Homeಮುಖಪುಟಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಸಾವು, ಹಲವರಿಗೆ ಗಾಯ

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಸಾವು, ಹಲವರಿಗೆ ಗಾಯ

- Advertisement -
- Advertisement -

ಹರಿದ್ವಾರದ ಮಾನಸ ದೇವಿ ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ. ಬೆಳಿಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದೆ.

ದೇವಾಲಯದ ಮಾರ್ಗದಲ್ಲಿ ಹೈವೋಲ್ಟೇಜ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂಬ ವದಂತಿಯಿಂದ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ. ದೇವರ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಮೆಟ್ಟಿಲುಗಳ ಮೇಲೆ ಜಮಾಯಿಸಿದ್ದರು. ಈ ವೇಳೆ ಹಬ್ಬಿದ ವದಂತಿಯಿಂದ ಜನರು ದಿಕ್ಕಾಪಾಲಾಗಿ ಓಡಲು ಶುರು ಮಾಡಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ ಎಂದು ತಿಳಿದು ಬಂದಿದೆ.

ಗರ್ವಾಲ್ ಆಯುಕ್ತ ವಿನಯ್ ಶಂಕರ್ ಪಾಂಡೆ ಆರು ಜನರ ಸಾವನ್ನು ದೃಢಪಡಿಸಿದ್ದು, ಘಟನೆಯ ಬೆನ್ನಲ್ಲೇ ಪೊಲೀಸರು ಮತ್ತು ಇತರ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎದು ಹೇಳಿದ್ದಾರೆ.

ಜಿಲ್ಲಾಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ಹೇಳಿದ್ದಾರೆ.

ಗಾಯಾಳುಗಳ ಸ್ಥಿತಿಯ ಬಗ್ಗೆ ವಿಚಾರಿಸಲು ಎಸ್‌ಎಸ್‌ಪಿ ದೋಭಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕಾಲ್ತುಳಿತದಲ್ಲಿ ಒಟ್ಟು 35 ಜನರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಕೆಲವು ವ್ಯಕ್ತಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಹರಿದ್ವಾರದ ಮಾನಸ ದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕಾಲ್ತುಳಿತ ಸಂಭವಿಸಿರುವ ಬಗ್ಗೆ ತುಂಬಾ ದುಃಖಕರ ಸುದ್ದಿ ಬಂದಿದೆ. ಎಸ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ” ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.

ಸಮುದ್ರ ಮಟ್ಟದಿಂದ 500 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿರುವ ಶಿವಾಲಿಕ್ ಬೆಟ್ಟಗಳ ತುದಿಯಲ್ಲಿರುವ ಮಾನಸ ದೇವಿ ದೇವಾಲಯವು, ಮಾನಸ ದೇವಿಗೆ ಅರ್ಪಿತವಾಗಿದೆ. ಇದು ಹರಿದ್ವಾರದ ಐದು ಪವಿತ್ರ ಸ್ಥಳಗಳು ಅಥವಾ ಪಂಚ ತೀರ್ಥಗಳಲ್ಲಿ ಒಂದಾಗಿದೆ.

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...