Homeಮುಖಪುಟಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

ಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

- Advertisement -
- Advertisement -

ದೇಶದಾದ್ಯಂತ ಕಳೆದ ಮೂರು ದಿನಗಳಲ್ಲಿ ಸತತವಾಗಿ 12ನೇ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆಗಳು ಬಂದಿವೆ ಮಾಧ್ಯಮಗಳು ವರದಿ ಮಾಡಿವೆ. ಬುಧವಾರದಂದು ಆಕಾಶ ಏರ್ ಮತ್ತು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಗಳನ್ನು ಮಾಡಲಾಗಿದ್ದು, ತೀವ್ರ ಆತಂಕ ಸೃಷ್ಟಿಯಾಗಿತ್ತು. ಆದರೆ ತನಿಖೆಯ ವೇಳೆ ಇದು ಸುಳ್ಳು ಕರೆಗಳು ಎಂದು ತಿಳಿದುಬಂದಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದಕ್ಕೂ ಮುನ್ನ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್‌ಗೆ ಮಾರ್ಗ ಬದಲಿಸಲಾಗಿತ್ತು. ಸುಮಾರು 200 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ವಿಮಾನ ಮಂಗಳವಾರ ರಾತ್ರಿ ಮುಂಬೈನಿಂದ ಹೊರಟಿತ್ತು. ಬುಧವಾರ ಈ ಬೆದರಿಕೆ ಸುಳ್ಳು ಎಂದು ದೃಢಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದು ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿದ್ದರಿಂದ ದೆಹಲಿಗೆ ವಾಪಸ್‌ ಕಳುಹಿಸಲಾಯಿತು. 184 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಫ್ಲೈಟ್ QP1335, ದೆಹಲಿಯಿಂದ ಟೇಕ್ ಆಫ್ ಆಗಿದ್ದು, ಮಧ್ಯಾಹ್ನ 1:15 ಕ್ಕೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ನಂತರ ವಿಮಾನವನ್ನು ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಅದಾಗ್ಯೂ ಈ ಬೆದರಿಕೆ ಕರೆ ಕೂಡಾ ಸುಳ್ಳು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

“ಅಕಾಸ ಏರ್ ಫ್ಲೈಟ್ QP 1335, ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಹಾರುತ್ತಿದ್ದಾಗ ಬೆದರಿಕೆ ಕರೆ ಸ್ವೀಕರಿಸಲಾಗಿತ್ತು. ಅದರಲ್ಲಿ 174 ಪ್ರಯಾಣಿಕರು, ಮೂರು ಶಿಶುಗಳು ಮತ್ತು ಏಳು ಸಿಬ್ಬಂದಿ ಇದ್ದರು. ಈ ವೇಳೆ ಆಕಾಶ ಏರ್ ತುರ್ತು ಪ್ರತಿಕ್ರಿಯೆ ತಂಡಗಳು ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದೆ. ಕಾರ್ಯಾಚರಣಾ ತಂಡಗಳಿಗೆ ಒದಗಿಸಲಾಗಿದೆ ಮತ್ತು ಸಂಬಂಧಿತ ಮಧ್ಯಸ್ಥಗಾರರಿಗೆ ಮಾಹಿತಿಯನ್ನು ಪಾರದರ್ಶಕವಾಗಿ ಪ್ರಸಾರ ಮಾಡಲಾಗಿದೆ” ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ.

“ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿದರು, ವಿಮಾನವನ್ನು ದೆಹಲಿಗೆ ಹಿಂತಿರುಗಿಸಿದರು ಮತ್ತು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 1:48 ಕ್ಕೆ ಸುರಕ್ಷಿತವಾಗಿ ಇಳಿದರು” ಎಂದು ಅದು ಹೇಳಿದೆ.

“ನಿಗದಿತ ಸುರಕ್ಷತೆ ಮತ್ತು ಭದ್ರತಾ ಕಾರ್ಯವಿಧಾನಗಳ ಪ್ರಕಾರ, ವಿಮಾನವನ್ನು ಲ್ಯಾಂಡಿಂಗ್ ನಂತರ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಅಗತ್ಯ ಸುರಕ್ಷತೆ ಮತ್ತು ಭದ್ರತೆಯನ್ನು ಕೈಗೊಂಡ ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ ಎಲ್ಲಾ ಪ್ರಯಾಣಿಕರನ್ನು ಮಧ್ಯಾಹ್ನ 1:57 ಕ್ಕೆ ಇಳಿಸಲಾಯಿತು” ಎಂದು ಕಂಪನಿ ಹೇಳಿದೆ.

ಕಳೆದ 48 ಗಂಟೆಗಳಲ್ಲಿ 10 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ಮಂಗಳವಾರ, ದೆಹಲಿ-ಶಿಕಾಗೋ ಏರ್ ಇಂಡಿಯಾ ವಿಮಾನ, ಜೈಪುರ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದಮಾಮ್-ಲಕ್ನೋ ಇಂಡಿಗೋ ವಿಮಾನ, ದರ್ಭಾಂಗ-ಮುಂಬೈ ಸ್ಪೈಸ್‌ಜೆಟ್ ವಿಮಾನ, ಸಿಲಿಗುರಿ-ಬೆಂಗಳೂರು ಆಕಾಶ ಏರ್ ವಿಮಾನ, ಅಲಯನ್ಸ್ ಏರ್ ಅಮೃತಸರ-ಡೆಹ್ರಾಡೂನ್-ದೆಹಲಿ ವಿಮಾನ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮಧುರೈನಿಂದ ಸಿಂಗಾಪುರಕ್ಕೆ ಹೊರಟಿದ್ದ ಏಳು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಸೋಮವಾರ ಎರಡು ಇಂಡಿಗೋ ವಿಮಾನಗಳು ಮತ್ತು ಏರ್ ಇಂಡಿಯಾ ವಿಮಾನಕ್ಕೆ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಅವುಗಳಲ್ಲಿ ಒಂದು ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ, ಇನ್ನೊಂದು ಮಸ್ಕತ್‌ಗೆ ಹೋಗುವ ಇಂಡಿಗೋ ವಿಮಾನ ಮತ್ತು ಮತ್ತೊಂದು ಇಂಡಿಗೋ ವಿಮಾನ ಜಿದ್ದಾಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...