Homeಕರ್ನಾಟಕಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

ಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

- Advertisement -
- Advertisement -

ಪತ್ರಕರ್ತ ಶಶಿಕಾಂತ್ ವಾರಿಷೆ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.

ರತ್ನಗಿರಿ ಜಿಲ್ಲೆಯ ಕೊಡವಲಿ ಗ್ರಾಮದಲ್ಲಿ ಪಂಢರಿನಾಥ್ ಅಂಬೇರ್ಕರ್ ಎಂಬ ಭೂ ಡೀಲರ್ ತನ್ನ ಎಸ್‌ಯುವಿಯನ್ನು ವಾರಿಷೆಯವರ ಮೇಲೆ ಹತ್ತಿಸಿ ಕೊಲೆ ಮಾಡಿದ್ದನು

ಹಲವಾರು ಮಾಧ್ಯಮ ಸಂಸ್ಥೆಗಳು ವಾರಿಷೆ ಅವರ ಸಾವಿನ ತನಿಖೆಗೆ ಒತ್ತಾಯಿಸಿದ್ದವು. ಹತ್ಯೆಯಾಗಿರುವ ವಾರಿಷೆಯವರು ಇತ್ತೀಚೆಗೆ ಅಂಬರ್ಕರ್ ವಿರುದ್ಧ ಲೇಖನ ಬರೆದಿದ್ದರು.

ಶನಿವಾರ ಫಡ್ನವೀಸ್ ಅವರ ಕಚೇರಿಯಿಂದ ಬಿಡುಗಡೆಯಾದ ಹೇಳಿಕೆಯಲ್ಲಿ, “ವಿಶೇಷ ತನಿಖಾ ತಂಡವನ್ನು ರಚಿಸುವಂತೆ ರಾಜ್ಯದ ಪೊಲೀಸ್ ಆಡಳಿತಕ್ಕೆ ಸೂಚಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ವಿಶೇಷ ತನಿಖಾ ತಂಡವು ಉನ್ನತ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿರುತ್ತದೆ ಎಂದು ಅದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಗೃಹ ಇಲಾಖೆಯ ಖಾತೆಯನ್ನು ಹೊಂದಿರುವ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದ ಶಿವಸೇನಾ ಸಂಸದ ಸಂಜಯ್ ರಾವತ್, ತನಿಖೆಗೆ ಒತ್ತಾಯಿಸಿದ್ದರು.

“ತೈಲ ಸಂಸ್ಕರಣಾಗಾರದ ಹೆಸರಿನಲ್ಲಿ ನಾನಾರ್ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಸ್ವಾಧೀನಪಡಿಸಿಕೊಂಡಿರುವ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಭೂ ವಹಿವಾಟುಗಳನ್ನು ಶಶಿಕಾಂತ್ ವಾರಿಷೆ ಬಹಿರಂಗಪಡಿಸಿದ್ದರು. ಇದರಿಂದಾಗಿ ಭೂ ವ್ಯವಹಾರದಲ್ಲಿ ತೊಡಗಿರುವವರು ಅಸಮಾಧಾನಗೊಂಡಿದ್ದರು” ಎಂದು ರಾವತ್‌ ಆರೋಪಿಸಿದ್ದರು.

ಮೂಲತಃ ರತ್ನಗಿರಿಯ ನಾನಾರ್ ಗ್ರಾಮದಲ್ಲಿ ಯೋಜಿಸಲಾಗಿದ್ದ ರತ್ನಗಿರಿ ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಯೋಜನೆಯನ್ನು ಶಿವಸೇನೆ ವಿರೋಧಿಸಿತ್ತು. “ಈ ಯೋಜನೆಯು ದೊಡ್ಡ ಪ್ರಮಾಣದ ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತದೆ; ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ 17 ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ” ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತರಾದ ವಾರಿಷೆಯವರನ್ನು ಕೊಲ್ಲಲಾಯಿತು. ಕಾರನ್ನು ಅವರ ಮೇಲೆ ಹತ್ತಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದರು.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರ್ಕರ್‌ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ಪ್ರಾಥಮಿಕ ಸಾಕ್ಷ್ಯಗಳು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...