ಸೋನಿಯಾ ಗಾಂಧಿ ವಿರುದ್ದ FIR ವಿಚಾರವಾಗಿ ಮುಖ್ಯಮಂತ್ರಿಗೆ ಡಿ.ಕೆ. ಶಿವಕುಮಾರ್ ಪತ್ರ

0
ಸೋನಿಯಾ ಗಾಂಧಿ, ವಿರುದ್ದದ ದೂರು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿಗೆ, ಡಿಕೆಶಿ ಪತ್ರ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಸಾಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ದೂರನ್ನು‌ ರದ್ದು ಪಡಿಸುವಂತೆ ಮತ್ತು ದೂರು‌ ದಾಖಲಿಸಿದ ಪೊಲೀಸ್‌ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಸೋನಿಯಾ ಗಾಂಧೀಜಿ ಸಂಸದರಾಗಿರುವುದರಿಂದ ಮತ್ತು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶದ ಜನರ ಹಿತಕ್ಕಾಗಿ ಪಿಎಂ ಕೇರ್ ನಿಧಿಯನ್ನು ಬಳಸುವಂತೆ ಪ್ರಧಾನ ಮಂತ್ರಿಯನ್ನು ಒತ್ತಾಯಿಸುವ ಉದ್ದೇಶದಿಂದ ಟ್ವೀಟ್ ಮಾಡಿದ್ದರು. ದುರದೃಷ್ಟವಶಾತ್, ಇದನ್ನು ಬಿಜೆಪಿ ನಾಯಕತ್ವ ತಪ್ಪಾಗಿ ಅರ್ಥೈಸಿ ಹಾಗೂ ಸುಳ್ಳು ಮಾಹಿತಿಯ ಆಧಾರದ ಮೇಲೆ ಅವರ ಮೇಲೆ ದೂರು ದಾಖಲಿಸಿದೆ ಎಂದು ಡಿ.ಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಆರೋಗ್ಯಕರ ಟೀಕೆಯನ್ನು ಹತ್ತಿಕ್ಕುವ ಪ್ರಯತ್ನವಾಗಿದ್ದು, ಕಾನೂನಿನ ದುರುಪಯೋಗವಾಗಿದೆ. ಈ ದೂರನ್ನು ರದ್ದುಗೊಳಿಸಿ ನ್ಯಾಯ ಮತ್ತು ಧರ್ಮದ ಹಿತದೃಷ್ಟಿಯಿಂದ ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಎಫ್‌ಐಆರ್‌ ದಾಖಲಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಹಾಗೂ ಅವರನ್ನು ಅಮಾನತು ಮಾಡುವಂತೆ ‌ಅವರು ಒತ್ತಾಯಿಸಿದ್ದಾರೆ.

ದೂರು ಸಲ್ಲಿಸಿರುವ ವ್ಯಕ್ತಿಯು ಬಿಜೆಪಿ ಸಕ್ರಿಯ ಸದಸ್ಯರಾಗಿದ್ದಾರೆ. ಅವರು ರಾಜಕೀಯ ಪ್ರೇರಿತವಾಗಿ ನೀಡಿದ ದೂರಿನ ಸತ್ಯಸತ್ಯಾತೆಯನ್ನು ಪರಿಶೀಲಿಸದೆ ಎಫ್‌ಐಆರ್‌ ದಾಖಲಿಸಿರುವುದು ಸರಿಯಲ್ಲ, ಸುಳ್ಳಿನಿಂದ ಕೂಡಿರುವ ದೂರನ್ನು ದಾಖಲಿಸಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಪಿಎಂ ಕೇರ್‌ ನಿಧಿಯಿಂದ ಹಣ ದುರುಪಯೋಗವಾಗುತ್ತಿದೆ. ಈ ಹಣ ಬಡವರಿಗೆ ಬಳಕೆಯಾಗುತ್ತಿಲ್ಲ ಮತ್ತು ಪ್ರಧಾನಿಯವರ ವೈಯಕ್ತಿಕ ಬಳಕೆಗೆ ಖರ್ಚು ಆಗುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಟ್ವೀಟ್ ಮಾಡಿದ್ದರು.

ಇದು ಭಾರತ ಸರ್ಕಾರದ ವಿರುದ್ಧ ಅಪನಂಬಿಕೆ ಉಂಟು ಮಾಡಿ ಪ್ರಧಾನ ಮಂತ್ರಿ ವಿರುದ್ಧ ಸುಳ್ಳು ಸುದ್ದಿ ಹರಡಿದಂತಾಗುತ್ತದೆ. ಇದರಿಂದ ನಾಗರೀಕ ಸಮಾಜವನ್ನು ಎತ್ತಿಕಟ್ಟಿದಂತಾಗುತ್ತದೆ. ಆದ್ದರಿಂದ ಸೋನಿಯಾ ಗಾಂಧಿ ಮತ್ತು ಐಎನ್‌ಸಿ ಖಾತೆ ನಿರ್ವಹಿಸುವ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾರ್ಯಕರ್ತ ಹಾಗೂ ವಕೀಲರಾಗಿರುವ ಕೆ.ವಿ.ಪ್ರವೀಣ್ ಕುಮಾರ್ ಎಂಬವರು ದೂರು ದಾಖಲಿಸಿದ್ದರು.


ಓದಿ: ಪ್ರಧಾನಿ ವಿರುದ್ಧ ಟ್ವೀಟ್‌ : ಸಾಗರದಲ್ಲಿ ಸೋನಿಯಾಗಾಂಧಿ ವಿರುದ್ಧ FIR


 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here