Homeಮುಖಪುಟಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

- Advertisement -
- Advertisement -

ಭಾರತ-ಚೀನಾ ಗಡಿ ಸಂಘರ್ಷ ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಚೀನಾದ ರಕ್ಷಣಾ ಸಚಿವರನ್ನು ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಭೇಟಿಯಾಗಲಿದ್ದಾರೆ. ನಮಗೆ ಸಭೆಯ ವಿನಂತಿ ಬಂದಿದ್ದು, ಸಭೆ ನಡೆಯುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

ಭಾರತೀಯ ಮತ್ತು ಚೀನಾದ ಸೈನಿಕರ ಮಧ್ಯೆ ಮೇ ತಿಂಗಳಿನಿಂದ ಪೂರ್ವ ಲಡಾಕ್‌ನಲ್ಲಿ ಗಡಿ ಸಂಘರ್ಷ ಏರ್ಪಟ್ಟಿದೆ. ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಜೊತೆಗೆ ಕಳೆದ ಶನಿವಾರ ಮತ್ತು ಸೋಮವಾರ ಮತ್ತೆ ದಕ್ಷಿಣ ದಂಡೆಯ ಪಾಂಗೊಂಗ್ ಸರೋವರದ ಪ್ರದೇಶವನ್ನು ಚೀನಾ ಪಡೆಗಳು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿದ ನಂತರ ಮತ್ತೆ ಬಿಕ್ಕಟ್ಟು ಉಂಟಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಘರ್ಷಣೆಗಳು ಸಂಭವಿಸುತ್ತಲೇ ಇವೆ. ಸಮಸ್ಯೆ ಪರಿಹರಿಸಲು ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳಲ್ಲಿ ತೊಡಗಿದ್ದರೂ ಸಹ ಈ ಪ್ರಯತ್ನಗಳು ನಡೆದಿವೆ. ಈಗ ಮೂರು ದಿನಗಳ ಶಾಂಘೈ ಸಹಕಾರ ಸಭೆ ಬಳಿಕ ನಡೆಯುವ ಭಾರತ ಮತ್ತು ಚೀನಾ ರಕ್ಷಣಾ ಸಚಿವ ಸಭೆ ಬಳಿಕ ವಾದರೂ ಬಿಕ್ಕಟ್ಟು ಶಮನವಾಗುತ್ತದೆಯ ನೋಡಬೇಕು.

ಇದರ ಜೊತೆಗೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಹೇಳುವ ಮೂಲಕ ಸೇನಾ ಮುಖ್ಯಸ್ಥ ಎಂ.ಎಂ ನರವಣೆ ಮತ್ತೆ ಆತಂಕ ಸೃಷ್ಟಿಸಿದ್ದಾರೆ. ವಾಸ್ತವ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಗಂಭೀರವಾಗಿದೆ. ಮತ್ತು ಭಾರತೀಯ ಸೇನೆ ಹಲವು ಮುನ್ನೆಚ್ಚರಿಕೆ ತೆಗೆದುಕೊಂಡಿದೆ ಎಂದಿದ್ದಾರೆ.

ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌‌ಗೆ ಭೇಟಿ ನೀಡಿದ್ದ ಸೇನಾ ಮುಖ್ಯಸ್ಥರು ಲಡಾಖ್‌ಗೆ ತಲುಪಿದ ನಂತರ ಎಎನ್‌ಐ ಜೊತೆ ಮಾತನಾಡಿದ ಅವರು, ನಾನು ಬೇರೆ ಬೇರೆ ಸ್ಥಳಗಳಿಗೆ ಹೋಗಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸೇನಾ ಅಧಿಕಾರಿಗಳು ಮತ್ತು ಜೆಸಿಒಗಳೊಂದಿಗೆ ಮಾತನಾಡಿದ್ದು, ಅವರು ಎಲ್ಲಾ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದಿದ್ದಾರೆ.

ಆಗಸ್ಟ್ 29 ಮತ್ತು 30ರ ಮಧ್ಯರಾತ್ರಿಯಲ್ಲಿ ಲಡಾಖ್‌ನ ಚುಶುಲ್ ಬಳಿಯ ದಕ್ಷಿಣ ದಂಡೆಯ ಪಾಂಗೊಂಗ್ ತ್ಸೊ ಬಳಿ ಭಾರತೀಯ ಪ್ರದೇಶಗಳಿಗೆ ಅತಿಕ್ರಮಣ ಮಾಡಲು ಚೀನಾದ ಸೇನೆಯು ಮಾಡಿದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಇಂತಹ ಸಮಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಬಯಸಿರುವ ಚೀನಾ ರಕ್ಷಣಾ ಸಚಿವ ವೀ ಫೆಂಗಿ ಏನು ಕ್ರಮ ಕೈಗೊಳ್ಳಬಹುದು ಎಂಬ  ಕುತೂಹಲವಿದೆ. ಜೊತೆಗೆ ಈ ಹಿಂದೆ ಹಲವು ಬಾರಿ ಬ್ರಿಗೇಡಿಯರ್ ಮಟ್ಟ, ಅಧಿಕಾರಿಗಳ ಮಟ್ಟದಲ್ಲಿ ಸಭೆಗಳಾಗಿದ್ದರೂ ಯಾವುದೇ ಪ್ರಯೋಜನವಾಗದಿರುವ ಬಗ್ಗೆ ನಾವು ನೆನಪಿಡಬೇಕಾಗುತ್ತದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...