Homeಮುಖಪುಟರೈಲ್ವೇ ಹಳಿಗಳ ಬಳಿಯಿರುವ ಕೊಳಗೇರಿಗಳನ್ನು ತಕ್ಷಣ ಕೆಡವಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದ ಮಾಹಿತಿ

ರೈಲ್ವೇ ಹಳಿಗಳ ಬಳಿಯಿರುವ ಕೊಳಗೇರಿಗಳನ್ನು ತಕ್ಷಣ ಕೆಡವಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದ ಮಾಹಿತಿ

ಮೂರು ತಿಂಗಳ ಒಳಗಾಗಿ ನವದೆಹಲಿಯ 140 ಕಿಲೋಮೀಟರ್ ಉದ್ದದ ರೈಲ್ವೆ ಹಳಿಗಳ ಸುತ್ತಲಿನ ಸುಮಾರು 48,000 ಕೊಳಗೇರಿ ವಾಸಸ್ಥಳಗಳನ್ನು ತೆಗೆದುಹಾಕುವಂತೆ ಸುಪ್ರೀಂ ನಿರ್ದೇಶಿಸಿತ್ತು.

- Advertisement -
- Advertisement -

ದೆಹಲಿಯ ರೈಲ್ವೇ ಹಳಿಗಳ ಬಳಿ ಇರುವ ಕೊಳಗೇರಿಗಳನ್ನು ತಕ್ಷಣಕ್ಕೆ ಕೆಡವಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌‌ಗೆ ಮಾಹಿತಿ ನೀಡಿದೆ ಎಂದು ಕಾನೂನು ಸುದ್ದಿ ವೆಬ್‌ಸೈಟ್ ಲೈವ್ ಲಾ.ಇನ್ ವರದಿ ಮಾಡಿದೆ. ಸುಪ್ರೀಂ ಕೋರ್ಟ್ ಆಗಸ್ಟ್ 31ರಂದು ಈ ಕೊಳೆಗೇರಿಗಳನ್ನು ತೆಗೆದುಹಾಕುವಂತೆ ಆದೇಶಿಸಿತ್ತು.

ರೈಲ್ವೇ ಇಲಾಖೆಯು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಸಮಾಲೋಚಿಸಿ 4 ವಾರಗಳಲ್ಲಿ ಪರಿಹಾರ ಕಂಡುಕೊಳ್ಳುವವರೆಗೆ ರೈಲ್ವೆ ಹಳಿಗಳ ಬಳಿಯ ಕೊಳಗೇರಿಗಳನ್ನು ತೆರವುಗೊಳಿಸಲಾಗುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ ಬಾಬ್ದೆ ನೇತೃತ್ವದ ನ್ಯಾಯಪೀಠಕ್ಕೆ ಸಾಲಿಸಿಟರ್ ಜನರಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಮೂರು ತಿಂಗಳ ಒಳಗಾಗಿ ನವದೆಹಲಿಯ 140 ಕಿಲೋಮೀಟರ್ ಉದ್ದದ ರೈಲ್ವೆ ಹಳಿಗಳ ಸುತ್ತಲಿನ ಸುಮಾರು 48,000 ಕೊಳಗೇರಿ ವಾಸಸ್ಥಳಗಳನ್ನು ತೆಗೆದುಹಾಕುವಂತೆ ಸುಪ್ರೀಂ ನಿರ್ದೇಶಿಸಿತ್ತು. ಆಗಸ್ಟ್ 31ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ಆದೇಶವನ್ನು ಹಿಂಪಡೆಯಬೇಕೆಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಅರ್ಜಿ ಸಲ್ಲಿಸಿದ್ದರು.

ಕೊಳಗೇರಿಗಳನ್ನು ತೆಗೆದುಹಾಕುವ ಆದೇಶಕ್ಕೆ ಯಾವುದೇ ನ್ಯಾಯಾಲಯ ತಡೆ ನೀಡಬಾರದು ಎಂದು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠ ನಿರ್ದೇಶಿಸಿತ್ತು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

ದೆಹಲಿಯ ಎನ್‌ಸಿಟಿ (National Capital Territory) ಪ್ರದೇಶದಲ್ಲಿ 140 ಕಿ.ಮೀ ಮಾರ್ಗದ ಉದ್ದದ ಟ್ರ್ಯಾಕ್ ಬಳಿ ಕೊಳಗೇರಿಗಳಿವೆ ಎಂದು ರೈಲ್ವೆ ಇಲಾಖೆ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿದ ನಂತರ ನ್ಯಾಯಪೀಠ ಈ ಆದೇಶ ನೀಡಿತ್ತು. ಇದರಲ್ಲಿ ಸುಮಾರು 70 ಕಿ.ಮೀ ಮಾರ್ಗದ ಉದ್ದದ ಹಳಿಗಳ ಮೇಲೆ ಸಮೀಪದಲ್ಲಿರುವ ದೊಡ್ಡ ಕೊಳಗೇರಿ ಗುಡಿಸಲುಗಳು ಪರಿಣಾಮ ಬೀರುತ್ತಿವೆ ಎಂದು ರೈಲ್ವೆ ಹೇಳಿದೆ. ಜೊತೆಗೆ ಅತಿಕ್ರಮಣ ಮಾಡಿರುವ ಕೊಳಗೇರಿಗಳನ್ನು ತೆಗೆದುಹಾಕುವಲ್ಲಿ “ರಾಜಕೀಯ ಹಸ್ತಕ್ಷೇಪ”ವಿದೆ ಎಂದು ರೈಲ್ವೆ ನ್ಯಾಯಾಲಯಕ್ಕೆ ತಿಳಿಸಿತ್ತು.

ಸುಪ್ರೀಂ ಆದೇಶದ ನಂತರ, ಕೊಳಗೇರಿ ನಿವಾಸಿಗಳಿಗೆ ಪುನರ್ವಸತಿ ಕೋರಿ ಅಜಯ್ ಮಾಕನ್ ಈ ಹಿಂದೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.  ಕೊಳಗೇರಿ ನಿವಾಸಿಗಳನ್ನು ಹೊರಹಾಕುವ ಆದೇಶವನ್ನು ಹಿಂಪಡೆಯಲು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೂ ಸುಪ್ರೀಂ ಕೋರ್ಟ್ ಕೊಳಗೇರಿಗಳನ್ನು ತೆಗೆದುಹಾಕುವಂತೆ ಆದೇಶಿಸಿತ್ತು.

ಸದ್ಯ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಕಾರ್ಯರೂಪಕ್ಕೆ ತರಲು ಸಮಯ ಬೇಕು ಎಂದಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಇದು ಸ್ಲಂ ನಿವಾಸಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದಂತಾಗಿದೆ.


ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...