Homeಮುಖಪುಟಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಜುಲೈ 2018 ರಲ್ಲಿ ಸ್ವಾಮಿ ಅಗ್ನಿವೇಶ್  ಮೇಲೆ ಜಾರ್ಜಂಡ್‌ನ ಪಕೂರ್‌ನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕ್ರೂರವಾಗಿ ಹಲ್ಲೆ ಮಾಡಿದ್ದರು

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್(80) ಇಂದು ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

“ಶುಕ್ರವಾರ ಅವರ ಸ್ಥಿತಿ ಹದಗೆಟ್ಟಿದ್ದು, ಸಂಜೆ 6:00 ಗಂಟೆಗೆ ಹೃದಯ ಸ್ತಂಭನವಾಯಿತು ಮತ್ತು ಸಂಜೆ 6:30 ಕ್ಕೆ ನಿಧನರಾದರು. ನಾವು ಎಷ್ಟೇ ಪ್ರಯತ್ನಿಸಿದ್ದರು ಅವರನ್ನು ಉಳಿಸಿಕೊಳ್ಳಲಾಗಲಿಲ್ಲ. ಪ್ರೀತಿಯ ನಾಯಕನ ನಷ್ಟಕ್ಕೆ ದೇಶದ ಜನರ ಶೋಕದಲ್ಲಿ ಆಸ್ಪತ್ರೆಯೂ ಸೇರುತ್ತದೆ” ಎಂದು ಆಸ್ಪತ್ರೆ ತಿಳಿಸಿದೆ.

1977 ರಲ್ಲಿ ಅಗ್ನಿವೇಶ್ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದರು ಮತ್ತು 1979 ರಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1981 ರಲ್ಲಿ, ಮಂತ್ರಿಯಾಗಿದ್ದಾಗ ’ಬಾಂಡೆಡ್‌ ಲೇಬರ್ ಲಿಬರೇಷನ್ ಫ್ರಂಟ್’ ಎನ್ನುವ ಎನ್‌ಗಿಒ ಅನ್ನು ಸ್ಥಾಪಿಸಿದ್ದರು.

ಸಾಮಾಜಿಕ ಕಾರ್ಯಕರ್ತ, ಧಾರ್ಮಿಕ ಮುಖಂಡ ಮತ್ತು ಹರಿಯಾಣ ಮಾಜಿ ಶಾಸಕ ಸ್ವಾಮಿ ಅಗ್ನಿವೇಶ್ ಸಾವಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಸಂಸದ ಶಶಿ ತರೂರ್‌ ಟ್ವೀಟ್ ಮಾಡಿ, “ಸ್ವಾಮಿ ಅಗ್ನಿವೇಶ್ ನಿಧನದಿಂದ ನಾನು ಆಘಾತ ಮತ್ತು ದುಃಖಿತನಾಗಿದ್ದೇನೆ. ಅವರು ಹುರುಪಿನ ಮತ್ತು ದೃಢ ನಿಶ್ಚಯದ ವ್ಯಕ್ತಿಯಾಗಿದ್ದರು. ಶೋಷಿತರ ಪರ ಧ್ವನಿಯೆತ್ತಲು ಅವರೆಂದೂ ತಮ್ಮ ವಯಸ್ಸನ್ನು ಲೆಕ್ಕಿಸಲಿಲ್ಲ. ಲಕ್ಷಾಂತರ ಜನರ ಹಕ್ಕುಗಳನ್ನು ಎತ್ತಿಹಿಡಿಯಲು ಹೋರಾಡಿದ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ” ಎಂದಿದ್ದಾರೆ.

ಮಾನವೀಯತೆ ಮತ್ತು ಸಹಿಷ್ಣುತೆಗಾಗಿ ದಿಟ್ಟ ಹೋರಾಟ ನಡೆಸಿದ ಸ್ವಾಮಿ ಅಗ್ನಿವೇಶ್ ಅವರ ನಿಧನವು ಒಂದು ದೊಡ್ಡ ದುರಂತ. ಸಾರ್ವಜನಿಕ ಹಿತಕ್ಕಾಗಿ ದೊಡ್ಡ ಅಪಾಯಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದ ಅವರು ನನಗೆ ತಿಳಿದ ಧೈರ್ಯಶಾಲಿಗಳ ಪೈಕಿ ನಿಜವಾದ ಯೋಧ. 2 ವರ್ಷ ಹಿಂದೆ ಜಾರ್ಖಂಡ್‌ನಲ್ಲಿ ಬಿಜೆಪಿ / ಆರ್‌ಎಸ್‌ಎಸ್ ಗುಂಪಿನ ಕ್ರೂರ ದಾಳಿಯಿಂದ ಅವರ ಯಕೃತ್ತು ಹಾನಿಗೊಳಗಾಯಿತು. ಅವರಿಗೆ ಸಂತಾಪಗಳು” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಜುಲೈ 2018 ರಲ್ಲಿ ಸ್ವಾಮಿ ಅಗ್ನಿವೇಶ್  ಮೇಲೆ ಜಾರ್ಜಂಡ್‌ನ ಪಕೂರ್‌ನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕ್ರೂರವಾಗಿ ಹಲ್ಲೆ ಮಾಡಿದ್ದರು. ಅಂದು ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ತಾನು ತಂಗಿದ್ದ ಹೋಟೆಲ್‌ನಿಂದ ಹೊರಬರುವಾಗ, “ಜೈ ಶ್ರೀ ರಾಮ್” ಬೊಬ್ಬೆ ಹೊಡೆಯುತ್ತಾ ಬಂದ ಜನಸಮೂಹವೊಂದು ಅವರ ಮೇಲೆ ಹಲ್ಲೆ ನಡೆಸಿತ್ತು.

ದಾಳಿಯ ನಂತರ ನಾನು ಯಾವುದೇ ರೀತಿಯ ಹಿಂಸಾಚಾರಕ್ಕೆ ವಿರೋಧಿಯಾಗಿದ್ದೇನೆ, ನನ್ನನ್ನು ಶಾಂತಿ ಪ್ರಿಯ ವ್ಯಕ್ತಿ ಎಂದು ಕರೆಯಲಾಗುತ್ತದೆ. ನನ್ನ ಮೇಲೆ ಏಕೆ ಹಲ್ಲೆ ನಡೆಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಸ್ವಾಮಿ ಅಗ್ನಿವೇಶ್ ಎನ್‌ಡಿಟಿವಿಗೆ ತಿಳಿಸಿದ್ದರು.

ಮೊದಲ ದಾಳಿಯ ಸಮಯದಲ್ಲಿ ಜಾರ್ಖಂಡ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಇದನ್ನು ಖಂಡಿಸಿ, ದಾಳಿಕೋರರು ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ತಿಳಿಸಿತ್ತು.

ಹಲ್ಲೆ ನಡೆದು ತಿಂಗಳ ನಂತರ ಅವರ ಮೇಲೆ ಮತ್ತೆ ದೆಹಲಿಯಲ್ಲಿ ಹಲ್ಲೆ ನಡೆಸಲಾಯಿತು. ಈ ಬಾರಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಲು ತೆರಳುತ್ತಿದ್ದರು.

ಈ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ “ಸ್ವತಂತ್ರ ತನಿಖೆ” ಮಾಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದ 270 ಪ್ರಖ್ಯಾತ ವ್ಯಕ್ತಿಗಳ ಪೈಕಿ ಸ್ವಾಮಿ ಅಗ್ನಿವೇಶ್ ಕೂಡ ಒಬ್ಬರು.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...