Homeಮುಖಪುಟಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

- Advertisement -
- Advertisement -

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಲಿಯಾದ ವ್ಯಕ್ತಿಯನ್ನು ಜ್ಯುವೆಲ್ ಶೇಖ್ ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಚಕ್ಬಹಾದೂರ್ಪುರ ಗ್ರಾಮದವರು. ಒಡಿಶಾದ ಸಂಬಾಲ್‌ಪುರದಲ್ಲಿ ನಿರ್ಮಾಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.

ಬಾಂಗ್ಲಾದೇಶದಿಂದ ಬಂದ ದಾಖಲೆರಹಿತ ವಲಸೆಗಾರ ಎಂದು ಆರೋಪಿಸಿ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಮೃತನ ಸಹೋದ್ಯೋಗಿಗಳು ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ಒಡಿಶಾ ಪೊಲೀಸರು ಇದನ್ನು ನಿರಾಕರಿಸಿದ್ದು, ಮೃತ ವ್ಯಕ್ತಿ ಮತ್ತು ಆರೋಪಿಗಳು ಪರಸ್ಪರ ಮೊದಲೇ ಪರಿಚಯ ಇದ್ದರು ಎಂದಿದ್ದಾರೆ.

ಬುಧವಾರ ಸಂಜೆ ಜ್ಯುವೆಲ್ ಶೇಖ್ ಮತ್ತು ಇತರ ನಿರ್ಮಾಣ ಕಾರ್ಮಿಕರು ಕೆಲಸದಿಂದ ಹಿಂತಿರುಗುತ್ತಿದ್ದಾಗ ಸಂಬಾಲ್‌ಪುರದ ಶಾಂತಿನಗರ ಪ್ರದೇಶದಲ್ಲಿ ಹಲ್ಲೆ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಹಲ್ಲೆ ಮಾಡಿದವರು ಪಕ್ಕದ ಟೀ ಸ್ಟಾಲ್‌ನಲ್ಲಿದ್ದರು. ಅವರು ಜ್ಯುವೆಲ್ ಶೇಖ್‌ನೊಂದಿಗೆ ಬೀಡಿ ಕೇಳಿದರು. ನಂತರ ನಮ್ಮ ಆಧಾರ್ ಕಾರ್ಡ್‌ ಕೇಳಲು ಪ್ರಾರಂಭಿಸಿದರು, ನೀವು ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದರು. ನಾವು ನಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿದೆವು. ಇದ್ದಕ್ಕಿದ್ದಂತೆ, ಅವರು ಬಿದಿರಿನ ಕೋಲುಗಳಿಂದ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಇದರಿಂದ ಜ್ಯುವೆಲ್ ತಲೆಗೆ ಪೆಟ್ಟಾಯಿತು. ನಮ್ಮ ಜೊತೆಗಿದ್ದ ಇನ್ನೂ ಕೆಲವರು ಗಾಯಗೊಂಡರು” ಎಂದು ಜ್ಯುವೆಲ್ ಶೇಖ್ ಜೊತೆಗಿದ್ದ ಮುರ್ಷಿದಾಬಾದ್‌ನ ಪಾಲ್ಟು ಶೇಖ್ ತಿಳಿಸಿದ್ದಾರೆ.

ಗಾಯಗೊಂಡಿದ್ದ ಜ್ಯುವೆಲ್ ಶೇಖ್ ಅವರನ್ನು ಆಸ್ಪತ್ರೆಗೆ ಕರೆದೊಯ್ದೆವು. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ದಾಳಿಯಲ್ಲಿ ಇತರ ಇಬ್ಬರು ಕಾರ್ಮಿಕರಾದ ಅಕಿರ್ ಶೇಖ್ ಮತ್ತು ಪಲಾಶ್ ಶೇಖ್ ಕೂಡ ಗಾಯಗೊಂಡಿದ್ದು, ಅವರನ್ನು ಸಂಬಾಲ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲ್ಟು ಶೇಖ್ ವಿವರಿಸಿದ್ದಾರೆ.

“ನಾವು 12 ವರ್ಷಗಳಿಂದ ಒಡಿಶಾದಲ್ಲಿ ಕೆಲಸ ಮಾಡುತ್ತಿದ್ದೇವೆ. ಇಂತಹ ಘಟನೆ ನಡೆದಿರುವುದು ಇದೇ ಮೊದಲು” ಎಂದು ಪಾಲ್ಟು ಶೇಖ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಪಶ್ಚಿಮ ಬಂಗಾಳದ ಕಾರ್ಮಿಕರು ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ಅಲ್ಲಿನ ನಿವಾಸಿಗಳಿಗೆ ಪರಿಚಿತರು ಎಂದು ಸಂಬಾಲ್‌ಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮಂತ ಬಾರಿಕ್ ತಿಳಿಸಿದ್ದಾರೆ.

ಬೀಡಿ ಬೇಡಿಕೆಯ ಮೇರೆಗೆ ಈ ಹಲ್ಲೆ ನಡೆದಿದೆ. ಬಂಗಾಳಿ ವಲಸೆ ಕಾರ್ಮಿಕರು ಬೀಡಿ ಕೊಡಲು ನಿರಾಕರಿಸಿದ ನಂತರ ಗುಂಪು ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ. ಘಟನೆ ಸಂಬಂಧ ನಾವು ಆರು ಜನರನ್ನು ಬಂಧಿಸಿದ್ದೇವೆ. ಇನ್ನೂ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಬಾರಿಕ್ ಮಾಹಿತಿ ನೀಡಿದ್ದಾರೆ.

ಸಂಬಾಲ್‌ಪುರ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ಹಿಮಾಂಶು ಲಾಲ್ ಕೂಡ, ಈ ಕೊಲೆ ಹಠಾತ್ ಪ್ರಚೋದನೆಯ ಪರಿಣಾಮವಾಗಿ ನಡೆದಿದೇ ಹೊರತು, ಉದ್ದೇಶಿತ ದಾಳಿಯಲ್ಲ. ಆರೋಪಿಗಳೆಲ್ಲರನ್ನೂ ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಘಟನೆಯ ನಂತರ, ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಮತ್ತು ಪಶ್ಚಿಮ ಬಂಗಾಳದ ಸುತಿಯ ಶಾಸಕ ಇಮಾನಿ ಬಿಸ್ವಾಸ್ ಅವರು ಜ್ಯುವೆಲ್ ಶೇಖ್ ಅವರ ಮನೆಗೆ ಭೇಟಿ ನೀಡಿ ಸಹಾಯದ ಭರವಸೆ ನೀಡಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಮತ್ತೊಮ್ಮೆ ಗುರಿಯಾಗಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಪಶ್ಚಿಮ ಬಂಗಾಳ ವಲಸೆ ಕಾರ್ಮಿಕ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮೀರುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಬಂಗಾಳಿ ಮಾತನಾಡುವ ಎಷ್ಟು ಮುಗ್ಧ ಜನರ ಜೀವಗಳನ್ನು ಬಲಿ ತೆಗೆದುಕೊಳ್ಳಲು ಬಯಸಿದೆ?” ಎಂದು ಅವರು ಪ್ರಶ್ನಿಸಿದ್ದು, “ಬಿಜೆಪಿ ಬಂಗಾಳಿಗಳನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...