Homeಮುಖಪುಟಸರ್ಕಾರದಿಂದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಎಚ್‌ಡಿಕೆ ಆರೋಪ

ಸರ್ಕಾರದಿಂದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಎಚ್‌ಡಿಕೆ ಆರೋಪ

- Advertisement -
- Advertisement -

ಕೋವಿಡ್ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ದೂರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಈ ಕ್ರಮದಿಂದ ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಆಗ್ರಹಿಸಿದ್ದಾರೆ.

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಬಿಎಸ್‌ವೈ ಗಮನ ಹರಿಸಲಿ ಎಂದು ಆಗ್ರಹಿಸಿದ್ದಾರೆ.

ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು MCIಗೆ. ಸರ್ಕಾರಕ್ಕಲ್ಲ ನೆನಪಿರಲಿ ಎಂದು ಎಚ್‌ಡಿಕೆ ಹೇಳಿದ್ದಾರೆ.

ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌. ಅವರ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಲಿ. ಈ ಮೂಲಕ ಕೊರೊನಾ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ನಾನು ಒತ್ತಾಯಿಸುತ್ತೇನೆ‌‌ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

0
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ದೇಶದ 107...