Homeಮುಖಪುಟಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

ಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

- Advertisement -
- Advertisement -

ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಆರು ಕ್ರೈಸ್ತ ಸನ್ಯಾಸಿನಿಗಳಲ್ಲಿ ಒಬ್ಬರಾದ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಅವರು ಅಧಿಕೃತವಾಗಿ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೊಟ್ಟಾಯಂನ ಮಿಷನರೀಸ್ ಆಫ್ ಜೀಸಸ್ ಕಾನ್ವೆಂಟ್‌ನ ಸನ್ಯಾಸಿನಿಯೊಬ್ಬರು, 2014ರಿಂದ 2016ರ ನಡುವೆ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಕ್ಯಾಥೋಲಿಕ್ ಚರ್ಚ್‌ನಿಂದ ತೀವ್ರ ಒತ್ತಡ ಎದುರಿಸುತ್ತಿದ್ದರೂ, ಸಿಸ್ಟರ್ ಅನುಪಮಾ ಸೇರಿದಂತೆ ಇತರ ಆರು ಮಂದಿ ಸನ್ಯಾಸಿನಿಗಳು ಸಂತ್ರಸ್ತೆಯ ಬೆಂಬಲಕ್ಕೆ ನಿಂತು ಹೋರಾಡಿದ್ದರು.

ಆದರೂ, ಅತ್ಯಾಚಾರ ಪ್ರಕರಣ ದಾಖಲಾಗಿ ಮೂರು ತಿಂಗಳು ಕಳೆದರೂ ಜಲಂಧರ್‌ನ ಲ್ಯಾಟಿನ್ ಕ್ಯಾಥೋಲಿಕ್ ಡಯಾಸಿಸ್‌ನ ಮುಖ್ಯಸ್ಥರಾಗಿದ್ದ ಬಿಷಪ್ ಅವರನ್ನು ಬಂಧಿಸಿರಲಿಲ್ಲ.

ನಂತರ, ಸಿಸ್ಟರ್ ಅನುಪಮಾ ನೇತೃತ್ವದಲ್ಲಿ ಸನ್ಯಾಸಿಗಳು ಕೊಚ್ಚಿಯಲ್ಲಿ ಸಾರ್ವಜನಿಕ ಧರಣಿ ಪ್ರತಿಭಟನೆ ನಡೆಸಿದ್ದರು. ನಂತರ ಸಾರ್ವಜನಿಕ ವಲಯದಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ, ಭಾರತದ ಕ್ಯಾಥೋಲಿಕ್ ಚರ್ಚ್‌ನ ಅಧಿಕಾರವನ್ನು ಸನ್ಯಾಸಿನಿಯರ ಗುಂಪೊಂದು ಪ್ರಶ್ನಿಸಿದ್ದು ಇದೇ ಮೊದಲ ಬಾರಿಯಾಗಿತ್ತು.

2019ರಲ್ಲಿ, ಬಿಷಪ್ ವಿರುದ್ದ ಹೋರಾಟ ನಡೆಸಿದ್ದ ಆರು ಸನ್ಯಾಸಿನಿಗಳಲ್ಲಿ ನಾಲ್ವರಿಗೆ ಚರ್ಚ್ ವರ್ಗಾವಣೆ ಆದೇಶ ನೀಡಿತ್ತು. ಈ ವೇಳೆ ಸನ್ಯಾಸಿನಿಯರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು, ಬಿಷಪ್ ವಿರುದ್ದ ಪ್ರಕರಣದ ವಿಚಾರಣೆಯ ಅಂತ್ಯದವರೆಗೆ ತಮ್ಮ ವರ್ಗಾವಣೆ ಆದೇಶವನ್ನು ತಡೆಯುವಂತೆ ಕೋರಿದ್ದರು.

ಈ ಸಂದರ್ಭದಲ್ಲಿ ಸನ್ಯಾಸಿನಿಯರು ಭಾರೀ ವಿರೋಧ ಮತ್ತು ಬಹಿಷ್ಕಾರವನ್ನು ಎದುರಿಸಬೇಕಾಯಿತು. ಆದರೂ, ಅವರು ತಮ್ಮ ಕಾನ್ವೆಂಟ್ ಬಿಡಲು ನಿರಾಕರಿಸಿದ್ದರು. ಸಂತ್ರಸ್ತೆ ಸನ್ಯಾಸಿನಿಯ ಬೆನ್ನಿಗೆ ದೃಢವಾಗಿ ನಿಂತಿದ್ದರು.

ಈ ವೇಳೆ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಸಂತ್ರಸ್ತೆ ಸನ್ಯಾಸಿನಿ, “ನನ್ನನ್ನು ಇತರ ಸನ್ಯಾಸಿನಿಗಳಿಂದ ಪ್ರತ್ಯೇಕಿಸಲು, ಕಿರುಕುಳ ಮತ್ತು ಚಿತ್ರಹಿಂಸೆ ನೀಡಲು ಚರ್ಚ್ ಪ್ರಯತ್ನಿಸುತ್ತಿದೆ. ಅಂತಹ ಪರಿಸ್ಥಿತಿ ಎದುರಾದರೆ ನನ್ನ ಜೀವಕ್ಕೆ ಅಪಾಯವಿದೆ” ಎಂದು ಆರೋಪಿಸಿದ್ದರು.

ಈ ನಡುವೆ 2022ರಲ್ಲಿ, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಕೊಟ್ಟಾಯಂನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು.

ಆಗ, ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಸ್ಟರ್ ಅನುಪಮಾ “ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೂ ನಾವು ಹೋರಾಟವನ್ನು ಮುಂದುವರಿಸುತ್ತೇವೆ. ನಾವು ಸಾಯಬೇಕಾಗಿ ಬಂದರೂ ಸರಿ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಿಷಪ್ ಫ್ರಾಂಕೊ ಹಣ ಮತ್ತು ತೋಳ್ಬಲ ಎರಡನ್ನೂ ಹೊಂದಿರುವ ವ್ಯಕ್ತಿ” ಎಂದು ಹೇಳಿದ್ದರು.

ಬಳಿಕ ಸಂತ್ರಸ್ತೆ ಸನ್ಯಾಸಿನಿ ಕೊಟ್ಟಾಯಂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರಕರಣ ಹೈಕೋರ್ಟ್‌ನಲ್ಲಿ ಬಾಕಿಯಿದೆ.

ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ಹೋರಾಟ ನಿರತ ಎಲ್ಲಾ ಸನ್ಯಾಸಿನಿಗಳು ತಮ್ಮ ಕಾನ್ವೆಂಟ್‌ನಲ್ಲೇ ಉಳಿದು ಹೋರಾಟ ಮುಂದುವರಿಸುವುದಾಗಿ ಹೇಳಿದ್ದರು. ಆದಾಗ್ಯೂ, ಕಳೆದ ಮೂರು ವರ್ಷಗಳಲ್ಲಿ ಸಿಸ್ಟರ್ ಅನುಪಮಾ ಅಲ್ಲದೆ, ಇತರ ಇಬ್ಬರು ಸನ್ಯಾಸಿನಿಗಳು ಕೂಡ ಸನ್ಯಾಸಿನಿತ್ವವನ್ನು ತ್ಯಜಿಸಿ ಕಾನ್ವೆಂಟ್ ತೊರೆದಿದ್ದಾರೆ.

ಪೋಕ್ಸೋ ಕಾಯ್ದೆಯಡಿ ತೀವ್ರ ಲೈಂಗಿಕ ದೌರ್ಜನ್ಯಕ್ಕೆ 20 ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...