Homeರಾಷ್ಟ್ರೀಯ'ಪರಿಸ್ಥಿತಿ ಉದ್ವಿಗ್ನವಾಗಿದೆ, ಆದರೆ ನಿಯಂತ್ರಣದಲ್ಲಿದೆ' - ಮಣಿಪುರ ಪೊಲೀಸರು

‘ಪರಿಸ್ಥಿತಿ ಉದ್ವಿಗ್ನವಾಗಿದೆ, ಆದರೆ ನಿಯಂತ್ರಣದಲ್ಲಿದೆ’ – ಮಣಿಪುರ ಪೊಲೀಸರು

- Advertisement -
- Advertisement -

ಮಣಿಪುರ ರಾಜಭವನಕ್ಕೆ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ ಕಾರಣಕ್ಕೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಆದರೆ ನಿಯಂತ್ರಣದಲ್ಲಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮಣಿಪುರದ ರಾಜಭವನಕ್ಕೆ ನಡೆದ ಮೆರವಣಿಗೆಯ ವೇಳೆ ವಿದ್ಯಾರ್ಥಿಗಳು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ನಡೆದಿತ್ತು.

ರಾಜ್ಯ ಸರ್ಕಾರದ ಡಿಜಿಪಿ ಮತ್ತು ಭದ್ರತಾ ಸಲಹೆಗಾರರನ್ನು ವಜಾಗೊಳಿಸಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. “ಮಂಗಳವಾರ ಮಧ್ಯಾಹ್ನ ಇಂಫಾಲ್‌ನಲ್ಲಿ ವಿಧಿಸಲಾದ ಕರ್ಫ್ಯೂ ಇಂದು ಬೆಳಿಗ್ಗೆ ಕೂಡಾ ಜಾರಿಯಲ್ಲಿದೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಲು ಪಟ್ಟಣದಲ್ಲಿ ಪೊಲೀಸರ ಗಸ್ತು ತಿರುಗುತ್ತಿದೆ” ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ಸಂಜೆ ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ತೀವ್ರ ಆಂದೋಲನದ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿರುವುದು ಐದು ಜಿಲ್ಲೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದೆ.

ರಾಜ್ಯದ ರಾಜಧಾನಿಯ ಖ್ವೈರಂಬಂಡ್ ಮತ್ತು ಕಾಕ್ವಾ ನವೋರೆಮ್ ಲೈಕೈ ಪ್ರದೇಶಗಳಲ್ಲಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಘರ್ಷಣೆಯಲ್ಲಿ 55ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿದ್ಯಾರ್ಥಿಗಳ ಸಂಘ ಹೇಳಿಕೊಂಡಿದೆ.

ಇದನ್ನೂ ಓದಿ: ಹಿರಿಯ ನಾಯಕರಿಗೆ ಕಡಿವಾಣ ಹಾಕುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ರಾಜ್ಯ ಕಾಂಗ್ರೆಸ್‌ನ ಕಿರಿಯ ನಾಯಕರು!

”ವಿದ್ಯಾರ್ಥಿಗಳ ಪ್ರತಿನಿಧಿಗಳು ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸಲು ರಾಜ್ಯಪಾಲರು ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು. ಮಣಿಪುರದ ವಿದ್ಯಾರ್ಥಿಗಳು ಮತ್ತು ಜನರ ಹಿತದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ” ಎಂದು ಮಂಗಳವಾರ ತಡರಾತ್ರಿ ರಾಜಭವನ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಏತನ್ಮಧ್ಯೆ, ಮಣಿಪುರ ರಾಜ್ಯದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿದ್ದು, ಅಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.

ವಿಡಿಯೊ ನೋಡಿ | ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...