Homeಮುಖಪುಟಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ. 

ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ಹಾಗೆಯೇ ಯಾದವ್ ವಿರುದ್ಧದ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಅಪರಾಧಗಳು ಈ ಹಿಂದೆ ಗುರುಗ್ರಾಮದಲ್ಲಿ ದಾಖಲಾಗಿರುವ ಎಫ್‌ಐಆರ್ ಅನ್ನು ಆಧರಿಸಿವೆ. ಆ ಪ್ರಕರಣದ ಅಂತಿಮ ವರದಿ ಈಗಾಗಲೇ ಸಲ್ಲಿಕೆಯಾಗಿದೆ ಎಂದು ಹೇಳಿದೆ.

ಎಲ್ವಿಶ್ ಯಾದವ್ ಅವರಿಂದ ನೇರವಾಗಿ ಯಾವುದೇ ಹಾವಿನ ವಿಷ ಅಥವಾ ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಸರಿಯಾದ ಪ್ರಕ್ರಿಯೆಯ ಮೂಲಕ ಸೆಕ್ಷನ್ 55 ರ ಅಡಿಯಲ್ಲಿ ದೂರು ದಾಖಲಿಸಲು ಸಂಬಂಧಪಟ್ಟ ಪ್ರಾಧಿಕಾರಕ್ಕೆ ನ್ಯಾಯಾಲಯವು ಸ್ವಾತಂತ್ರ್ಯ ನೀಡಿದೆ.

ಇನ್ನು ವಶಪಡಿಸಿಕೊಂಡ ದ್ರವ ಪದಾರ್ಥ, ಅಂದರೆ ಹಾವಿನ ವಿಷ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ (ಎನ್‌ಡಿಪಿಎಸ್‌) ಅಡಿಯಲ್ಲಿ ಬರುವ ನಿಷೇಧಿತ ಮಾದಕ ವಸ್ತುವಲ್ಲ. ಆದ್ದರಿಂದ ಈ ಕಾಯ್ದೆ ಅನ್ವಯವಾಗಲ್ಲ ಎಂದೂ ಕೋರ್ಟ್ ಹೇಳಿದೆ.

2023ರ ನವೆಂಬರ್ 22ರಂದು ಯಾದವ್ ವಿರುದ್ದ ಪ್ರಕರಣ ದಾಖಲಾಗಿತ್ತು. 2024ರ ಮಾರ್ಚ್ 17ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಹಾವಿನ ವಿಷವನ್ನು ಬಳಸಿದ ಆರೋಪದ ಮೇಲೆ ಯಾದವ್ ಬಂಧನ ಮಾಡಲಾಗಿತ್ತು.

ಅಲಹಾಬಾದ್ ಹೈಕೋರ್ಟ್ ಯಾದವ್ ವಿರುದ್ಧದ ಆರೋಪವನ್ನು ರದ್ದುಗೊಳಿಸಲು ನಿರಾಕರಿಸಿ ಇದು ಗಂಭೀರ ಅಪರಾಧ ಎಂದು ಪರಿಗಣಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯಾದವ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ವರ್ಷ ಆಗಸ್ಟ್ 6ರಂದು ಸುಪ್ರೀಂ ಯಾದವ್ ವಿರುದ್ಧದ ವಿಚಾರಣೆಗೆ ತಡೆ ನೀಡಿತ್ತು. ಇದೀಗ ಕಾನೂನು ಚೌಕಟ್ಟಿನಲ್ಲಿ ಈ ಪ್ರಕರಣ ಬರದು ಎಂದು ಎಫ್‌ಐಆರ್ ರದ್ದುಗೊಳಿಸಿದೆ.

ಪೊಲೀಸರು ಈ ಪ್ರಕರಣದಲ್ಲಿ ಸುಮಾರು 1200 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...