Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

- Advertisement -
- Advertisement -

ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ.

ಡಿವೈಎಸ್‌ಪಿ ಸತ್ಯ ನಾರಾಯಣ್ ಸಿಂಗ್, ಸುಮಾರಾಣಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಐದು ವಾಹನಗಳಲ್ಲಿ ರೇವಣ್ಣ ನಿವಾಸಕ್ಕೆ ಬಂದ ಎಸ್‌ಐಟಿ ತಂಡ ಪರಿಶೀಲನೆ ನಡೆಸಿದೆ. ಹಾಸನ ಎಎಸ್ಪಿ ತಮ್ಮಯ್ಯ ಹಾಗೂ ಸ್ಥಳೀಯ ಪೊಲೀಸರು ಈ ವೇಳೆ ಇದ್ದರು.

ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದರು. ಈ ಹಿನ್ನೆಲೆ, ರೇವಣ್ಣ ನಿವಾಸದ ಅಡುಗೆ ಮನೆ, ಬೆಡ್‌ ರೂಂ, ಸ್ಟೋರ್ ರೂಂ ಸೇರಿದಂತೆ ಎಲ್ಲೆಡೆ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದ ವೇಳೆ ಹೆಚ್‌.ಡಿ ರೇವಣ್ಣ ಪತ್ನಿ ಭವಾನಿ, ರೇವಣ್ಣ ಪರ ವಕೀಲರು ಮತ್ತು ಜೆಡಿಎಸ್ ನಾಯಕರು ಸ್ಥಳದಲ್ಲಿ ಹಾಜರಿದ್ದರು. ಮನೆಯ ಸುತ್ತ ಪೊಲೀಸರು ಬಿಗಿ ಬಂದೋ ಬಸ್ತ್ ಏರ್ಪಡಿಸಿದ್ದರು ಎಂದು ತಿಳಿದು ಬಂದಿದೆ.

ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರು ನೀಡಿದ್ದರು. ಪ್ರಕರಣದ ಎಫ್‌ಐಆರ್‌ನಲ್ಲಿ ಹೆಚ್‌.ಡಿ ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಗಳಾಗಿದ್ದಾರೆ.

ದೂರು ನೀಡಿರುವ ಮಹಿಳೆಯನ್ನು ಅಪಹರಿಸಿದ ಬಗ್ಗೆ ಆಕೆಯ ಮಗ ಮೈಸೂರಿನ ಕೆ.ಆರ್ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮತ್ತೋರ್ವ ಆರೋಪಿ ಸತೀಶ್ ಬಾಬಣ್ಣಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಜ್ವಲ್ ವಿರುದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದಾರೆ. ಗನ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿರುವುದಾಗಿ ಹೇಳಿದ್ದಾರೆ. ಈ ಸಂಬಂಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ : ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...