Homeಮುಖಪುಟಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ:...

ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

- Advertisement -
- Advertisement -

“ರಾಜ್ಯಗಳ ಬಳಿ ಕೈಗೆಟುಕುವ ವಸತಿ ಒದಗಿಸಲು ಹಣವಿಲ್ಲ; ಜನರಿಗೆ ಕುಡಿಯಲು ಶುದ್ಧ ನೀರಿಲ್ಲ. ಆದರೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಸೋಮವಾರ ಅರ್ಜಿಯನ್ನು ಆಲಿಸಲು ನಿರಾಕರಿಸುವಾಗ ಹೇಳಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ದೇಶದಲ್ಲಿ ಪ್ರತ್ಯೇಕ ಸೈಕಲ್ ಟ್ರ್ಯಾಕ್‌ಗಳನ್ನು ರಚಿಸುವ ಅರ್ಜಿಯನ್ನು ವಿಚಾರಣೆ ನಡೆಸಿತು.

“ಕೊಳೆಗೇರಿಗಳಿಗೆ ಹೋಗಿ, ಜನರು ಯಾವ ಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಿ. ಕೈಗೆಟುಕುವ ವಸತಿ ಒದಗಿಸಲು ರಾಜ್ಯಗಳ ಬಳಿ ಹಣವಿಲ್ಲ. ಆದರೆ ನಾವಿಲ್ಲಿ ಹಗಲುಗನಸು ಕಾಣುತ್ತಿದ್ದೇವೆ. ಜನರಿಗೆ ಮೂಲಭೂತ ಸೌಕರ್ಯಗಳಿಲ್ಲ, ಸೈಕಲ್ ಟ್ರ್ಯಾಕ್‌ಗಳು ಇರಬೇಕೆಂದು ನೀವು ಹಗಲುಗನಸು ಕಾಣುತ್ತಿದ್ದೀರಿ” ಎಂದು ಪೀಠ ಹೇಳಿದೆ.

“ನಮ್ಮ ಆದ್ಯತೆಗಳು ತಪ್ಪಾಗುತ್ತಿವೆ. ನಾವು ನಮ್ಮ ಆದ್ಯತೆಗಳನ್ನು ಸರಿಯಾಗಿ ಮಾಡಿಕೊಳ್ಳಬೇಕು. ಸಂವಿಧಾನದ 21ನೇ ವಿಧಿಯ ಬಗ್ಗೆ ನಾವು ಹೆಚ್ಚು ಚಿಂತಿತರಾಗಬೇಕು. ಜನರಿಗೆ ಕುಡಿಯಲು ಶುದ್ಧ ನೀರಿಲ್ಲ. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಮತ್ತು ನೀವು ಸೈಕಲ್ ಟ್ರ್ಯಾಕ್‌ಗಳನ್ನು ಬಯಸುತ್ತೀರಾ?” ಎಂದು ಸೈಕ್ಲಿಂಗ್ ಪ್ರವರ್ತಕ ದೇವಿಂದರ್ ಸಿಂಗ್ ನಾಗಿ ಸಲ್ಲಿಸಿದ ಪಿಐಎಲ್‌ ವಿಚಾರಣೆ ವೇಳೆ ನ್ಯಾಯಾಧೀಶರು ಹೇಳಿದರು. “ಹಲವಾರು ರಾಜ್ಯಗಳಲ್ಲಿ ಸೈಕಲ್ ಟ್ರ್ಯಾಕ್‌ಗಳಿವೆ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಸುಪ್ರೀಂ ಕೋರ್ಟ್‌ನ ಒಂದು ಗೇಟ್‌ನ ಹೊರಗೆ ಸೈಕಲ್ ಟ್ರ್ಯಾಕ್ ಇದೆ ಎಂದು ಅವರು ಹೇಳಿದರು.

ಅರ್ಜಿದಾರರ ವಕೀಲರು ಆಯ್ದ ನಗರಗಳು ಮತ್ತು ಪಟ್ಟಣಗಳಲ್ಲಿ ಮೂಲಭೂತ ಮೂಲಸೌಕರ್ಯಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುವ ಅಟಲ್ ಮಿಷನ್ ಫಾರ್ ರಿಜುವನೇಷನ್ ಮತ್ತು ಅರ್ಬನ್ ಟ್ರಾನ್ಸ್‌ಫರ್ಮೇಷನ್ ಯೋಜನೆಯನ್ನು ಉಲ್ಲೇಖಿಸಿದರು.

ಇದನ್ನೂ ಒದಿ; ಮಸೂದೆಗಳ ಅನುಮೋದನೆಗೆ ವಿಳಂಬ; ತಮಿಳುನಾಡು ರಾಜ್ಯಪಾಲರಿಂದ ಉತ್ತರ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...