Homeಮುಖಪುಟನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

- Advertisement -
- Advertisement -

ವಕೀಲರ ನಿಲುವಂಗಿ ಧರಿಸದೆ ಮತ್ತು ಶರ್ಟ್ ಬಟನ್ ಬಿಚ್ಚಿ ನ್ಯಾಯಾಲಯಕ್ಕೆ ಹಾಜರಾದ 2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಸ್ಥಳೀಯ ವಕೀಲ ಅಶೋಕ್ ಪಾಂಡೆಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ವಕೀಲ ಸರಿಯಾದ ಸಮವಸ್ತ್ರ ಧರಿಸಿದೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ರೀತಿ ನ್ಯಾಯಾಲಯಕ್ಕೆ ಬರುವಂತಿಲ್ಲ ಎಂದಿದ್ದಕ್ಕೆ ನ್ಯಾಯಾಧೀಶರನ್ನು ಗೂಂಡಾಗಳು ಎಂದು ಕರೆದಿದ್ದರು. ಬಳಿಕ ನ್ಯಾಯಾಧೀಶರು ಅವರನ್ನು ಹೊರಗೆ ಕಳಿಸಿದ್ದರು. ಈ ಸಂಬಂಧ ನ್ಯಾಯಾಲಯ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು ಎಂದು ವರದಿಗಳು ಹೇಳಿವೆ.

ಪ್ರಕರಣ ಸಂಬಂಧ ಗುರುವಾರ ಆದೇಶ ಹೊರಡಿಸಿದ ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಬಿ.ಆರ್ ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಶಿಕ್ಷೆ ಅನುಭವಿಸುವ ಸಲುವಾಗಿ ಲಕ್ನೋ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶರಣಾಗಲು ವಕೀಲನಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅಲ್ಲದೆ 2,000 ರೂಪಾಯಿ ದಂಡ ಪಾವತಿಸಲು ಸೂಚಿಸಿದೆ. ವಿಫಲವಾದರೆ ಹೆಚ್ಚುವರಿಯಾಗಿ ಒಂದು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ.

ತಪ್ಪಿತಸ್ಥ ವಕೀಲನನ್ನು ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದ ವೃತ್ತಿಯಿಂದ ಏಕೆ ನಿರ್ಬಂಧಿಸಬಾರದು? ಎಂದು ಅವರ ಪರ ವಕೀಲರಿಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ಕೊಡಲು ವಕೀಲರಿಗೆ ಮೇ 1ರವರೆಗೆ ಸಮಯ ನೀಡಿದೆ.

ಆರೋಪದ ಗಂಭೀರತೆ, ಅಶೋಕ್ ಪಾಂಡೆಯ ಹಿಂದಿನ ನಡವಳಿಕೆ ಹಾಗೂ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಅವರ ನಿರಾಕರಣೆಯ ಕಾರಣಕ್ಕೆ ಅನುಕರಣೀಯ ಶಿಕ್ಷೆ ವಿಧಿಸುವುದು ಅನಿವಾರ್ಯವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವಕೀಲ ಪಾಂಡೆ ಈ ಹಿಂದೆಯೂ ನ್ಯಾಯಾಂಗ ನಿಂದನೆ ಆರೋಪ ಎದುರಿಸಿದ್ದರು. 2017 ರಲ್ಲಿ, ಅವರು ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದ ಆವರಣಕ್ಕೆ ಎರಡು ವರ್ಷಗಳ ಕಾಲ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿತ್ತು ಎಂಬುವುದನ್ನು ತೀರ್ಪು ಪ್ರಕಟಿಸುವ ವೇಳೆ ನ್ಯಾಯಪೀಠ ಗಮನಿಸಿದೆ.

ಹರಿಯಾಣ| ದಲಿತ ವರನ ಮದುವೆ ಮೆರವಣಿಗೆಗೆ ಅಡ್ಡಿ; 8 ಜನರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...