Homeಕರ್ನಾಟಕಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

- Advertisement -
- Advertisement -

“ಭಾಷಾ ಪಠ್ಯದಲ್ಲಿ ಸಾಮಾಜಿಕ ನ್ಯಾಯ ಹಾಗೂ ಲಿಂಗ ಸಮಾನತೆಯ ವಿಷಯಗಳನ್ನು ತುರುಕಬಾರದು” ಎಂಬ ಅಭಿಪ್ರಾಯವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ತಾಳಿರುವುದು ಪರಿಷ್ಕೃತ ಪಠ್ಯ ಪುಸ್ತಕದ ಟಿಪ್ಪಣಿಗಳಿಂದ ತಿಳಿದುಬಂದಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪರಿಶೀಲನೆಯನ್ನು ಬಲಪಂಥೀಯ ವಿಚಾರಗಳ ಪ್ರತಿಪಾದಕ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಹಿಸಲಾಗಿತ್ತು. ಈಗ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪಠ್ಯದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣ, ಬಲಪಂಥೀಯ ಲೇಖಕ ಶತಾವಧಾನಿ ಗಣೇಶ್‌ ಲೇಖನ, ಬನ್ನಂಜೆ ಗೋವಿಂದಚಾರ್ಯರ ಬರಹಗಳನ್ನು ಸೇರಿಸಲಾಗಿದೆ. ಪಿ.ಲಂಕೇಶ್‌, ಸಾ.ರಾ.ಅಬುಬೂಕರ್‌, ಡಾ.ಜಿ.ರಾಮಕೃಷ್ಣ ಅವರ ಬರಹಗಳನ್ನು ಕೈಬಿಡಲಾಗಿದೆ. ಅದರಲ್ಲೂ ‘ಭಗತ್‌ಸಿಂಗ್‌’ ಕುರಿತ ಪಠ್ಯವನ್ನು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ಭಗತ್‌ಸಿಂಗ್ ಪಠ್ಯ ಕೈಬಿಟ್ಟಿಲ್ಲ ಎಂದು ಸರ್ಕಾರ ಹೇಳುತ್ತಿದೆಯಾದರೂ ಈಗ ಲಭ್ಯವಾಗಿರುವ ಪರಿಷ್ಕೃತ ಪಠ್ಯದ ಪಿಡಿಎಫ್‌ನಲ್ಲಿ ಭಗತ್‌ಸಿಂಗ್ ಪಾಠವನ್ನು ತೆಗೆದಿರುವುದು ಕಂಡು ಬರುತ್ತಿದೆ. ಇದೆಲ್ಲದರ ಜೊತೆಗೆ ಪಠ್ಯ ಪುನರ್‌‌ ಪರಿಶೀಲನೆಯ ಕುರಿತು ಮಾಡಿರುವ ಟಿಪ್ಪಣಿಯೂ ಸಮಿತಿಯ ಧೋರಣೆಯನ್ನು ಎತ್ತಿ ತೋರಿಸುತ್ತದೆ.

ಪುನರ್‌ ಪರಿಶೀಲನೆ ಕುರಿತು ಪುಠ್ಯಪುಸ್ತಕಗಳ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ, ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಎಂ.ಪಿ.ಮಾದೇಗೌಡ ಅವರು ಟಿಪ್ಪಣಿ ಬರೆದಿದ್ದು, “ಕನ್ನಡ ಸಾಹಿತ್ಯದಲ್ಲಿ ಹಾಸುಹೊಕ್ಕಾಗಿರುವ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ” ಕುರಿತು ಕ್ಷುಲ್ಲಕವಾಗಿ ಮಾತನಾಡಿರುವುದು ಕಂಡುಬರುತ್ತದೆ.

”2014ರಲ್ಲಿ ಪರಿಷ್ಕರಣೆಗೆ ಒಳಗಾಗಿದ್ದ ಭಾಷಾ ಪಠ್ಯಗಳಲ್ಲಿ ನಮಗೆ ಅನೇಕ ಸಮಸ್ಯೆಗಳು ಕಂಡುಬಂದವು. ಅವುಗಳನ್ನು ಸರಿಪಡಿಸಲು ಪಠ್ಯಪುಸ್ತಕಗಳ ಪರಿಶೀಲನೆ, ಪರಿಷ್ಕರಣೆಗಳಲ್ಲಿ ನಾವು ನಮ್ಮದೇ ಆದ ಚೌಕಟ್ಟನ್ನು ನಿರ್ಮಿಸಿಕೊಂಡೆವು. ಭಾಷಾಪಠ್ಯವು ಇರುವುದು ವಿದ್ಯಾರ್ಥಿಯಲ್ಲಿ ಅಭಿವ್ಯಕ್ತಿಯ ಸಾಮರ್ಥ್ಯವನ್ನು ಉತ್ತಮಪಡಿಸುವುದಕ್ಕೆ, ಭಾಷಾಪಠ್ಯಗಳನ್ನು ಅಧ್ಯಯನ ಮಾಡಿದ ವಿದ್ಯಾರ್ಥಿಯಲ್ಲಿ ಭಾಷೆಯ ಬಗ್ಗೆ ಅಭಿಮಾನ ಮೂಡಬೇಕು; ಆತನ ಭಾಷಾಪ್ರೌಢಿಮೆ ಗಣನಾತ್ಮಕವಾಗಿ ಹೆಚ್ಚಬೇಕು. ಓದುವ, ಆಲಿಸುವ, ಮಾತಾಡುವ ಮತ್ತು ಬರೆಯುವ ಸಾಮರ್ಥ್ಯಗಳು ಸುಧಾರಿಸಬೇಕು. ಸ್ವತಂತ್ರವಾಗಿ ವಿದ್ಯಾರ್ಥಿಯು ತನ್ನ ಅಭಿಪ್ರಾಯ, ಅನಿಸಿಕೆಗಳನ್ನು ಅತ್ಯಂತ ಶಕ್ತಿಶಾಲಿಯಾಗಿ ಹೇಳುವುದಕ್ಕೆ ಸಾಧ್ಯವಾಗಬೇಕು. 2014ರಲ್ಲಿ ಪರಿಷ್ಕರಣೆಗೆ ಒಳಗಾದ ಪಠ್ಯಪುಸ್ತಕಗಳಲ್ಲಿ ಭಾಷೆಯ ಈ ಬಗೆಯ ಕಲಿಕೆಗೆ ಹಿನ್ನಡೆಯಾಗಿ ಕೇವಲ ಸಿದ್ದಾಂತಪ್ರಚಾರವೇ ಮುನ್ನೆಲೆಗೆ ಬಂದಿದ್ದುದನ್ನು ಗಮನಿಸಿದೆವು. ಆ ಪಠ್ಯಗಳ ಮರುಪರಿಷ್ಕರಣೆಯ ಹೊತ್ತಿನಲ್ಲಿ ಈ ನಿಯಮಗಳನ್ನು ಹೇರಿಕೊಂಡೆವು” ಎನ್ನುವ ಸಮಿತಿ ಆರು ಅಂಶಗಳನ್ನು ಪಟ್ಟಿ ಮಾಡಿದೆ.

ಇದನ್ನೂ ಓದಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಮಿತಿ ಹೇರಿಕೊಂಡ ಅಂಶಗಳು

(1) ಭಾಷಾ ಪಠ್ಯವಿರುವುದು ಅತ್ಯುತ್ತಮವಾದ ಪ್ರಾತಿನಿಧಿಕ ಪಠ್ಯವನ್ನು ಕೊಡುವುದಕ್ಕಾಗಿಯೇ ಹೊರತು ಸಾಮಾಜಿಕನ್ಯಾಯ, ಲಿಂಗಸಮಾನತೆ ಇತ್ಯಾದಿ ಅಂಶಗಳನ್ನು ತುರುಕುವುದಕ್ಕಲ್ಲ. ಹಾಗಾಗಿ ಭಾಷೆಯ ವೈವಿಧ್ಯ ಹಾಗೂ ವಿಶೇಷಗಳನ್ನು ಹೆಚ್ಚು ಕಾಣಿಸುವ ಗದ್ಯ/ಪದ್ಯ ಭಾಗಗಳನ್ನು ಆರಿಸಿಕೊಳ್ಳಬೇಕು.

(2) ಭಾಷೆಯ ಪಠ್ಯದ ಹೆಸರಿನಲ್ಲಿ ಸಿದ್ದಾಂತಪ್ರಚಾರಕ್ಕೆ ಅವಕಾಶವಾಗಬಾರದು.

(3) ಗ್ರಾಂಥಿಕ ಭಾಷೆಯಲ್ಲದೆ ಮೌಖಿಕ ಪರಂಪರೆಯ ಹಾಗೂ ಹಲವು ಪ್ರಕಾರದ ಸಾಹಿತ್ಯಗಳಿಗೆ ಅವಕಾಶ ಕೊಡಬೇಕು.

(4) ಬಳಸಿದ ಭಾಷೆ, ಭಾಷಾಸೊಗಡು, ಪ್ರತಿಪಾದಿಸಿರುವ ವಿಚಾರ, ಹೊಸ ಚಿಂತನೆಗಳನ್ನು ಹುಟ್ಟಿಸುವ ಸಾಧ್ಯತೆ, ಸಾಹಿತ್ಯ ಪ್ರಕಾರದ ವೈಶಿಷ್ಟ್ಯ ಇತ್ಯಾದಿ ಎಲ್ಲ ಬಗೆಯಲ್ಲೂ ಪಾಠಗಳ ಗುಣಮಟ್ಟ ಅತ್ಯುತ್ತಮವಾಗಿರಬೇಕು.

(5) ಕವಿ/ಲೇಖಕರ ಪುನರಾವರ್ತನೆಯನ್ನು ಕಡಿಮೆ ಮಾಡಿ ಹೊಸ ಕವಿ/ಲೇಖಕರ ಬರಹಗಳಿಗೆ ಅವಕಾಶ ಮಾಡಿಕೊಡಬೇಕು.

(6) ಭಾಷೆಯ ಸೊಬಗನ್ನು ಪರಿಚಯಿಸುವ ಭಾಗಗಳನ್ನು ಪ್ರತಿ ಅಧ್ಯಾಯದ ಜೊತೆ ಸೇರಿಸಬೇಕು.

ಈ ಹೀಗೆ ಟಿಪ್ಪಣಿ ಮಾಡಿರುವ ಸಮಿತಿಯು ತನ್ನದೇ ಮಾತುಗಳನ್ನು ಉಲ್ಲಂಘಿಸಿರುವುದು ಕಂಡು ಬರುತ್ತಿದೆ. ಉದಾಹರಣೆಗೆ ಹೆಡಗೇವಾರ್‌ ಪಾಠದಲ್ಲಿ ‘ಕೃತಿಕಾರನ ಪರಿಚಯ’ ಮಾಡಿಕೊಡುತ್ತಾ, ಆರ್‌ಎಸ್‌ಎಸ್‌ ಕುರಿತು ವೈಭವೀಕರಣ ಮಾಡಲಾಗಿದೆ.

“ಕೇಶವ ಬಲಿರಾಮ ಹೆಡಗೇವಾರರು ವಿಶ್ವದ ಅತಿದೊಡ್ಡ ಸ್ವಯಂ ಸೇವಕ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕದ ಸಂಸ್ಥಾಪಕರು” ಎಂದು ಒಂದು ಕಡೆ ಪರಿಚಯಿಸಿದರೆ, ಮತ್ತೊಂದು ಕಡೆ, “ಆರ್‌ಎಸ್‌ಎಸ್‌ ಇಂದು 60 ಲಕ್ಷ ಸದಸ್ಯರನ್ನು ಒಳಗೊಂಡಿದೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ ಸರ್ಕಾರದ ವಿರುದ್ದ…

ಮತ್ತೊಂದೆಡೆ ತಮ್ಮ ಟಿಪ್ಪಣಿಯಲ್ಲಿ ಸಮಿತಿಯು, “ಇಂದಿನ ಮಕ್ಕಳೇ ಮುಂದಿನ ಜನಾಂಗವೆಂಬ ಮಾತಿದೆ. ಶಾಲೆಗಳಲ್ಲಿ ಓದುವ ಇಂದಿನ ಮಕ್ಕಳಿಗೆ ನಾವು ಎಂಥ ಪಠ್ಯಗಳನ್ನು ಬೋಧಿಸುತ್ತೇವೆಂಬುದರ ಮೇಲೆ ಸಮಾಜದ ಭವಿಷ್ಯ ನಿಂತಿದೆ. ವಿದ್ಯಾರ್ಥಿಗಳು ಓದುವ ಪಠ್ಯಗಳು ಆರೋಗ್ಯಕರ ಚಿಂತನೆಗಳನ್ನು ಒಳಗೊಂಡಿರಬೇಕು. ಸಮಾಜದ ವಿವಿಧ ವರ್ಗ-ಸಮುದಾಯಗಳಲ್ಲಿ ಪರಸ್ಪರ ಅಪನಂಬಿಕೆ, ದ್ವೇಷ, ತಾತ್ಸಾರಗಳನ್ನು ಹರಡುವಂತಿರಬಾರದು. ಅವರಲ್ಲಿ ರಾಷ್ಟ್ರೀಯತೆಯನ್ನೂ ದೇಶಪ್ರೇಮವನ್ನೂ ಉದ್ದೀಪಿಸುವಂತಿರಬೇಕು. ರಾಜ್ಯ ದೇಶಗಳಲ್ಲಿ ಆಗಿಹೋದ ಸಂಗತಿಗಳ ಬಗ್ಗೆ ನಿಖರವಾದ, ವಸ್ತುನಿಷ್ಠವಾದ ಮಾಹಿತಿ ದೊರೆಯುವಂತಿರಬೇಕು. ಅವರಿಗೆ ಸ್ಥಳೀಯ ಸಂಸ್ಕೃತಿ, ಭಾಷೆ, ಜನಪದಗಳ ಪರಿಚಯವಾಗುವಂತಿರಬೇಕು. ಒಟ್ಟಾರೆಯಾಗಿ ಪಠ್ಯಗಳು ವಿದ್ಯಾರ್ಥಿಗಳನ್ನು ಉತ್ತಮ, ಜವಾಬ್ದಾರಿಯುತ, ಪ್ರಜ್ಞಾವಂತ, ಮುಕ್ತ ಮನಸ್ಸಿನ, ಸಭ್ಯ ನಾಗರಿಕರನ್ನಾಗಿ ಮಾಡಬೇಕು. ಆ ಜವಾಬ್ದಾರಿಯನ್ನು ಗಮನದಲ್ಲಿರಿಸಿಕೊಂಡು ಪಾಠಗಳನ್ನು ಪರಿಷ್ಕರಣೆ ಮಾಡಬೇಕಾಯಿತು” ಎಂದು ಅಭಿಪ್ರಾಯ ತಾಳಲಾಗಿದೆ.

ಮುಂದುವರಿದು, “ಅತ್ಯುತ್ತಮ ಪಠ್ಯಪುಸ್ತಕ ಎಂಬುದು ಒಂದು ಆದರ್ಶಸ್ಥಿತಿ, ಅದರತ್ತ ನಡೆಯುವುದು ನಮ್ಮ ಆಶಯವೇ ಹೊರತು ನೂರಕ್ಕೆ ನೂರು ಅತ್ಯುತ್ತಮವಾದ ಪಠ್ಯಪುಸ್ತಕವನ್ನು ರಚಿಸುವುದು ಸಾಧ್ಯವಿಲ್ಲ. ಆ ವಿನಯದಿಂದಲೇ ನಾವು ಈ ಪುನರ್ ಪರಿಶೀಲನೆಯ ಕಾರ್ಯವನ್ನು ಮುಗಿಸಿ ಪಠ್ಯಗಳನ್ನು ನಿಮ್ಮ ಕೈಗಿಡುತ್ತಿದ್ದೇವೆ. ಇದು ಕೇವಲ ಮರುಪರಿಷ್ಕರಣೆಯೇ ಹೊರತು ಸಮಗ್ರ ಪುನಾರಚನೆಯಲ್ಲ. ಈಗಾಗಲೇ 2014ರಲ್ಲಿ ರಚಿತವಾಗಿದ್ದ ಪಠ್ಯಪುಸ್ತಕದ ಆಶಯ ಮತ್ತು ಸ್ವರೂಪಕ್ಕೆ ಎಲ್ಲಿಯೂ ಧಕ್ಕೆಯುಂಟುಮಾಡಿಲ್ಲ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಅದನ್ನನುಸರಿಸಿ ಬಂದ ರಾಜ್ಯ ಪಠ್ಯಕ್ರಮ ಚೌಕಟ್ಟುಗಳನ್ನು ಮುಂದಿಟ್ಟುಕೊಂಡೇ ಇಡಿಯ ಮರುಪರಿಷ್ಕರಣೆಯ ಕಾರ್ಯ ನಡೆದಿದೆ. ಜೊತೆಗೆ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲಾಗಿದೆ. ಪರಿಷ್ಕರಣೆಯ ಕೆಲಸವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿರುವ ಪರಿಶೀಲನಾ ಸಮಿತಿಯ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಕೃತಜ್ಞ, ಅಂತೆಯೇ ಸಮಿತಿಯ ಕೆಲಸ ಸುಗಮವಾಗಿ ನಡೆಯಲು ಸಹಕರಿಸಿದ ಪಠ್ಯಪುಸ್ತಕ ಸಂಘದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಆಭಾರಿ. ಈ ಪರಿಷ್ಕರಣೆಯು ಈಗಷ್ಟೇ ಬಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಹೆಚ್ಚು ಪ್ರತಿಫಲಿಸುತ್ತ, ಮುಂದೆ ಬರಲಿರುವ ಸಮಗ್ರ ಪುನಾರಚಿತ ಪಠ್ಯಗಳಿಗೆ ಪ್ರವೇಶಿಕೆಯಾಗಲಿದೆ ಎಂಬ ಭರವಸೆ ನಮ್ಮದು” ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

“ಸಾಮಾಜಿಕ ನ್ಯಾಯ, ಲಿಂಗ ಸಮಾನತೆ” ಸಂವಿಧಾನದ ಭಾಗವಲ್ಲವೇ? ಎಂಬ ಪ್ರಶ್ನೆಯನ್ನು ಸಮಿತಿ ಕೇಳಿಕೊಳ್ಳಬೇಕಾಗಿರುವುದು ಅಗತ್ಯವಾಗಿದೆ.

ಪಠ್ಯಪರಿಶೀಲನೆಯಲ್ಲಿನ ದ್ವಂದ್ವಗಳ ಕುರಿತು ಪ್ರತಿಕ್ರಿಯೆ ಪಡೆಯಲು ರೋಹಿತ್‌ ಚಕ್ರತೀರ್ಥ ಅವರನ್ನು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ದೂರವಾಣಿ ಕರೆಯನ್ನು ಸ್ವೀಕರಿಸಿಲ್ಲ ಎಂದು ವಿಷಾದಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರ್ಕರ ಕೈಗೆ ಅದಿಕಾರ ಕೊಟ್ಟಮೇಲೆ ಇದಕ್ಕಿಂತಲೂ ಹೆಚ್ಚಿನದನ್ನು ನಿರೀಕ್ಷಿಸುವುದು, ಬಹುಶಃ ಮೂರ್ಕತನದ ಪರಮಾವದಿ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...