Homeಕರ್ನಾಟಕಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೇ ಬೇಡವೇ? ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತೀರ್ಮಾನಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಸೋಮವಾರ (ಆ.18) ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು,”ಇದುವರೆಗೆ ಆಗಿರುವುದು ಶವಗಳ ಶೋಧ ಮಾತ್ರ, ಸರಿಯಾದ ತನಿಖೆ ಇನ್ನೂ ಪ್ರಾರಂಭಗೊಂಡಿಲ್ಲ. ಶವ ಶೋಧ ಮುಕ್ತಾಯಗೊಂಡು, ಈಗ ಸಿಕ್ಕಿರುವ ಅಸ್ತಿಪಂಜರ ಮತ್ತು ಮುಂದೆ ಸಿಕ್ಕರೆ ಅವುಗಳ ಎಫ್‌ಎಸ್‌ಎಲ್‌ ಪರೀಕ್ಷೆ ನಡೆಸಿ ವರದಿ ಬರಬೇಕು. ಆ ಬಳಿಕ ನಿಜವಾದ ತನಿಖೆ ಆರಂಭಗೊಳ್ಳಲಿದೆ ಎಂದರು.

ಇದುವರೆಗೆ ಶೋಧದ ವೇಳೆ ಒಂದು ಕಡೆ ಮಾನವನ ತಲೆ ಬುರುಡೆ, ಮೂಳೆಗಳು ಸಿಕ್ಕಿವೆ. ಮತ್ತೊಂದೆಡೆ ಅಸ್ತಿ ಪಂಜರ ದೊರೆತಿದೆ. ಅವುಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲಿನ ಮಣ್ಣನ್ನೂ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮಾಡಿರುವ ಸಾಕ್ಷಿ ರಕ್ಷಣಾ ಕಾಯ್ದೆಯಡಿ ದೂರುದಾರನಿಗೆ ಎಸ್‌ಐಟಿ ಎಲ್ಲಾ ರೀತಿಯ ರಕ್ಷಣೆ ಒದಗಿಸಿದೆ. ಪ್ರಧಾನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣೆ ಒದಗಿಸುವ ನಿರ್ದೇಶನ ನೀಡಿದ್ದಾರೆ. ದೂರುದಾರನನ್ನು ಅವರು ‘ವಿ’ ಎಂದು ಗುರುತಿಸಿದ್ದಾರೆ. ಅದರಂತೆ ಎಸ್‌ಐಟಿ ರಕ್ಷಣೆ ನೀಡಿದೆ ಎಂದು ಹೇಳಿದರು.

ಸಾಕ್ಷಿ ರಕ್ಷಣಾ ಕಾಯ್ದೆಯಡಿ ದೂರುದಾರನಿಗೆ ರಕ್ಷಣೆ ನೀಡಿರುವ ಹಿನ್ನೆಲೆ, ಆತನನ್ನು ಬಂಧಿಸಲು ಅಥವಾ ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ಸಾಧ್ಯವಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಎಸ್‌ಐಟಿ ಅಧಿಕಾರಿಗಳು ಈಗ ಸಿಕ್ಕಿರುವ ಮೂಳೆ, ಅಸ್ತಿ ಪಂಜರವನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲಿಯವರೆಗೆ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ವರದಿ ಬಂದ ಬಳಿಕ ಮುಂದಕ್ಕೆ ಹೋಗಬೇಕಾ (ಶೋಧ ಮುಂದುವರಿಸಬೇಕಾ) ಎನ್ನುವ ತೀರ್ಮಾನ ಅವರು ಮಾಡುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.

ನಾನು ಈಗ ಹೇಳಿರುವುದು ಪ್ರಕರಣದ ವಸ್ತುಸ್ಥಿತಿ ಮಾತ್ರ. ಮಧ್ಯಂತರ ವರದಿ ಇನ್ನೂ ಬಂದಿಲ್ಲ. ಕಾಲ ಮಿತಿಯಲ್ಲಿ ತನಿಖೆ ಮುಗಿಸಿ ಎಂದು ಎಸ್‌ಐಟಿ ಹೇಳಲು ಸಾಧ್ಯವಿಲ್ಲ ಎಂದರು.

ನಾವು ನೆಲದ ನ್ಯಾಯವನ್ನು ಗೌರವಿಸೋಣ. ಸತ್ಯ ಹೊರಗೆ ಬರಲಿ, ಸತ್ಯ ಹೊರಗೆ ಬಂದರೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಹಾಗಾಗಿ, ವಿವಿಧ ರೀತಿಯ ಹೇಳಿಕೆಗಳನ್ನು ನೀಡುವುದು ಒಳ್ಳೆಯದಲ್ಲ. ಏನೂ ಆಗಿಲ್ಲ ಅಂದರೆ ಧರ್ಮಸ್ಥಳದ ಗೌರವ ಹೆಚ್ಚುತ್ತದೆ. ಆಗಿದೆ, ಎಂದರೆ ಸತ್ಯ ಹೊರ ಬರುತ್ತದೆ. ವಿರೋಧ ಪಕ್ಷದವರು ಸೇರಿದಂತೆ ಎಲ್ಲರೂ ಸಹಕರಿಸಬೇಕು. ಸರ್ಕಾರ ಯಾರನ್ನೂ ದೂಷಿಸುವುದಿಲ್ಲ. ಯಾರ ಒತ್ತಡಕ್ಕೆ ಮಣಿದೂ ಎಸ್‌ಐಟಿ ರಚನೆ ಮಾಡಿಲ್ಲ, ಪರಿಸ್ಥಿತಿ ನೋಡಿ ಮಾಡಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...