Homeಅಂಕಣಗಳುನೀನಾ ಮತ್ತು ಸೀತೆಯರ ದುಃಖ

ನೀನಾ ಮತ್ತು ಸೀತೆಯರ ದುಃಖ

- Advertisement -
- Advertisement -

| ಗೌರಿ ಲಂಕೇಶ್ |
27 ಮೇ 2009 (ಸಂಪಾದಕೀಯದಿಂದ)

ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ ದೇಶವಾದ ಅಮೆರಿಕಾದಲ್ಲಿ ವ್ಯಂಗ್ಯಚಿತ್ರಕಾರಳಾಗಿ ದುಡಿಯುತ್ತಿರುವ ಹೆಂಗಸು. ಆದರೆ ಕಾಲ, ದೇಶ, ಭಾಷೆ, ಸಂಸ್ಕøತಿ ಮತ್ತು ಪರಂಪರೆಯನ್ನು ಮೀರಿ ಇವರಿಬ್ಬರನ್ನು ಒಂದು ಸಂಗತಿ ಜೊತೆಗೂಡಿಸುತ್ತದೆ. ಅದು ಗಂಡನಿಂದ ತಿರಸ್ಕøತಗೊಂಡಿರುವ ಮಡದಿಯೊಬ್ಬಳ ಯಾತನೆ, ಅಸಹಾಯಕತೆ ಮತ್ತು ಏಕಾಂಗಿತನ.
ಸೀತಿ ಬೇರೆ ಯಾರೂ ಅಲ್ಲ. ವಾಲ್ಮೀಕಿ ಬರೆದ ರಾಮಾಯಣದ ನಾಯಕಿ. ಆ ಸೀತೆಗಾದ ವ್ಯಥೆ ತನಗಾದ ದುಃಖಕ್ಕಿಂತ ವಿಭಿನ್ನವಾಗಿರಲಿಲ್ಲ ಎಂದು ‘ಸೀತಾ ಸಿಂಗ್ಸ್ ದ ಬ್ಲೂಸ್’ ಎಂಬ ಅನಿಮೇಷನ್ ಸಿನಿಮಾದ ಮೂಲಕ ನೀನಾ ಪ್ಯಾಲಿ ತೋರಿಸಿದ್ದರಿಂದ ಇವತ್ತು ಆಕೆ ಕೆಲ ಹಿಂದೂತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

ಅದು ಆದದ್ದು ಹೀಗೆ: ನೀನಾಳ ಅಮೆರಿಕನ್ ಗಂಡನಿಗೆ ಭಾರತದಲ್ಲಿ ಆರು ತಿಂಗಳ ಕಾಲ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಅಲ್ಲಿಯತನಕ ಅವರಿಬ್ಬರ ದಾಂಪತ್ಯಜೀವನ ಚೆನ್ನಾಗಿ ಸಾಗಿದ್ದು, ಆತ ನೀನಾಳನ್ನು ಅಮೆರಿಕದಲ್ಲಿ ಬಿಟ್ಟು ಭಾರತಕ್ಕೆ ಬರುತ್ತಾನೆ. ಆದರೆ ಇಲ್ಲಿಗೆ ಬಂದನಂತರ ನೀನಾಳನ್ನು ನಿರ್ಲಕ್ಷಿಸಲಾರಂಭಿಸುತ್ತಾನೆ. ಹೀಗೆ ಕೆಲ ತಿಂಗಳುಗಳು ಉರುಳಿದ ನಂತರ ಆತನ ಕಾಂಟ್ರಾಕ್ಟ್ ಅನ್ನು ಇನ್ನೊಂದು ವರ್ಷದ ಅವಧಿಗೆ ವಿಸ್ತರಿಸಲಾಗುತ್ತದೆ. ಆಗ ನೀನಾ ತಾನು ತನ್ನ ಗಂಡನೊಂದಿಗೆ ವಾಸಿಸಬೇಕೆಂದು ನಿರ್ಧರಿಸಿ ತನ್ನ ಕೆಲಸಕ್ಕೆ ರಾಜಿನಾಮೆ ನೀಡಿ, ಬಾಡಿಗೆ ಮನೆಯನ್ನು ತೊರೆದು, ಗಂಟುಮೂಟೆ ಕಟ್ಟಿಕೊಂಡು ಆಕೆಯೂ ಭಾರತಕ್ಕೆ ಬರುತ್ತಾಳೆ.

ಅಪಾರ ಪ್ರೀತಿ ಹೊತ್ತು ಬಂದಿರುವ ನೀನಾಳಿಗೆ ಇಲ್ಲಿ ಆಘಾತ ಕಾದಿರುತ್ತದೆ. ಅವಳ ಗಂಡ ಆಕೆಯ ಬಗೆಗಿನ ಪ್ರೀತಿ ಮತ್ತು ಆಸಕ್ತಿಯನ್ನು ಕಳೆದುಕೊಂಡಿರುತ್ತಾನೆ. ಸಹಜವಾಗಿಯೇ ನೀನಾ ಇದನ್ನು ಕಂಡು ಘಾಸಿಗೊಳಗಾಗುತ್ತಾಳೆ. ಇದು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ಗಂಡನ ತಾತ್ಸಾರವನ್ನು ಸಹಿಸಿಕೊಂಡಿರುತ್ತಾಳೆ. ಭಾರತದಲ್ಲಿ ಆಕೆಗೆ ಸ್ನೇಹಿತರಾಗಲಿ, ಸಹೋದ್ಯೋಗಿಗಳಾಗಲಿ ಇಲ್ಲದಿರುವುದು ಆಕೆಯ ಏಕಾಂಗಿತನವನ್ನು ಹೆಚ್ಚಿಸುತ್ತದೆ. ಜೊತೆಗೆ ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲದಿರುವುದು, ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದು, ಗಂಡನ ಹೊರತಾಗಿ ಪ್ರತ್ಯೇಕ ಅಸ್ತಿತ್ವ ಇಲ್ಲದಿರುವುದೆಲ್ಲ ನೀನಾಳಲ್ಲಿ ಬೇಸರ ಮೂಡಿಸುತ್ತದೆ.

 

ಅದೇ ಹೊತ್ತಿಗೆ ನೀನಾ ‘ರಾಮಾಯಣ’ವನ್ನು ಓದಲು ಪ್ರಾರಂಭಿಸುತ್ತಾಳೆ. ರಾಮನನ್ನು ಮರ್ಯಾದ ಪುರುಷೋತ್ತಮನೆಂದೂ, ಆತ ಎಲ್ಲ ರೀತಿಯ ಸದ್ಗುಣಗಳನ್ನು ಹೊಂದಿರುವವನೆಂದೂ; ಆದರೆ ಸೀತೆಯನ್ನು ಯಾವ ಸ್ವಂತಿಕೆಯೂ ಇಲ್ಲದ, ಸ್ವಾತಂತ್ರ್ಯವಿಲ್ಲದ ಆಕೃತಿಯಂತೆ ಚಿತ್ರಿಸಿರುವುದನ್ನು ನೋಡಿ ನೀನಾಳಿಗೆ ‘ರಾಮಾಯಣ’ ಸ್ತ್ರೀದ್ವೇಷಿಯಾದ ಕರಪತ್ರಕ್ಕಿಂತ ಹೆಚ್ಚಿನ ಮೌಲ್ಯ ಹೊಂದಿರದ ಕೃತಿ ಎಂಬಂತೆ ಕಾಣಿಸುತ್ತದೆ.ಮೂರು ಸಾವಿರ ವರ್ಷಗಳ ಹಿಂದೆ ವಾಲ್ಮೀಕಿಯ ಕಾಲ್ಪನಿಕ ಸೃಷ್ಟಿಯಾದ ಸೀತೆ ಅನುಭವಿಸಿದ ಒಬ್ಬಂಟಿತನಕ್ಕೂ, ಆಧುನಿಕ ಮಹಿಳೆಯಾದ ತಾನು 21ನೇ ಶತಮಾನದಲ್ಲಿ ಅನುಭವಿಸುತ್ತಿರುವ ನೋವಿಗೂ ಅಷ್ಟೇನೂ ವ್ಯತ್ಯಾಸವಿಲ್ಲ ಎನಿಸುತ್ತದೆ ನೀನಾಳಿಗೆ. “ನನ್ನನ್ನು ತಿರಸ್ಕರಿಸಿದ ತನ್ನ ಗಂಡನ ಬಗ್ಗೆ ನನಗಿನ್ನೂ ಇದ್ದ ಪ್ರೀತಿ, ಹಂಬಲ ಮತ್ತು ಆಶೆ ಸೀತೆಯ ಅನುಭವವೂ ಆಗಿತ್ತು. ಆಗ ರಾಮಾಯಣ ಕೇವಲ ಲಿಂಗಭೇದ ತೋರುವ ದೃಷ್ಟಾಂತ ಕತೆಯಾಗಲ್ಲದೆ, ಮನುಷ್ಯರ ನಡುವಿನ ಸಂಬಂಧಗಳು ಮತ್ತು ಹೃದಯಾಳದಲ್ಲಿರುವ ವೇದನೆಯ ಕತೆಯಂತೆ ಕಂಡಿತು. ಅದೇ ಹೊತ್ತಿಗೆ 1920ರಲ್ಲಿ ಬ್ಲೂಸ್ (ಹೆಚ್ಚಾಗಿ ದುಮ್ಮಾನಗಳ ಬಗೆಗಿನ ಹಾಡುಗಳ ಒಂದು ಸಂಗೀತ ಶೈಲಿ) ಕವನಗಳನ್ನು ಹಾಡಿದ್ದ ಆನೆಟ್ ಹಾನ್‍ಶಾ ಅವರ ಸಂಗೀತವನ್ನು ಕೇಳಿದೆ. ನನ್ನ ವೈಯಕ್ತಿಕ ದುಃಖ, ಸೀತಾಳ ಕಥನ ಮತ್ತು ಹಾನ್‍ಶಾಳ ಸಂಗೀತ, ಈ ಮೂರು ಒಟ್ಟಾಗಿ ಸಾಗಿದ್ದರಿಂದ ‘ಸೀತಾ ಸಿಂಗ್ಸ್ ದ ಬ್ಲೂ’ ಸಿನಿಮಾವನ್ನು ಮಾಡಿದೆ” ಎನ್ನುತ್ತಾಳೆ ನೀನಾ.

82 ನಿಮಿಷಗಳ ಈ ಅನಿಮೇಟೆಡ್ ಸಿನಿಮಾದಲ್ಲಿ ಸೀತೆಯನ್ನು ತಾನು ವಿಧೇಯಳನ್ನಾಗಿ ತೋರಿಸದೆ. ಉತ್ಸಾಹಿ, ದೃಢ ನಿರ್ಧಾರಗಳ ಮತ್ತು ಭಾವುಕಜೀವಿಯನ್ನಾಗಿ ತೋರಿಸಿದ್ದೇನೆ ಎಂದು ನೀನಾ ಹೇಳುತ್ತಾರಾದರೂ ನಮ್ಮ ದೇಶದಲ್ಲೇ ರಾಮಾಯಣದ ಅನೇಕ ವ್ಯಾಖ್ಯಾನಗಳಲ್ಲಿ ಸೀತೆ ಇದಕ್ಕಿಂತಲೂ ಹೆಚ್ಚು ಗಟ್ಟಿ ವ್ಯಕ್ತಿತ್ವದವಳಾಗಿ ಮೂಡಿಬಂದಿದ್ದಾಳೆ.
ಸಹಜವಾಗಿಯೇ ಇದೆಲ್ಲ ಕೆಲ ‘ರಾಮಭಕ್ತ’ರಾದ ಹಿಂದೂತ್ವವಾದಿಗಳನ್ನು ಕೆರಳಿಸಿದೆ. ವಾಲ್ಮೀಕಿಯ ಜಾನಕಿ ಮತ್ತು ತಮ್ಮ ಸುತ್ತಲೂ ಇರುವ ಸೀತೆಯ ದುಃಖ ಅವರಿಗೆ ಅರ್ಥವಾಗುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...