HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...