Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆಗೆ ಎಸ್‌ಐಟಿ ಮನವಿ

ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆಗೆ ಎಸ್‌ಐಟಿ ಮನವಿ

- Advertisement -
- Advertisement -

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್‌ 5ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲರ ಕೋರಿಕೆಯಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.

ವಿಶೇಷ ತನಿಖಾ ತಂಡ (ಎಸ್‌ಐಟಿ) ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್ ಅವರು ಸಂತ್ರಸ್ತರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಪ್ರಜ್ವಲ್ ಜಾಮೀನು ಅರ್ಜಿಗಳನ್ನು ಗೌಪ್ಯ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ಮುಖ್ಯ ನ್ಯಾಯಮೂರ್ತಿಗಳು ಈ ಸಂಬಂಧ ಆದೇಶ ಮಾಡಬೇಕು. ಮುಂದಿನ ವಿಚಾರಣೆಯಲ್ಲಿ ನೋಡೋಣ”ಎಂದಿದ್ದಾರೆ.

ಪ್ರಜ್ವಲ್‌ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಜಿ ಅರುಣ್‌ ಅವರು ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಹಾಗಾಗಿ, ಜಾಮೀನು ನೀಡಲು ಅವಕಾಶವಿದೆ ಎಂದು ತಿಳಿಸಲು ಪ್ರಯತ್ನಿಸಿದರು. ಆಗ ನ್ಯಾಯಾಲಯವು, ಅನುಗ್ರಹ ತೋರುವ ಪ್ರಕರಣ ಇದಲ್ಲ ಎಂದಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಬೆಂಗಳೂರಿನ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ : ಹೆಚ್‌.ಡಿ ರೇವಣ್ಣ ಜಾಮೀನು ರದ್ದುಗೊಳಿಸಲು ಹೈಕೋರ್ಟ್ ನಕಾರ : ಎಸ್‌ಐಟಿ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...