Homeಕರ್ನಾಟಕಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

- Advertisement -
- Advertisement -

ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಬಿಜೆಪಿ ಕರ್ನಾಟಕದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ನಳೀನ್ ಕುಮಾರ್‌ ಕಟೀಲ್ ಇಂತಹ ಹೇಳಿಕೆ ನೀಡಿದ್ದಾರೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿಯೂ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್, ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ದೂರದೃಷ್ಟಿ ಇರಲಿಲ್ಲ. ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ” ಎಂದು ಕೊರೊನಾ ನಿಯಂತ್ರಣ ಆಗದಿರಲು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

“ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್‌ ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ” ಎಂದು ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.

“ಕೋವಿಡ್ ನಿಯಂತ್ರಣಕ್ಕಾಗಿ ಪಕ್ಷ ಹಾಗೂ ಸರ್ಕಾರ ಒಂದಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ನಮ್ಮ ಪರಮ ಧ್ಯೇಯ. ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವುದೇ ನಮ್ಮ ಗುರಿ. ನಮ್ಮ ನಿಯತ್ತು ನಿಷ್ಠೆಯಲ್ಲಿ ಕೊರತೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಜನರ ಪ್ರಾಣ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ” ಎಂದು ನಳೀನ್ ಕುಮಾರ್‌ ಕಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

“ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್‌ ಸ್ಥಾಪಿಸಿದ್ದಾರೆ” ಎಂದು ಬಿಜೆಪಿ ದೇಶದ ಕೊರೊನಾ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸುತ್ತಿದೆ ಎಂದಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

ಮೊನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, “ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದರು.


ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

4 COMMENTS

  1. ಅನಾನುಭವಿ ರಾಜಕಾರಣಿಗಳು ಹೀಗೆಯೇ ಹೇಳಿಕೆ ನೀಡುತ್ತಾರೆ…ಇನ್ನೊಬ್ಬರ ಮೇಲೆ ಗೂಬೆ ಕೂರಿಸಿ ತೊಲಗುತ್ತಾರೆ…ನಳಿನ್ರವರೆ ಒಮ್ಮೆ ಇತಿಹಾಸ ಓದಿ…ಮತ್ತೆ ಹೇಳಿಕೆ ನೀಡಿ.

  2. Mr. Nalin Kumar, a great economist, actually India should have appoint him as Reserve bank chairman, instead of Dr. Manmohan Singh. If it was the case, our economy could reach top economy.

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರೆಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರೆಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರೆಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...