Homeಮುಖಪುಟನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ "ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು": ಪ್ರಿಯಾಂಕ ಗಾಂಧಿ

ನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು”: ಪ್ರಿಯಾಂಕ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರ ಮೇಲಿನ ಅಪರಾಧದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ಅಪರಾಧಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಮಹಿಳೆಯರಿಗೆ ಸಮಾಜದಲ್ಲಿ ಅಧಿಕಾರ ಸಿಗಬೇಕು ಎಂದು ನಾನು ಹೇಳುತ್ತೇನೆ. ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಲು, ಪಂಚಾಯತ್ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಮತ್ತು ರಾಜಕೀಯದಲ್ಲಿ ಮುಂದೆ ಬರಲು ನಾನು ನನ್ನ ಸಹೋದರಿಯರಿಗೆ ಹೇಳುತ್ತೇನೆ. ಇದರಿಂದಾಗಿ ನೀವು ಅಧಿಕಾರ ಪಡೆಯುತ್ತೀರಿ ಮತ್ತು ಇಂತಹ ಘಟನೆಗಳು ನಡೆಯದಂತೆ ನಿಮ್ಮನ್ನು ರಕ್ಷಿಸಿಕೊಳ್ಳಬಹುದು” ಎಂದು ಪ್ರಿಯಾಂಕಾ ಗಾಂಧಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉನ್ನಾವೋ ತೆರಳಿ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾತನಾಡಿದ ಅವರು ಅಪರಾಧದ ವಿರುದ್ಧ ನಿಮ್ಮನ್ನು ರಕ್ಷಿಸಿಕೊಳ್ಳಲು ಪುರುಷರಿಂದ ಶಕ್ತಿಯನ್ನು ಕಸಿದುಕೊಳ್ಳಿ ಎಂದು ನೆರೆದಿದ್ದ ಮಹಿಳೆಯರಿಗೆ ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ.

ಎರಡು ದಿನಗಳ ಉತ್ತರ ಪ್ರದೇಶ ಭೇಟಿಯಲ್ಲಿರುವ ಕಾಂಗ್ರೆಸ್ ಮುಖಂಡೆ ತಮ್ಮ ಪಕ್ಷವು ಎಲ್ಲ ಹಂತದ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲಿದೆ ಎಂದು ಪುನರುಚ್ಚರಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ, ವಿಶೇಷವಾಗಿ ಮಹಿಳೆಯರ ಮೇಲಿನ ಅಪರಾಧದ ಕುರಿತು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮೇಲೆ ದಾಳಿ ಮಾಡಿದ ಅವರು, “ಉನ್ನಾವೊದಲ್ಲಿ, ಕಳೆದ 11 ತಿಂಗಳಲ್ಲಿ ಸುಮಾರು 90 ಅತ್ಯಾಚಾರ ಪ್ರಕರಣಗಳು ಕಂಡುಬಂದಿವೆ. “ಕೊನೆಯ ಘಟನೆ ವರದಿಯಾದಾಗ, ಸರ್ಕಾರವು ಅಪರಾಧಿಗಳನ್ನು ಕೊನೆಯವರೆಗೂ ರಕ್ಷಿಸಿತು ಎಂದು ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಉಲ್ಲೇಖಿಸಿ ಮಾತನಾಡಿದ್ದಾರೆ.

“ಮೈನ್‌ಪುರಿಯಲ್ಲಿ, ಸಂಭಾಲ್‌ನಲ್ಲಿ ಏನಾಯಿತು ಎಂದು ನೀವು ನೋಡಿರಬೇಕು? ಮಹಿಳೆಯರಿಗೆ ಈ ಸರ್ಕಾರದ ಮೇಲೆ ಹೇಗೆ ನಂಬಿಕೆ ಇಡಬಹುದು? ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಪ್ರಥಮ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಈ ಕುರಿತು ಏನು ಹೇಳಿದ್ದಾರೆ, ಯಾವ ಕ್ರಮ ತೆಗೆದುಕೊಂಡಿದ್ದಾರೆ? ಈಗಲಾದರೂ ಅವರು ಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದೆ “ಎಂದು ಅವರು ಒತ್ತಿ ಹೇಳಿದ್ದಾರೆ.

ಸರ್ಕಾರ ಇದನ್ನು ತುರ್ತು ಪರಿಸ್ಥಿತಿಯಂತೆ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ನನ್ನ ಸಲಹೆಯೆಂದರೆ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಕೋಶವೊಂದನ್ನು ಸ್ಥಾಪಿಸಬೇಕು. ಅಲ್ಲಿ ಪ್ರತಿ ಜಿಲ್ಲೆಯ ಎಸ್‌ಪಿ ನೇರವಾಗಿ ಮಹಿಳೆಯರ ದೂರುಗಳ ಬಗ್ಗೆ ಸಿಎಂಗೆ ವರದಿ ಮಾಡಬೇಕು. ಅವುಗಳಿಗೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಎಫ್‌ಐಆರ್ ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಯನ್ನು ಒದಗಿಸಬೇಕು” ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿ ಹೇಗಿದೆಯೆಂದರೆ, ಮಹಿಳೆಯರು ಇಂದು ತಮ್ಮ ಮನೆಗಳಿಂದ ಹೊರಬರಲು ಭಯಪಡುತ್ತಿದ್ದಾರೆ.  ಉನ್ನಾವೊ ಪ್ರಕರಣದಲ್ಲಿ, ಎಫ್‌ಐಆರ್ ದಾಖಲಿಸಲು ನಾಲ್ಕು ತಿಂಗಳು ಬೇಕಾಯಿತು ಮತ್ತು ಅದೂ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾತ್ರ.” ಎಂದು ಅವರು ಹೇಳಿದ್ದಲ್ಲದೇ ಈ ಸರ್ಕಾರ ಮಹಿಳೆಯರ ಪರವೋ ಅಥವಾ ಅಪರಾಧಿಗಳ ಪರವಾಗಿದ್ದಾರೆಯೇ ಎಂದು ಸರ್ಕಾರ ನಿರ್ಧರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರ ಮೇಲಿನ ಅಪರಾಧವನ್ನು ಎದುರಿಸಲು ಹೆಚ್ಚು ಕಠಿಣ ಕಾನೂನುಗಳ ಅಗತ್ಯವಿದೆಯೇ ಎಂದು ಕೇಳಿದಾಗ, “ನಿರ್ಭಯಾ ಪ್ರಕರಣದ ನಂತರ ಕಾನೂನು ಸ್ಪಷ್ಟವಾಗಿದೆ ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಪ್ರಿಯಾಂಕ ಗಾಂಧಿಯವರ ಅಭಿಪ್ರಾಯ ಅಕ್ಷರಶಃ ಸತ್ಯ. ಜನಸಂಖ್ಯೆಯ ಅರ್ಧದಷ್ಟು ಇರುವ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾದ ಅವಕಾಶ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...