Homeಕರ್ನಾಟಕಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೊನೆಗೂ ಬಂಧಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಬಹಿರಂಗಗೊಳ್ಳುತ್ತಿದ್ದಂತೆ ಜರ್ಮನಿಗೆ ಹಾರಿದ್ದ ಪ್ರಜ್ವಲ್, 34 ದಿನಗಳ ಬಳಿಕ ನಿನ್ನೆ (ಮೇ 30) ಭಾರತಕ್ಕೆ ಮರಳಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಜರ್ಮನಿಯ ಮ್ಯೂನಿಕ್ ನಗರದಿಂದ ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಟಿಕೆಟ್ ಬುಕ್ ಮಾಡಿಕೊಂಡಿದ್ದ ಪ್ರಜ್ವಲ್, ಮಧ್ಯರಾತ್ರಿ 12:30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಾಧ್ಯತೆ ಇದ್ದಿದ್ದರಿಂದ ಎಸ್‌ಐಟಿ ಅಧಿಕಾರಿಗಳ ತಂಡ ವಿಮಾನ ನಿಲ್ದಾಣದಲ್ಲಿಯೇ ಮೊಕ್ಕಾಂ ಹೂಡಿತ್ತು. ಪ್ರಜ್ವಲ್ ಆಗಮಿಸುತ್ತಿದ್ದಂತೆ ಬಂಧಿಸಿ ಕರೆದೊಯ್ದಿದೆ.

ಹೊಳೆನರಸೀಪುರ ಟೌನ್ ಮತ್ತು ಸಿಐಡಿ ಠಾಣೆಗಳಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಇವರ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ಹಾಗೂ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಇಂದು( ಮೇ 31) ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ, ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿಚಾರಣೆ ಅಗತ್ಯವಿರುವುದರಿಂದ ಕನಿಷ್ಠ ಹತ್ತು ದಿನಗಳ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಪರ ವಕೀಲರು ವಿನಂತಿಸುವ ಸಾಧ್ಯತೆ ಇದೆ.

ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ನಿನ್ನೆ (ಮೇ 30) ಹಾಸನದಲ್ಲಿ ಜನಪರ ಚಳುವಳಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಸಾವಿರಾರು ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...