Homeಮುಖಪುಟಹಿಂದೂ ಸಾಮ್ರಾಜ್ಯಶಾಹಿಯ ವಕ್ತಾರ ಎಸ್.ಎಲ್.ಭೈರಪ್ಪ

ಹಿಂದೂ ಸಾಮ್ರಾಜ್ಯಶಾಹಿಯ ವಕ್ತಾರ ಎಸ್.ಎಲ್.ಭೈರಪ್ಪ

'ಒಂದು ದೇವಾಲಯವನ್ನು ನಿರ್ಮಿಸುವುದರಿಂದ ಒಂದು ಸಾವಿರ ಭಿಕ್ಷುಕರು ಹುಟ್ಟುತ್ತಾರೆ. ಆದರೆ ಒಂದು ಗ್ರಂಥಾಲಯವನ್ನು ಕಟ್ಟುವುದರಿಂದ ಒಂದು ಲಕ್ಷ ಜನ ಪ್ರಜ್ಞಾವಂತರು ರೂಪುಗೊಳ್ಳುತ್ತಾರೆ' ಎಂಬ ಅಂಬೇಡ್ಕರ್ ಮಾತು ಅರ್ಥವಾಗುವುದೆಂದು?

- Advertisement -
- Advertisement -

ಜಗತ್ತಿನಲ್ಲಿ ಧಾರ್ಮಿಕ ಬಹುತ್ವ ಅತ್ಯಂತ ಒಪ್ಪಿತ ಜೀವನ ಮೌಲ್ಯವಾಗಿದೆ. ಜಗತ್ತಿನ ಎಲ್ಲ ಧರ್ಮಗಳು ಭಾರತ ದೇಶದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ. ಯಾವುದೇ ಒಂದು ಧರ್ಮ ಇತರ ಧರ್ಮಗಳಿಗಿಂತ ಯಾವುದೇ ಕಾರಣಕ್ಕೂ ಶ್ರೇಷ್ಟವಲ್ಲ. ಸರ್ವಧರ್ಮಗಳ ನಡುವಣ ಸಮನ್ವಯತೆ ಆಧುನಿಕ ಕಾಲಘಟ್ಟದಲ್ಲಿ ವಿಶೇಷ ಮಹತ್ವ ಹೊಂದಿದೆ. ಮನುಷ್ಯ-ಮನುಷ್ಯರ ನಡುವೆ ಭಿನ್ನ ಬೇಧಗಳನ್ನು ಪೋಷಿಸುವ ಧರ್ಮ ಒಳ್ಳೆಯ ಧರ್ಮವಾಗಲು ಸಾಧ್ಯವಿಲ್ಲ. ಅಸ್ಪೃಷ್ಯತೆ, ಲಿಂಗ ತಾರತಮ್ಯ, ಅಸಮಾನತೆ ಮತ್ತು ಶೋಷಣಾ ಪ್ರವೃತ್ತಿಗಳನ್ನು ಒಳಗೊಂಡಿರುವ ಹಿಂದೂ ಧಾರ್ಮಿಕ ವ್ಯವಸ್ಥೆಯನ್ನು ಸುಧಾರಿಸಲು ಹಲವಾರು ಮಹನೀಯರು ಭಾರತದಲ್ಲಿ ವಿವಿಧ ಕಾಲಘಟ್ಟಗಳಲ್ಲಿ ಶ್ರಮಿಸಿದ್ದಾರೆ.

ಸಂತ ಕಬೀರ, ಮಹಾತ್ಮ ಫುಲೆ, ಸ್ವಾಮಿ ದಯಾನಂದ ಸರಸ್ವತಿ, ಈಶ್ವರ ಚಂದ್ರ ವಿದ್ಯಾಸಾಗರ, ರಾಜಾರಾಮ್ ಮೋಹನ್ ರಾಯ್, ಸ್ವಾಮಿ ವಿವೇಕಾನಂದ, ಪೆರಿಯಾರ್, ನಾರಾಯಣ ಗುರು, ಶಿಶುನಾಳ ಶರೀಫ್ ಮೊದಲಾದ ಮಹಾತ್ಮರು ಸರ್ವರಿಗೂ ಸಮಬಾಳನ್ನು ಕೊಡುವ ಹಿಂದೂ ಧರ್ಮವನ್ನು ಮಾನವೀಯ ನೆಲೆಗಟ್ಟಿನಲ್ಲಿ ಪುನಾರಚಿಸುವ ಪ್ರಯತ್ನ ನಡೆಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಬಹುಸಂಖ್ಯಾತ ಹಿಂದುಳಿದ ವರ್ಗಗಳನ್ನು ಅಸ್ಪೃಶ್ಯತೆ, ಅಸಮಾನತೆ ಮತ್ತು ಶೋಷಣೆಯೆಡೆಗೆ ದಬ್ಬುವ ಹಿಂದುತ್ವವಾದಿಗಳ ಹುನ್ನಾರವನ್ನು ಉಗ್ರವಾಗಿ ಖಂಡಿಸಿ ಬಂಡಾಯದ ಸಂಕೇತವಾಗಿ ಬೌದ್ಧ ಧರ್ಮವನ್ನು 1956ರಲ್ಲಿ ಅನಿವಾರ್ಯವಾಗಿ ಸುಮಾರು 7 ಲಕ್ಷ ಸಮಾನ ಮನಸ್ಕ ಅನುಯಾಯಿಗಳೊಂದಿಗೆ ಸ್ವೀಕರಿಸಿದ ಇತಿಹಾಸ ನಮ್ಮ ಮುಂದಿದೆ.

ಅಲ್ಪಸಂಖ್ಯಾತ ವೈದಿಕರು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಎಲ್ಲ ಅವಕಾಶಗಳನ್ನು ಧರ್ಮದ ಹೆಸರಿನಲ್ಲಿ ಕಬಳಿಸುವ ಸಲುವಾಗಿ ತಮ್ಮನ್ನು ‘ಹಿಂದುತ್ವವಾದಿಗಳು’ ಎಂಬುದಾಗಿ ಕರೆದುಕೊಳ್ಳುತ್ತಾರೆ. ಇವರಿಗೆ ನಿಜವಾಗಿಯೂ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಒಳಿತುಗಳಿಗೆ ವಿರುದ್ಧವಾಗಿರುವ ಬ್ರಾಹ್ಮಣ್ಯದ ರಕ್ಷಣೆ ಗೌಪ್ಯ ಕಾರ್ಯಸೂಚಿಯಾಗಿದೆ. ಇವರು ನಿಜವಾದ ಅರ್ಥದಲ್ಲಿ ಹಿಂದೂ ಧರ್ಮ ಮತ್ತು ಇಂಡಿಯಾ ದೇಶದ ರಕ್ಷಕರಲ್ಲ.

ಜಗತ್ತಿನ ಎಲ್ಲ ಧರ್ಮಗಳಲ್ಲಿಯೂ ಪ್ರಕೃತಿ ಧರ್ಮವನ್ನು ಆಧರಿಸಿದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಸಮಾನತೆಗೆ ಅವಕಾಶ ಮಾಡಿಕೊಡುವ ಆರೋಗ್ಯಕರ ಚಿಂತನೆಗಳು ಮತ್ತು ಆಚಾರಗಳು ಯಥೇಚ್ಛವಾಗಿವೆ. ಆದರೆ ಹಿಂದೂ ಧರ್ಮದಲ್ಲಿ ಇರುವ ಅಸ್ಪೃಶ್ಯತೆ, ಜಾತಿಯತೆ, ತಾರತಮ್ಯ ಮತ್ತು ಶೋಷಣಾ ಪ್ರವೃತ್ತಿಗಳಿಂದ ಭಾರತದ ಬಹುಜನರು ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಹಿಂದೂ ಧರ್ಮದ ಸ್ವಘೋಷಿತ ರಕ್ಷಕರೆಂದು ಬೊಬ್ಬೆ ಹೊಡೆಯುವ ವೈದಿಕರೆಂಬ ಸ್ಥಾಪಿತ ಹಿತಾಸಕ್ತಿಗಳು ಪ್ರಮುಖ ಕಾರಣರಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಭಾರತವನ್ನು ಜಾತಿಯ ಹೆಸರಿನಲ್ಲಿ ವಿಭಜಿಸಿ ದುರ್ಬಲಗೊಳಿಸುತ್ತಿರುವ ಸ್ಥಾಪಿತ ಹಿತಾಸಕ್ತಿಗಳ ಗುಂಪಿನಲ್ಲಿ ಎಸ್.ಎಲ್.ಭೈರಪ್ಪ ಎದ್ದು ಕಾಣುತ್ತಿರುವುದು ದುರ್ದೈವದ ಸಂಗತಿಯಾಗಿದೆ.

‘ಹಿಂದೂ ಧರ್ಮದ ಹೃದಯ ವೈಶಾಲ್ಯತೆ ಅನ್ಯಧರ್ಮೀಯರಲ್ಲೂ ಇದ್ದರೆ ಧಾರ್ಮಿಕ ವಿಷಯದಲ್ಲಿ ಹೊಡೆದಾಟ – ಬಡಿದಾಟ ನಡೆಯುವುದಿಲ್ಲ’ ಎಂಬ ಇವರ ಇತ್ತೀಚಿನ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಸ್ವಾಮಿ ವಿವೇಕಾನಂದರು ಅಸ್ಪೃಶ್ಯತೆಯನ್ನು ಆಚರಿಸುವ ಹಿಂದೂ ಧರ್ಮ ಒಳ್ಳೆಯ ಧರ್ಮವಲ್ಲ ಎಂದು ಪ್ರತಿಪಾದಿಸಿದ್ದರು. ಜಾತಿಯ ಕಾರಣಕ್ಕಾಗಿ ಬಹುಸಂಖ್ಯಾತ ಮೂಲನಿವಾಸಿಗಳನ್ನು ಅಸಮಾನತೆಯೆಡೆಗೆ ದಬ್ಬುವ ಹಿಂದೂ ಧರ್ಮ ಜೀವಪರ ಧರ್ಮವಲ್ಲವೆಂದು ಅಂಬೇಡ್ಕರ್ ವಾದಿಸಿದ್ದರು. ಹಿಂದೂ ಧರ್ಮ ಸುಧಾರಣೆಗಾಗಿ ಪ್ರಯತ್ನಿಸಿದ ಮಹನೀಯರೆಲ್ಲರೂ ಅಪ್ಪಟ ಭಾರತೀಯರೇ ಹೊರತು ಹಿಂದೂ ಧರ್ಮ ವಿರೋಧಿಗಳಲ್ಲ ಎಂಬುದನ್ನು ವೈದಿಕರು ಮನಗಾಣಬೇಕು.

ಕೋವಿಡ್-19 ಪ್ರಾಕೃತಿಕ ವಿಕೋಪ ನಿರ್ವಹಣೆ ಸಂದರ್ಭದಲ್ಲಿ ಬೀದಿಗೆ ಬಿದ್ದ ಅಸಹಾಯಕ ಬಡವರಿಗೆ ಒಂದು ರೂಪಾಯಿಯನ್ನು ಕೊಡದ ಭೈರಪ್ಪನವರು ‘ಶ್ರೀ ರಾಮಮಂದಿರ ನಿರ್ಮಾಣ ನಿಧಿಗೆ 10 ಸಾವಿರ ರೂ. ದೇಣಿಗೆ ನೀಡಿರುವುದು’ ಒಂದು ಬಗೆಯ ಧಾರ್ಮಿಕ ಸ್ಟಂಟ್ ಆಗಿದೆಯೇ ಹೊರತು ಬೇರೇನೂ ಅಲ್ಲ. ಕೋಟ್ಯಾಂತರ ಹಿಂದುಳಿದ ಸಮುದಾಯಗಳಿಗೆ ಸೇರಿದ ಭಾರತೀಯರನ್ನು ಅಸಮಾನತೆ ಮತ್ತು ಶೋಷಣೆಗಳೆಡೆಗೆ ದಬ್ಬುವ ವೈದಿಕರ ಕಪಿಮುಷ್ಟಿಗೆ ಒಳಗಾಗಿರುವ ಹಿಂದೂ ಧರ್ಮ ಅತ್ಯಂತ ಶ್ರೇಷ್ಟ ಧರ್ಮವಾಗಲು ಸಾಧ್ಯವಿಲ್ಲವೆಂಬ ಸತ್ಯವನ್ನು ಭೈರಪ್ಪನವರು ಮನಗಾಣಬೇಕು.

ಭಾರತದಲ್ಲಿ ಗೋವಿನ ಜೀವಕ್ಕೆ ಇರುವಷ್ಟು ಮಹತ್ವ ದಲಿತರು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಜೀವಕ್ಕೆ ಇಲ್ಲದಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಒಬ್ಬ ಮನುಷ್ಯ, ಒಂದು ಮತ ಮತ್ತು ಒಂದು ಮೌಲ್ಯ ಇರುವುದು ಸತ್ಯಸಂಗತಿಯಾಗಿದೆ. ಆದರೆ ಭಾರತೀಯ ಸಮಾಜದಲ್ಲಿ ಒಬ್ಬ ಮನುಷ್ಯ, ಒಂದು ಮೌಲ್ಯ ಮತ್ತು ಗೌರವಯುತ ಬದುಕು ಸಿಗದಿರಲು ಭೈರಪ್ಪನವರಂತಹ ಧಾರ್ಮಿಕ ಮೂಲಭೂತವಾದಿಗಳ ಹುನ್ನಾರ ಪ್ರಮುಖ ಕಾರಣವಾಗಿದೆ.

ಆರ್ಥಿಕವಾಗಿಯೂ ಮೇಲ್ಜಾತಿಯವರಿಗೆ ಸಂಪತ್ತು ಮತ್ತು ಕೆಳಜಾತಿಯವರಿಗೆ ಬಡತನ ಪ್ರಾಪ್ತವಾಗಲು ಹಿಂದೂ ಧಾರ್ಮಿಕ ವ್ಯವಸ್ಥೆ ಕಾರಣವಾಗಿದೆಯೆಂಬ ಸತ್ಯವನ್ನು ಭೈರಪ್ಪನಂಥವರು ಒಪ್ಪಿಕೊಳ್ಳುವುದಿಲ್ಲ. ಸತ್ಯವನ್ನು ಮಂಡಿಸುವ ಇತಿಹಾಸಕಾರರ ಅಬ್ಬರ ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಡಿಮೆಯಾಗಿದೆಯೆಂಬ ಭೈರಪ್ಪನವರ ಹೇಳಿಕೆ ಅವರ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಕೇಂದ್ರದಲ್ಲಿ ಸಂಸ್ಕೃತಿಯುಳ್ಳವರು, ಇತಿಹಾಸಪ್ರಜ್ಞೆ ಇರುವವರು, ಜನರ ಜೀವಕ್ಕೆ ಬೆಲೆ ಕೊಡುವವರು ಮತ್ತು ನಿಜವಾದ ಭಾರತೀಯರು ಅಧಿಕಾರಕ್ಕೆ ಬಂದಿದ್ದ ಪಕ್ಷದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಹಿಂದುಳಿದವರು ಮತ್ತು ಶೋಷಿತರು ಮೂಲಭೂತ ಹಕ್ಕುಗಳನ್ನು ಕಳೆದುಕೊಂಡು ಬೀದಿಯಲ್ಲಿ ಅನಾಥರಾಗಿ ಸಾಯುವಂತಹ ಹೀನಾಯ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಭೈರಪ್ಪನವರು ಏಕೆ ಅರ್ಥಮಾಡಿಕೊಳ್ಳಬಾರದು?

ರೈತರ ಭೂಮಿ, ಕಾರ್ಮಿಕರ ಉದ್ಯೋಗ, ಯುವಜನರ ಬದುಕು, ಮಹಿಳೆಯರ ಮಾನ ಮತ್ತು ಶೋಷಿತರ ಹಕ್ಕುಗಳನ್ನು ಕಸಿದುಕೊಳ್ಳುವಂತಹ ಆಳುವವರನ್ನು ಸಂಸ್ಕೃತಿಯುಳ್ಳವರು ಎಂದು ಕರೆಯಲು ಸಾಧ್ಯವೇ? ಭೈರಪ್ಪನಂತವರು ಇಷ್ಟೆಲ್ಲಾ ಅನಾಹುತಗಳು ಜರುಗುತ್ತಿದ್ದರೂ ಸಹ ‘ದೇಶದ ಜನರಲ್ಲಿ ಹೊಸ ಪ್ರಜ್ಞೆ ಹುಟ್ಟಿದೆ’ ಎಂಬ ಹಸಿ ಸುಳ್ಳನ್ನು ಸಾರ್ವಜನಿಕವಾಗಿ ಹೇಳಿರುವುದು ಖಂಡನೀಯ.

ದಿಲ್ಲಿಯಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಯಲ್ಲಿ ಪಂಜಾಬ್‌ನವರು ಮಾತ್ರ ಭಾಗಿಯಾಗಿದ್ದಾರೆ ಎಂಬ ಭೈರಪ್ಪನವರ ಧೋರಣೆ ಅಮಾನವೀಯವಾಗಿದೆ. ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರಪ್ರದೇಶ, ಮಧ್ಯಪ್ರದೇಶ, ಬಿಹಾರ, ಕರ್ನಾಟಕ ಮೊದಲಾದೆಡೆಯಿಂದ ಸಹಸ್ರಾರು ರೈತರು ಅಹಿಂಸಾತ್ಮಕವಾಗಿ ಹಾಗೂ ಪ್ರಜಾಸತ್ತಾತ್ಮಕವಾಗಿ ರೈತ ವಿರೋಧಿ ದೆಹಲಿ ಗದ್ದುಗೆಗೆ ಮುತ್ತಿಗೆ ಹಾಕಿರುವುದು ದೇಶಬಾಂಧವರಲ್ಲಿ ಮೂಡಿರುವ ಹೊಸ ಹೋರಾಟ ಪ್ರಜ್ಞೆಗೆ ಸಾಕ್ಷಿಯಾಗಿದೆಯೆಂಬ ಕನಿಷ್ಟ ಅರಿವು ಭೈರಪ್ಪನವರಿಗೆ ಇಲ್ಲ. ಎಲ್ಲ ರಾಜ್ಯಗಳಲ್ಲಿಯೂ ರೈತ ವಿರೋಧಿ ಸರ್ಕಾರದ ಧೋರಣೆ ವಿರುದ್ಧ ನಿರಂತರ ಪ್ರತಿಭಟನೆಗಳು ಜರುಗುತ್ತಿರುವುದನ್ನು ನೋಡದಷ್ಟು ಅಂಧರಾಗಿದ್ದಾರೆಯೇ ಭೈರಪ್ಪ? ನಮ್ಮ ನಾಡಿನ ಸಾಕ್ಷಿಪ್ರಜ್ಞೆ ಹಾಗೂ ರೈತನಾಯಕ ದೇವನೂರ ಮಹಾದೇವ ಹೇಳಿರುವ ಹಾಗೆ ಭೈರಪ್ಪನವರು ಜೀವಪರ ಸಂವೇದನೆ ಕಳೆದುಕೊಂಡಿದ್ದಾರೆ. ದೇಗುಲಗಳ ನಿರ್ಮಾಣಕ್ಕಿಂತ ಪ್ರಬುದ್ಧ ದೇಶದ ನಿರ್ಮಾಣ ಬಹುಮುಖ್ಯವೆಂಬ ಸತ್ಯವನ್ನು ಹಿಂದೂ ಸಾಮ್ರಾಜ್ಯಶಾಹಿಯ ವಕ್ತಾರ ಭೈರಪ್ಪ ಅವರಿಗೆ ಅರ್ಥವಾಗಬೇಕಿದೆ!.

ಸಂವಿಧಾನ ಶಿಲ್ಪಿ ಹಾಗೂ ಮಾನವತಾವಾದಿ ಅಂಬೇಡ್ಕರ್ ‘ಒಂದು ದೇವಾಲಯವನ್ನು ನಿರ್ಮಿಸುವುದರಿಂದ ಒಂದು ಸಾವಿರ ಭಿಕ್ಷುಕರು ಹುಟ್ಟುತ್ತಾರೆ. ಆದರೆ ಒಂದು ಗ್ರಂಥಾಲಯವನ್ನು ಕಟ್ಟುವುದರಿಂದ ಒಂದು ಲಕ್ಷ ಜನ ಪ್ರಜ್ಞಾವಂತರು ರೂಪುಗೊಳ್ಳುತ್ತಾರೆ’ ಎಂದು ನುಡಿದ ಸತ್ಯ ಭೈರಪ್ಪನಂತಹವರಿಗೆ ಅರ್ಥವಾಗುವುದುಂಟೆ? ದೇವಾಲಯ ನಿರ್ಮಾಣದಿಂದ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯವಿಲ್ಲವೆಂಬುದನ್ನು ಭೈರಪ್ಪನಂತಹ ಹಿಂದುತ್ವವಾದಿಗಳು ಮೊದಲು ಅರಿಯಬೇಕು. ಮಂದಿರ ನಿರ್ಮಾಣಕ್ಕಿಂತ ಮಿಗಿಲಾಗಿ ಎಲ್ಲ ಭಾರತೀಯರಿಗೂ ಆಹಾರ, ವಸತಿ, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಸುರಕ್ಷತೆಗಳನ್ನು ಒದಗಿಸಿ ದೇಶವನ್ನು ಪ್ರಬುದ್ಧ ರಾಷ್ಟ್ರವನ್ನಾಗಿ ರೂಪಿಸುವ ಕೆಲಸ ಅತಿಮುಖ್ಯವೆಂದು ಇಂದು ನಮ್ಮನ್ನಾಳುತ್ತಿರುವವರಿಗೆ ಮನದಟ್ಟು ಮಾಡಿಕೊಡುವುದು ಪ್ರಜ್ಞಾವಂತರ ಹೊಣೆಗಾರಿಕೆಯಾಗಿದೆ.

 

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ವಿಶ್ರಾಂತ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಮೈವಿವಿ, ಮೈಸೂರು)


ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...