Homeಮುಖಪುಟಬಿಜೆಪಿ 2ನೇ ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ: ಪಟ್ಟಿ ಇಲ್ಲಿದೆ

ಬಿಜೆಪಿ 2ನೇ ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ: ಪಟ್ಟಿ ಇಲ್ಲಿದೆ

- Advertisement -
- Advertisement -

ಬಿಜೆಪಿ ಪಕ್ಷವು ಬುಧವಾರ ತಡರಾತ್ರಿ 23 ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಆರು ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ವಿವರ ಇಲ್ಲಿದೆ.

ಮೂಡಿಗೆರೆ – ಎಂ.ಪಿ ಕುಮಾರಸ್ವಾಮಿ

ಮೂಡಿಗೆರೆ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ದೀಪಕ್‌ ದೊಡ್ಡಯ್ಯನವರಿಗೆ ಸಿಕ್ಕಿದೆ. 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಪಿ ಕುಮಾರಸ್ವಾಮಿಯವರು ಕಾಂಗ್ರೆಸ್‌ನ ಮೋಟಮ್ಮನವರ ಎದುರು ಸೋತಿದ್ದರು. ಆನಂತರ 2004 ಮತ್ತು 2008ರಲ್ಲಿ ಮೋಟಮ್ಮ ಮತ್ತು ಚಂದ್ರಪ್ಪನವರ ಎದುರು ಗೆಲುವು ಸಾಧಿಸಿದ್ದರು. 2013ರಲ್ಲಿ ಜೆಡಿಎಸ್‌ನ ಬಿ.ಬಿ ನಿಂಗಯ್ಯನವರು ಎದುರು ಸೋಲು ಕಂಡಿದ್ದರು. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೋಟಮ್ಮನವರು ಎದುರು 12,328 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸದ್ಯ ಎಂ.ಪಿ ಕುಮಾರಸ್ವಾಮಿಯವರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಚನ್ನಗಿರಿ – ಮಾಡಾಳ್ ವಿರೂಪಾಕ್ಷಪ್ಪ

ಇತ್ತೀಚಿಗೆ ಭಾರೀ ಭ್ರಷ್ಟಾಚಾರ ನಡೆಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ತಮಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ತುಮ್ಕೋಸ್ ಮಾಜಿ ಅಧ್ಯಕ್ಷ ಶಿವಕುಮಾರ್‌ರವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಬೈಂದೂರು – ಸುಕುಮಾರ ಶೆಟ್ಟಿ

ಬೈಂದೂರಿನಲ್ಲಿ 2013ರಲ್ಲಿ ಸೋತು 2018ರಲ್ಲಿ ಗೆಲುವು ಸಾಧಿಸಿದ್ದ ಸುಕಮಾರ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲಿಗೆ ಗುರುರಾಜ್‌ ಗಂಟೀಹೊಳೆಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಕಲಘಟಗಿ; ಸಿ.ಎಂ.ನಿಂಬಣ್ಣನವರ್

2008ರಲ್ಲಿ ಬಿಜೆಪಿಯಿಂದ ಮತ್ತು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಸಂತೋಷ್ ಲಾಡ್ ವಿರುದ್ಧ ಸೋತಿದ್ದ ಸಿ.ಎಂ.ನಿಂಬಣ್ಣನವರ್ 2018ರಲ್ಲಿ ಸಂತೋಷ್ ಲಾಡ್‌ರನ್ನು 25,997 ಮತಗಳ ಅಂತರದಲ್ಲಿ ಸೋಲಿಸಿ ಶಾಸಕರಾಗಿದ್ದರು. ಆದರೆ ಒಂದೇ ಬಾರಿಗೆ ಶಾಸಕರಾಗಿದ್ದು ಸಾಕು ಎಂದಿರುವ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿ, ನಾಗರಾಜ್‌ ಛಬ್ಬಿಯವರಿಗೆ ಮಣೆ ಹಾಕಿದೆ. ಕಾಂಗ್ರೆಸ್‌ನಿಂದ ಈ ಬಾರಿಯೂ ಸಂತೋಷ್ ಲಾಡ್ ಅಭ್ಯರ್ಥಿಯಾಗಿದ್ದಾರೆ.

ಹಾವೇರಿ; ನೆಹರೂ ಓಲೇಕಾರ್‌

ಓಲೇಕಾರ್ 2008 ಮತ್ತು 2018ರಲ್ಲಿ ಹಾವೇರಿ ಶಾಸಕರಾಗಿದ್ದರು. ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ಜನಪ್ರತಿನಿಧಿಗಳ ವಿಶೇ‍ಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆ ಕಾರಣದಿಂದ ಅವರಿಗೆ ಈ ಬಾರಿಯ ಬಿಜೆಪಿ ಟಿಕೆಟ್ ಸಿಕ್ಕಿಲ್ಲ. ಅವರ ಬದಲಿಗೆ ಗವಿಸಿದ್ದಪ್ಪ ದ್ಯಾಮಣ್ಣನವರ್‌ ನವರಿಗೆ ಬಿಜೆಪಿ ಟಿಕೆಟ್ ಒಲಿದಿದೆ.

ಮಾಯಕೊಂಡ; ಪ್ರೊ.ಲಿಂಗಣ್ಣ

ಪ್ರೊ.ಎನ್ ಲಿಂಗಣ್ಣ 2018ರಲ್ಲಿ ಕಾಂಗ್ರೆಸ್‌ನ ಕೆ.ಎಸ್ ಬಸವರಾಜುರವರನ್ನು 6,458 ಮತಗಳ ಅಂತರದಲ್ಲಿ ಸೋಲಿಸಿ ಶಾಸಕರಾಗಿದ್ದರು. ಈಗ ಬಿಜೆಪಿ ಅವರ ಬದಲಿಗೆ ಬಸವರಾಜ ನಾಯಕ್‌ರವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಮತ್ತೆ ಕೆ.ಎಸ್ ಬಸವರಾಜುರವರನ್ನು ಕಣಕ್ಕಿಳಿಸಿದೆ.

ಬಿಜೆಪಿಯ ಮೊದಲ ಪಟ್ಟಿಯಲ್ಲಿ 10 ಜನ ಹಾಲಿ ಶಾಸಕರಿಗೆ ಟಿಕೆಟ್ ನೀಡಿರಲಿಲ್ಲ. ಆ ವಿವರಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತುಮಕೂರು ನಗರದ ಸೊಗಡು ಶಿವಣ್ಣ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಕೂಡ ಬಂಡಾಯದ ಬಾವುಟ ಹಾರಿಸಿದ್ದಾರೆ. ಜೇವರ್ಗಿಯ ದೊಡ್ಡಪ್ಪಗೌಡ ಪಾಟೀಲ್ ಬಿಜೆಪಿ ತೊರೆದು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಮಾಲೂರಿನಲ್ಲಿ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ. ಅವರ ಸಾಲಿಗೆ ಎಂ.ಪಿ ಕುಮಾರಸ್ವಾಮಿ ಸೇರಿಕೊಂಡಿದ್ದಾರೆ.

ಇದನ್ನೂ ಓದಿ; ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...