Homeಮುಖಪುಟ’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

- Advertisement -
- Advertisement -

ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರಾಖಂಡದ ಹೊಸ ಮುಖ್ಯಮಂತ್ರಿ ವಿರುದ್ಧ ವಿರೋಧ ಪಕ್ಷಗಳು ಸೇರಿದಂತೆ ಟ್ವಿಟರ್‌ನಲ್ಲಿ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಹರಿದ ಡೆನಿಮ್‌ ಜೀನ್ಸ್‌ಗಳನ್ನು ಧರಿಸಿದ ಚಿತ್ರಗಳನ್ನು ಪೋಸ್ಟ್ ಮಾಡಿ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ’ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಡೆಹ್ರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಉತ್ತರಾಖಂಡ ರಾಜ್ಯ ಆಯೋಗ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್, ಹರಿದ ಬಟ್ಟೆ ಧರಿಸಿದ ಮಹಿಳೆಯರಿಂದ ಮಕ್ಕಳಿಗೆ ಸಂಸ್ಕಾರ ಕಲಿಸಲು ಸಾಧ್ಯವೆ..? ಮಕ್ಕಳು ಪೋಷಕರಿಂದ ಮನೆಯಲ್ಲಿಯೇ ಹಾಳಾಗುತ್ತಾರೆ. ಇದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ. ಇವರು ಸಮಾಜಕ್ಕೆ ನೀಡುತ್ತಿರುವ ಸಂದೇಶವೇನು’ ಎಂದಿದ್ದರು.

ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್‌ರ ಈ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದವರಲ್ಲಿ ಮೊದಲಿಗರು ಕಾಂಗ್ರೆಸ್ ನಾಯಕ ಸಂಜಯ್ ಝಾ. ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ತಿರಥ್ ಸಿಂಗ್ ರಾವತ್ ಹೇಳಿಕೆಗೆ ನಿನ್ನೆಯಿಂದಲೇ ಟ್ವಿಟರ್ ತುಂಬಾ ಹರಿದ ಜೀನ್ಸ್ ಧರಿಸಿದ್ದ ಚಿತ್ರಗಳನ್ನು ಹಂಚಿಕೊಂಡು ಅನೇಕ ಮಂದಿ ಪೋಸ್ಟ್ ಮಾಡುತ್ತಿದದ್ರು. ಗುರುವಾರ #RippedJeansTwitter ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಮಂದಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ ಮುಖಂಡ ಪ್ರಿಯಾಂಕಾ ಚತುರ್ವೇದಿ ತಮ್ಮ ಟ್ವಿಟರ್‌ನಲ್ಲಿ, “ದೇಶದ ‘ಸಂಸ್ಕೃತಿ’ ಮತ್ತು ‘ಸಂಸ್ಕಾರ’ ಮಹಿಳೆಯರನ್ನು ಮತ್ತು ಅವರ ಆಯ್ಕೆಗಳ ಬಗ್ಗೆ ಕುಳಿತು ನಿರ್ಣಯಿಸುವ ಪುರುಷರಿಂದ ಪ್ರಭಾವಿತವಾಗಿದೆ. ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ನಟಿ ಗುಲ್ ಪನಾಗ್ ಮಗುವನ್ನು ಹಿಡಿದುಕೊಂಡು ಹರಿದ ಡೆನಿಮ್ ಧರಿಸಿದ ಸೆಲ್ಫಿ ಹಂಚಿಕೊಂಡಿದ್ದು, #RippedJeansTwitter ಬಳಸಿದ್ದಾರೆ.

ರೇಡಿಯೊ ಜಾಕಿ ಆಗಿರುವ ನಿಮಿ ಎಂಬುವವರು ತಮ್ಮ ಫೋಟೋವನ್ನು ಶೇರ್ ಮಾಡಿದ್ದು, ಹರಿದ ಜೀನ್ಸ್ ಸತ್ತುಹೋಗಿರುವ ಮನಸ್ಥಿತಿಯ ವಿರುದ್ಧದ ಹೋರಾಟ ಎಂದಿದ್ದಾರೆ.

ಮಾಜಿ ಫೆಮಿನಾ ಮಿಸ್ ಇಂಡಿಯಾ, ನಟಿ ಸಿಮ್ರಾನ್ ಕೌರ್ ಕೂಡ ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಹರಿದ ಜೀನ್ಸ್ ಧರಿಸಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಟ್ವಿಟರ್‌ ಬಳಕೆದಾರರೊಬ್ಬರು ನಟಿ ಕಂಗನಾ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಅಭಿಯಾನಕ್ಕೆ ಕೈ ಜೋಡಿಸಿದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ಕಂಗನಾ ಕೂಡ ಹರಿದ ಡೆನಿಮ್ ಜೀನ್ಸ್‌ ವಿರುದ್ಧ ಮಾತನಾಡಿದ್ದರು. ’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ, ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಆಗ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದರು.


ಇದನ್ನೂ ಓದಿ: ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...