Homeಮುಖಪುಟಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

ಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ‘ಧರ್ಮ ಸಂಸದ್’ ವೇಳೆ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಪ್ರಕರಣದ ತನಿಖೆಗೆ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.

“ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದ ಬಗ್ಗೆ ತನಿಖೆ ನಡೆಸಲು ಎಸ್‌ಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ 5 ಸದಸ್ಯರ ಎಸ್‌ಐಟಿಯನ್ನು ರಚಿಸಲಾಗಿದೆ. ತಪ್ಪಿತಸ್ಥರೆಂದು ಪತ್ತೆಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಗರ್ವಾಲ್ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ), ಕರಣ್ ಸಿಂಗ್ ನಾಗನ್ಯಾಲ್ ಹೇಳಿದ್ದಾರೆ.

ಹರಿದ್ವಾರ ಪೊಲೀಸರು ದ್ವೇಷಪೂರಿತ ಭಾಷಣದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಹಿಂದೂ ಮುಖಂಡರಾದ ಯತಿ ನರಸಿಂಹಾನಂದ ಮತ್ತು ಸಾಗರ್ ಸಿಂಧುರಾಜ್ ಅವರ ಹೆಸರನ್ನು ಸೇರಿಸಿದ್ದಾರೆ.

ಇದನ್ನೂ ಓದಿ: ಹರಿದ್ವಾರದ ದ್ವೇಷ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಕ್ರಮಕ್ಕಾಗಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದ 76 ಖ್ಯಾತ ವಕೀಲರು

“ವೈರಲ್ ವೀಡಿಯೋ ಕ್ಲಿಪ್ ಆಧಾರದ ಮೇಲೆ, ಹೆಚ್ಚಿನ ತನಿಖೆಯ ನಂತರ, ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ಇನ್ನೂ ಇಬ್ಬರ ಹೆಸರುಗಳು, ಸಾಗರ್ ಸಿಂಧು ಮಹಾರಾಜ್ ಮತ್ತು ಯತಿ ನರಸಿಂಹಾನಂದ ಗಿರಿ ಅವರನ್ನು ಎಫ್‌ಐಆರ್‌ನಲ್ಲಿ ಸೆಕ್ಷನ್ 295 ಎ ಸೇರಿಸಲಾಗಿದೆ” ಎಂದು ಉತ್ತರಾಖಂಡದ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಧರ್ಮ್ ದಾಸ್, ಅನ್ನಪೂರ್ಣ, ವಾಸಿಂ ರಿಜ್ವಿ ಅಕಾ ಜಿತೇಂದ್ರ ತ್ಯಾಗಿ ಮತ್ತು ಇತರ ಕೆಲವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಈ ಹಿಂದೆ ತಿಳಿಸಿದ್ದರು.

ಕಳೆದ ತಿಂಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಉತ್ತರ ಪ್ರದೇಶ ಕೇಂದ್ರ ಶಿಯಾ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷರಾಗಿದ್ದ ರಿಜ್ವಿ ವಿರುದ್ಧ ಉತ್ತರಾಖಂಡ್ ಪೊಲೀಸರು ಎಫ್‌ಐಆರ್ ದಾಖಳಿಸಿದ್ದಾರೆ. ಐಪಿಸಿಯ ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿರುವ ಹಲವು ಬಲಪಂಥೀಯ ನಾಯಕರು ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಈ ಭಾಷಣದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ ಮಾಜಿ ಮುಖ್ಯಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...