು ಅಕ್ರಮ ಹಣ ವರ್ಗಾವಣೆಯ ಪ್ರತ್ಯೇಕ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಶದಲ್ಲಿದ್ದರು.

ಗುರುವಾರ ಟ್ವೀಟ್ ಮಾಡಿರುವ ಕೇಜ್ರಿವಾಲ್, “ಸಿಸೋಡಿಯಾ ಅವರನ್ನು ಜಾಮೀನು ವಿಚಾರಣೆಗೆ ಒಂದು ದಿನ ಮೊದಲು ಜಾರಿ ನಿರ್ದೇಶನಾಲಯವು ಬಂಧಿಸಿದೆ. ಕೇಂದ್ರೀಯ ಏಜೆನ್ಸಿಗಳು ಯಾವುದೇ ಬೆಲೆ ತೆತ್ತಾದರೂ ಸಿಸೋಡಿಯಾ ಅವರನ್ನು ಕಸ್ಟಡಿಯಲ್ಲಿಡಲು ಬಯಸುತ್ತವೆ” ಎಂದು ದೂರಿದ್ದಾರೆ.

“ಮನೀಶ್‌ ಅವರನ್ನು ಕಸ್ಟಡಿಯಲ್ಲಿಡಬೇಕು ಎಂಬುದು ಅವರ ಏಕೈಕ ಉದ್ದೇಶವಾಗಿದೆ. ಅದಕ್ಕಾಗಿ ಪ್ರತಿದಿನ ಸುಳ್ಳು ಕೇಸ್‌ಗಳನ್ನು ಹೆಣೆಯಲಾಗುತ್ತಿದೆ” ಎಂದಿರುವ ಕೇಜ್ರಿವಾಲ್, “ಜನರು ನೋಡುತ್ತಿದ್ದಾರೆ. ಅವರು ಪ್ರತಿಕ್ರಿಯೆ ನೀಡುತ್ತಾರೆ” ಎಂದು ತಿಳಿಸಿದ್ದಾರೆ.

ನವೆಂಬರ್ 2021 ರಲ್ಲಿ ಜಾರಿಗೆ ಬಂದ ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಈ ನೀತಿಯಡಿಯಲ್ಲಿ 849 ಮದ್ಯದ ಅಂಗಡಿಗಳ ಪರವಾನಗಿಗಳನ್ನು ಖಾಸಗಿ ಸಂಸ್ಥೆಗಳಿಗೆ ಮುಕ್ತ ಬಿಡ್ಡಿಂಗ್ ಮೂಲಕ ನೀಡಲಾಯಿತು. ಇದಕ್ಕೂ ಮೊದಲು ನಾಲ್ಕು ಸರ್ಕಾರಿ ನಿಗಮಗಳು 475 ಮದ್ಯದಂಗಡಿಗಳನ್ನು ನಡೆಸುತ್ತಿದ್ದವು. ಉಳಿದ 389 ಅಂಗಡಿಗಳು ಖಾಸಗಿಯದ್ದಾಗಿದ್ದವು ಎಂದು ಆಪಾದಿಸಲಾಗಿದೆ.

ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಜುಲೈ 30ರಂದು ಆಮ್ ಆದ್ಮಿ ನೇತೃತ್ವದ ಸರ್ಕಾರವು ನೀತಿಯನ್ನು ಹಿಂತೆಗೆದುಕೊಂಡಿತು.

ಆಪಾದಿತ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಪ್ರತಿಸ್ಪರ್ಧಿಗಳನ್ನು ಮುಗಿಸಲು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

ಸಿಸೋಡಿಯಾ ಬಂಧನವನ್ನು ಖಂಡಿಸಿ ಒಂಬತ್ತು ಪ್ರತಿಪಕ್ಷಗಳ ನಾಯಕರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...