Homeಚಳವಳಿಸಾಮಾಜಿಕ ಹೋರಾಟಗಾರ ಬಾಬಾ ಅಮ್ಟೆ ಮೊಮ್ಮಗಳು ಶೀತಲ್ ಅಮ್ಟೆ ಅಸಹಜ ಸಾವು

ಸಾಮಾಜಿಕ ಹೋರಾಟಗಾರ ಬಾಬಾ ಅಮ್ಟೆ ಮೊಮ್ಮಗಳು ಶೀತಲ್ ಅಮ್ಟೆ ಅಸಹಜ ಸಾವು

ಕಳೆದ ಒಂದು ವಾರದ ಹಿಂದೆ ಶೀತಲ್, ಎನ್‌ಜಿಒದಲ್ಲಿನ ಅಕ್ರಮಗಳ ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು.

- Advertisement -
- Advertisement -

ಸಾಮಾಜಿಕ ಹೋರಾಟಗಾರ ಬಾಬಾ ಅಮ್ಟೆ ಅವರ ಮೊಮ್ಮಗಳು, ಸಮಾಜ ಸೇವಕಿ ಡಾ.ಶೀತಲ್ ಅಮ್ಟೆ-ಕರಾಜ್ಗಿ ನಿಧನರಾಗಿದ್ದಾರೆ. ಭಾರತದ ಸಾರ್ವಜನಿಕ ಆರೋಗ್ಯ ತಜ್ಞೆ ಶೀತಲ್ ಅವರು ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ತಮ್ಮ ಆನಂದವಾನ್‌ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಅಂಗವೈಕಲ್ಯ ತಜ್ಞೆ ಶೀತಲ್, ಮಹಾರೋಗಿ ಸೇವಾ ಸಮಿತಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸದಸ್ಯರಾಗಿದ್ದರು. ಈ ಸಂಸ್ಥೆ ಇದು ಕುಷ್ಠರೋಗದಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡುತ್ತದೆ.

ಸಾಮಾಜಿಕ ಹೋರಾಟಗಾರ್ತಿಯಾಗಿದ್ದ ಶೀತಲ್, ವಿಷ ತೆಗೆದುಕೊಂಡಿದ್ದಾರೆ ಎಂದು ವೈದ್ಯಕೀಯ ಅಧಿಕಾರಿ ತಿಳಿಸಿದ್ದಾರೆ ಎಂದು ಲೋಕಮತ್‌ ವರದಿ ಮಾಡಿದೆ. ಮೃತದೇಹವನ್ನು ಮರನೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದ್ದು, ಚಂದ್ರಪುರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಳೆದ ಒಂದು ವಾರದ ಹಿಂದೆ ಶೀತಲ್, ಎನ್‌ಜಿಒದಲ್ಲಿನ ಅಕ್ರಮಗಳ ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. ತನ್ನ ಫೇಸ್‌ಬುಕ್ ಖಾತೆಯಲ್ಲಿ ಈ ಕುರಿತು ವೀಡಿಯೊವನ್ನು ಪೋಸ್ಟ್ ಮಾಡಿದರು. ಆದರೆ ಎರಡು ಗಂಟೆಗಳಲ್ಲಿ ಆ ಪೋಸ್ಟ್ ಅನ್ನು ತೆಗೆದುಹಾಕಿದರು.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

 

ಮೃತ ಡಾ.ಶೀತಲ್ ಕಳೆದ ಕೆಲವು ದಿನಗಳಿಂದ ಒತ್ತಡದಲ್ಲಿದ್ದರು ಎಂದು ವರದಿಯಾಗಿದೆ. ಇಂದು ಮುಂಜಾನೆ ತಮ್ಮ ಟ್ವಿಟ್ಟರ್ ಪೋಸ್ಟ್‌ನಲ್ಲಿ ‘ಯುದ್ಧ ಮತ್ತು ಶಾಂತಿ’ ಬಗ್ಗೆ ಉಲ್ಲೇಖಿಸಿದ್ದಾರೆ.

ಶೀತಲ್ ಅವರು ಪ್ರಖ್ಯಾತ ಸಮಾಜ ಸೇವಕ ಮತ್ತು ಹೋರಾಟಗಾರ ಮುರ್ಲಿಧರ್ ದೇವಿದಾಸ್ ಅಮ್ಟೆ ಅವರ ಮೊಮ್ಮಗಳು. ಅವರನ್ನು ಪ್ರೀತಿಯಿಂದ ಬಾಬಾ ಅಮ್ಟೆ ಎಂದು ಕರೆಯುತ್ತಾರೆ.

Dr Sheetal Amte-Karajki, granddaughter of Baba Amte, found dead in Maharashtra's Chandrapur - India News , Firstpost
PC: Firstpost

1949 ರಲ್ಲಿ, ಕುಷ್ಠರೋಗ ರೋಗಿಗಳಿಗಾಗಿ ಬಾಬಾ ರಚಿಸಿದ ಗ್ರಾಮವೇ ಆನಂದವಾನ್. ಆನಂದವಾನ್ ಅನ್ನು ಕುಷ್ಠರೋಗಿಗಳ ಪುನರ್ವಸತಿ ಕೇಂದ್ರವಾಗಿ ಸ್ಥಾಪಿಸಿದರು.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...