ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಒಂದು ವರ್ಷದಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ 700ಕ್ಕೂ ಅಧಿಕ ರೈತರು ಹುತಾತ್ಮರಾಗಿದ್ದಾರೆ. ಆದರೆ ಈ ಕುರಿತು ಲೋಕಸಭೆಯ ಅಧಿವೇಶನದಲ್ಲಿ ‘ನಮ್ಮಲ್ಲಿ ಯಾವುದೇ ಡೇಟಾ ಇಲ್ಲ, ಹಾಗಾಗಿ ಅವರಿಗೆ ಪರಿಹಾರ ಕೊಡುವ ಪ್ರಶ್ನೆಯೇ ಉದ್ಭವಿಸವುದಿಲ್ಲ’ ಎಂದು ಕೃಷಿ ಸಚಿವಾಲಯ ಹೇಳಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ದೆಹಲಿ ಹೋರಾಟ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 702 ರೈತರ ಪಟ್ಟಿ ಕಳುಹಿಸಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ನಾಯಕ ಕಿಶನ್ ಪಾಲ್, ’ನಾವು ಆಂದೋಲನದ ಸಮಯದಲ್ಲಿ ಹುತಾತ್ಮರಾದ 702 ರೈತರ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಪತ್ರಿಕಾಗೋಷ್ಟಿಯಲ್ಲಿ 600ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಸರ್ಕಾರವು ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದ ರೈತರ ಬಗ್ಗೆ ತಮ್ಮ ಬಳಿ ಡೇಟಾ ಇಲ್ಲ ಸುಳ್ಳು ಹೇಳುತ್ತಿದೆ” ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ರಾಜ್ಯದಿಂದ 403 ಮೃತ ರೈತರ ಪಟ್ಟಿಯನ್ನು ನೀಡಲಾಗಿದೆ. ಆ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಇತರ ರಾಜ್ಯಗಳಿಂಮದ 200 ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿಯನ್ನು ವಿವರಿಸಿ, ಕನಿಷ್ಠ ಈಗಲಾದರೂ ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.
ಇದುವರೆಗೂ ಪಂಜಾಬ್ ಮತ್ತು ತೆಲಂಗಾಣ ಸರ್ಕಾರ ಹುತಾತ್ಮ ರೈತರ ಕುಟುಂಬಕ್ಕೆ ಪರಿಹಾರ ಘೋಷಿಸಿವೆ. ಆದರೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸದೆ ನುಣುಚಿಕೊಳ್ಳಲು ಯತ್ನಿಸುತ್ತಿದೆ.
ಇದನ್ನೂ ಓದಿ: MSP ಸೇರಿ ಇತರ ಹಕ್ಕೊತ್ತಾಯಗಳ ಕುರಿತು ಸರ್ಕಾರದೊಂದಿಗೆ ಮಾತುಕತೆಗೆ 5 ರೈತ ಮುಖಂಡರನ್ನು ಹೆಸರಿಸಿದ…


