Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...