ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಸೋಮವಾರ (ಏ.21) ಬೆಳಿಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಪೊಲೀಸರ ಎನ್‌ಕೌಂಟರ್‌ನಲ್ಲಿ ಆರು ಮಂದಿ ನಕ್ಸಲರು ಸಾವಿಗೀಡಾಗಿದ್ದಾರೆ ಎಂದು newindianexpress.com ವರದಿ ಮಾಡಿದೆ.
ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟಗಳಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಪ್ರಾರಂಭವಾದ ಗುಂಡಿನ ಚಕಮಕಿ ಇನ್ನೂ (ಬೆ. 9.30) ಮುಂದುವರೆದಿದೆ ಎಂದು ವರದಿ ಹೇಳಿದೆ.
ಸಿಆರ್‌ಪಿಎಫ್ ಅಧೀನದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) 209 ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಆರು ಮಂದಿ ನಕ್ಸಲರು ಹತರಾಗಿದ್ದಾರೆ. ಅವರಿಂದ ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು, ಒಂದು ಸೆಲ್ಫ್ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ವಿವರಿಸಿದೆ.
ಭದ್ರತಾ ಸಿಬ್ಬಂದಿಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ವರದಿ ಹೇಳಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಮತಾ ಬ್ಯಾನರ್ಜಿಯ ಸಹಾಯದಿಂದ ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ವಿಸ್ತರಿಸಿದೆ: ಸಿಪಿಎಂ


