Homeಕರ್ನಾಟಕಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್, ಹೆಚ್‌ಐವಿ ಹರಡಿದ ಆರೋಪ : ಚಾರ್ಜ್‌ಶೀಟ್ ಸಲ್ಲಿಸಿದ...

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್, ಹೆಚ್‌ಐವಿ ಹರಡಿದ ಆರೋಪ : ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

- Advertisement -
- Advertisement -

ಆರ್‌.ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ ವರದಿಯಾಗಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ದೋಷಾರೋಪ ಪಟ್ಟಿ 146 ಸಾಕ್ಷಿಗಳ ಹೇಳಿಕೆಗಳು ಮತ್ತು 850 ದಾಖಲೆಗಳನ್ನು ಒಳಗೊಂಡಿದೆ. 146 ಸಾಕ್ಷಿಗಳ ಪೈಕಿ 8 ಮಂದಿ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಹನಿಟ್ರ್ಯಾಪ್ ಮಾಡಿ ರೆಕಾರ್ಡ್‌ ಮಾಡಿದ್ದಾರೆ ಎನ್ನಲಾದ ಕೆಲವು ವಿಡಿಯೋಗಳನ್ನೂ ವಶಪಡಿಸಿಕೊಂಡಿದ್ದಾರೆ. ಅವುಗಳನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಪರಿಚಯ ಮಾಡಿಕೊಂಡ ಮುನಿರತ್ನ ಅವರು, ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಅದನ್ನು ವಿಡಿಯೋ ಮಾಡಿಟ್ಟುಕೊಂಡು ನನ್ನನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಅವರ ರಾಜಕೀಯ ವಿರೋಧಿಗಳನ್ನು ಹೆಚ್‌ಐವಿ ಪೀಡಿತ ಮಹಿಳೆಯರ ಮೂಲಕ ಹನಿಟ್ರ್ಯಾಪ್ ಮಾಡಲು ಸಹಾಯ ಮಾಡುವಂತೆ ನನಗೆ ಒತ್ತಡ ಹೇರಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು.

ಪ್ರಕರಣದ ತನಿಖೆಯ ವೇಳೆ ಮುನಿರತ್ನ ಅವರು ಇನ್ಸ್‌ಪೆಕ್ಟರ್ ಐಯ್ಯನರೆಡ್ಡಿ ಜೊತೆಗೂಡಿ ಮಾಜಿ ಕಂದಾಯ ಸಚಿವ ಹಾಗೂ ಹಾಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಹೆಚ್‌ಐವಿ ಹರಡಲು ಸಂಚು ರೂಪಿಸಿದ್ದರು. ಅದರೆ, ಅದು ವಿಫಲವಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ಯಾವುದೇ ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಪ್ರಿಯಾಂಕ್ ಖರ್ಗೆ ಆಪ್ತನಿಂದ ಬೆದರಿಕೆ ಪ್ರಕರಣ : ಇಬ್ಬರು ಹೆಡ್‌ ಕಾನ್‌ಸ್ಟೇಬಲ್‌ಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...