Homeಮುಖಪುಟಸ್ಮೃತಿ ಇರಾನಿ, ಅಜಯ್ ಮಿಶ್ರಾ ಸೇರಿ 16 ಹಾಲಿ ಕೇಂದ್ರ ಸಚಿವರಿಗೆ ಸೋಲುಣಿಸಿದ ಮತದಾರರು

ಸ್ಮೃತಿ ಇರಾನಿ, ಅಜಯ್ ಮಿಶ್ರಾ ಸೇರಿ 16 ಹಾಲಿ ಕೇಂದ್ರ ಸಚಿವರಿಗೆ ಸೋಲುಣಿಸಿದ ಮತದಾರರು

- Advertisement -
- Advertisement -

ಲೋಕಸಭೆ ಚುನಾವಣೆಯ ಸಂಪೂರ್ಣ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊಡ್ಡ ಹೊಡೆತ ಬಿದ್ದಿದೆ. ಈ ಬಾರಿ ಕೇಂದ್ರದ ಹಾಲಿ 16 ಸಚಿವರು ಸೋಲನ್ನು ಕಂಡಿದ್ದಾರೆ.

ಅಮೇಥಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್‌ ಅಭ್ಯರ್ಥಿ ಕಿಶೋರಿ ಲಾಲ್‌ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಮೋಹನ್‌ಲಾಲ್‌ಗಂಜ್ ಕ್ಷೇತ್ರದಲ್ಲಿ ಕೇಂದ್ರ ವಸತಿ ಖಾತೆ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಸಮಾಜವಾದಿ ಪಕ್ಷದ ಆರ್.ಕೆ. ಚೌಧರಿ ವಿರುದ್ಧ ಸೋಲನ್ನು ಕಂಡುಕೊಂಡಿದ್ದಾರೆ. ಚಂದೌಲಿ ಕ್ಷೇತ್ರದಲ್ಲಿ ಕೈಗಾರಿಕೆ ಖಾತೆ ಸಚಿವ ಮಹೇಂದ್ರ ನಾಥ್ ಪಾಂಡೆ ಸಮಾಜವಾದಿ ಪಕ್ಷ ಎಸ್‌ಪಿಯ ಬೀರೇಂದ್ರ ಸಿಂಗ್ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ.

ತಿರುವನಂತಪುರಂ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಹಾಲಿ ಸಚಿವರಾದ ರಾಜೀವ್ ಚಂದ್ರಶೇಖರ್ ಕಾಂಗ್ರೆಸ್‌ ನಾಯಕ ಶಶಿತರೂರ್‌ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಲಖಿಂಪುರ ಖೇರಿ ಕ್ಷೇತ್ರದಲ್ಲಿ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ.

ಬಂಕುರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್, ತೃಣಮೂಲ ಕಾಂಗ್ರೆಸ್‌ನ ಅಭ್ಯರ್ಥಿ ಅರೂಪ್ ಚಕ್ರವರ್ತಿ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಕುಂತಿ ಲೋಕಸಭೆ ಕ್ಷೇತ್ರದಲ್ಲಿ ಕೇಂದ್ರ ರೈತ ಮತ್ತು ಕೃಷಿ ಕಲ್ಯಾಣೆ ಖಾತೆ ಸಚಿವ ಅರ್ಜುನ್ ಮುಂಡಾ ಕಾಂಗ್ರೆಸ್‌ನ ಕಾಳಿಚರಣ್ ಮುಂಡಾ ವಿರುದ್ಧ ಸೋತಿದ್ದಾರೆ.

ಬೀದರ್‌ನಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್ ಖಂಡ್ರೆ ಸೋಲಿಸಿದ್ದಾರೆ. ರಾಜಸ್ಥಾನದ ಬಾರ್ಮರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಮ್‌ ಬೆನಿವಾಲ್‌ ವಿರುದ್ಧ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಸೋಲನ್ನು ಕಂಡಿದ್ದು, ಮೂರನೇ ಸ್ಥಾನಕ್ಕೆ ತಲ್ಲಲ್ಪಟ್ಟಿದ್ದಾರೆ.

ಕೂಚ್ ಬೆಹಾರ್ ಕ್ಷೇತ್ರದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಟಿಎಂಸಿಯ ಜಗದೀಶ್ ಚಂದ್ರ ಬಸುನಿಯಾ ವಿರುದ್ಧ ಸೋಲನ್ನು ಕಂಡಿದ್ದಾರೆ. ಮುಜಾಫರ್ ನಗರದಲ್ಲಿ ಸಮಾಜವಾದಿ ಪಕ್ಷದ ಹರೇಂದ್ರ ಸಿಂಗ್ ಮಲಿಕ್ ವಿರುದ್ಧ ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಸೋಲನ್ನು ಅನುಭವಿಸಿದ್ದಾರೆ. ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು ಕೇರಳದ ತಿರುವನಂತಪುರಂನಲ್ಲಿ ಸೋಲು ಕಂಡಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಎಲ್ ಮುರುಗನ್ ಅವರು ತಮಿಳುನಾಡಿನ ನೀಲಗಿರಿಯಲ್ಲಿ ಡಿಎಂಕೆಯ ಎ ರಾಜಾ ವಿರುದ್ಧ 2,40,585 ಮತಗಳ ಗಣನೀಯ ಅಂತರದಿಂದ ಸೋತಿದ್ದಾರೆ.

ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಯುಪಿಯ ಫತೇಪುರ್‌ನಲ್ಲಿ ಸೋತಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರು ಮಹಾರಾಷ್ಟ್ರದ ಜಲ್ನಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಲ್ಯಾಣ ವೈಜನಾಥ್ ರಾವ್ ಕಾಳೆ ವಿರುದ್ಧ ಸೋತಿದ್ದಾರೆ. ಸಂಪುಟ ಸಚಿವ ಆರ್‌ಕೆ ಸಿಂಗ್ ಅವರು ಬಿಹಾರದ ಅರ್ರಾದಿಂದ ಸಿಪಿಐ(ಎಂಎಲ್)ನ ಸುದಾಮ ಪ್ರಸಾದ್ ವಿರುದ್ಧ ಸೋತಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...