Homeಕರ್ನಾಟಕ'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..'; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಹಕ್ಕಿಗಾಗಿ ಹೋರಾಟದ ಜೊತೆಗೆ ಕಾನೂನು ಸಂಘರ್ಷವನ್ನೂ ಮುಂದುವರೆಸುತ್ತೇವೆ'

- Advertisement -
- Advertisement -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, “ಶೇ.1 ಒಳಮೀಸಲಾತಿಯಂತೂ ಇಲ್ಲ, ಮುಖ್ಯಮಂತ್ರಿ ಈ ಹಿಂದೆ ಭರವಸೆ ಕೊಟ್ಟಂತೆ ಪ್ರತ್ಯೇಕ ನಿಗಮವೂ ಇಲ್ಲ, ಸಬಲೀಕರಣದ ವಿಶೇಷ ಪ್ಯಾಕೇಜೂ ಇಲ್ಲ. ಆಯವ್ಯಯದಲ್ಲಿ 4 ವಸತಿ ಶಾಲೆಗಳನ್ನು ಬಿಟ್ಟರೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಯಾವ ಬೇಡಿಕೆಗಳನ್ನೂ ಈಡೇರಿಸಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

“ಬಲಾಢ್ಯ ಪರಿಶಿಷ್ಟ ಜಾತಿಗಳ ಲಾಬಿಗೆ ಮಣಿದು 49 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ನ್ಯಾಯೋಚಿತ ಪಾಲನ್ನು ಕರ್ನಾಟಕ ಸರ್ಕಾರ ನೀಡಲಿಲ್ಲ. ಪ್ರತಿಭಟನಾ ಸಮಾವೇಶ ನಡೆಸಿದರೂ ನಮ್ಮ ಅಹವಾಲನ್ನು ಸ್ವೀಕರಿಸಲು ಸರಕಾರದ ಯಾವ ಪ್ರತಿನಿಧಿಯೂ ನಮ್ಮ ಬಳಿ ಸುಳಿಯಲ್ಲಿ. ಆಗ ನಾವು ಅಕ್ಟೋಬರ್ 2ರಂದು ದೆಹಲಿಗೆ ತೆರಳಿ ಜಂತರ್ ಮಂತರ್‌ನಲ್ಲಿ ಮತ್ತು ಎಐಸಿಸಿ ಕಛೇರಿಯ ಬಳಿ ಧರಣಿ ನಡೆಸಿದೆವು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ‘ಅಲೆಮಾರಿಗಳಿಗೆ ಶೇ.1 ರಷ್ಟು ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ, ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡಲು ನಮ್ಮ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ’ ಎಂದು ಭರವಸೆ ನೀಡಿ ದೆಹಲಿಯಿಂದ ನಮ್ಮನ್ನು ವಾಪಸ್ ಕರೆಯಿಸಿಕೊಂಡಿದ್ದರು. ನಂತರ ಅಕ್ಟೋಬರ್ 31ರಂದು ಅಲೆಮಾರಿ ಸಮುದಾಯಗಳ ಮುಖಂಡರನ್ನು ಮಾನ್ಯ ಮುಖ್ಯಮಂತ್ರಿಗಳು ಸಭೆ ಕರೆದು ಶೇ.1 ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ ಮತ್ತು ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡುವ ಭರವಸೆಯನ್ನು ಸಭೆಯಲ್ಲಿ ನೀಡಿದ್ದರು. ಫೆ.5ರಂದು ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳನ್ನು ಕರೆದು 2026-27ನೇ ಸಾಲಿನ ಅಯವ್ಯಯದಲ್ಲಿ ಅಲೆಮಾರಿ ಸಮುದಾಯಗಳಿಗೆ ನೀಡಬೇಕಿರುವ ಅಭಿವೃದ್ಧಿ ಯೋಜನೆಗಳನ್ನು ಕುರಿತು ಚರ್ಚಿಸಿದರು. ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಂದೀಪ್, ರಾಕೇಶ್ ಕುಮಾರ್, ವೆಂಕಟಯ್ಯ ಮತ್ತು ಇತರೆ ಅಧಿಕಾರಿಗಳು ಇದ್ದರು” ಎಂದು ಹೇಳಿದ್ದಾರೆ.

ಅಲೆಮಾರಿ ಒಕ್ಕೂಟದ ಬೇಡಿಕೆಗಳು:

  1. ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪು ಮತ್ತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಅನುಸಾರ 49 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ `ಎ’ನಲ್ಲಿ ಇರಿಸಿ ಶೇ 1%ರಷ್ಟು ಮೀಸಲಾತಿಯನ್ನು ನೀಡಬೇಕು.
  2. 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮದ ಸ್ಥಾಪನೆ ಮಾಡಬೇಕು
  3. ಕರ್ನಾಟಕ ಸರಕಾರವು ರಾಜ್ಯದ 49 ಅಲೆಮಾರಿ ಸಮುದಾಯಗಳಿಗೆ 500 ಕೋಟಿಗಳನ್ನು ಮೀಸಲಾಗಿಟ್ಟು ಅಭಿವೃದ್ಧಿಯ ವಿಶೇಷ ಪ್ಯಾಕೇಜನ್ನು ರೂಪಿಸಬೇಕು.
  4. ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿಗಳಿಗೆ ತನ್ನ ಆಯವ್ಯಯದಲ್ಲಿ ವಿಶೇಷ ಘಟಕ ಯೋಜನೆಯ ಒಟ್ಟು ಮೊತ್ತದಲ್ಲಿ ಶೇ.5 ರಷ್ಟು ಹಣವನ್ನು 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಮೀಸಲಾಗಿಡಬೇಕು.
  5. ವಸತಿ: ಪ್ರತಿ ಜಿಲ್ಲೆಗೆ 500 ಮನೆಗಳಂತೆ 31 ಜಿಲ್ಲೆಗಳಿಗೆ 15,500 ಮನೆಗಳನ್ನು ನಿರ್ಮಾಣ ಮಾಡಬೇಕು. ಇದನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿ ಒಟ್ಟು 46,500 ಮನೆಗಳನ್ನು ಅಲೆಮಾರಿ ಸಮುದಾಯಗಳಿಗೆ ನಿರ್ಮಿಸಬೇಕು.
  6. ಭೂಒಡೆತನ ಯೋಜನೆ: ಅಲೆಮಾರಿ ಸಮುದಾಯಗಳಿಗೆ ಸರಕಾರವು ಕೃಷಿಭೂಮಿಯನ್ನು ನೀಡಿ ಅವರಿಗೆ ನಿರ್ದಿಷ್ಟ ಆರ್ಥಿಕ ಮೂಲವನ್ನು ಕಲ್ಪಿಸಬೇಕು. ಭೂಒಡೆತನ ಯೋಜನೆಯಲ್ಲಿ ಪ್ರತಿ ಜಿಲ್ಲೆಗೆ 100 ಎಕರೆ ಕೃಷಿ ಜಮೀನನ್ನು ಅಲೆಮಾರಿ ಸಮುದಾಯಗಳಿಗೆ ಮೀಸಲಾಗಿಡಬೇಕು.
  7. ಶಿಕ್ಷಣ : ಅಲೆಮಾರಿ ಸಮುದಾಯಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ನವೋದಯ ವಿದ್ಯಾಲಯ’ ಮತ್ತುಮೊರಾರ್ಜಿ ವಸತಿ ಶಾಲೆ’ಗಳ ಮಾದರಿಯಲ್ಲಿ ಎರಡು ಜಿಲ್ಲೆಗ ಒಂದರAತೆ ಒಟ್ಟು 15 ವಸತಿ ಶಾಲೆಗಳನ್ನು ನಿರ್ಮಾಣ ಮಾಡಬೇಕು. ಸರಕಾರದ ವಸತಿ ನಿಲಯಗಳಲ್ಲಿ (ಹಾಸ್ಟೆಲ್) ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ 15%ರಷ್ಟು ಸ್ಥಾನಗಳನ್ನು ಉಚಿತವಾಗಿ ಕಲ್ಪಿಸಬೇಕು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಂಶೋಧನೆಯನ್ನು (ಪಿಎಚ್, ಡಿ ಅಥವಾ ತತ್ಸಮಾನ ಸಂಶೋಧನೆಗಾಗಿ) ಕೈಗೊಳ್ಳುವ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರವು ಪ್ರತಿ ತಿಂಗಳು ರೂ 25,000/-ಗಳ ಶಿಷ್ಯವೇತನವನ್ನು ನೀಡಬೇಕು. ಇದಲ್ಲದೆ ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ತೆರಳುವ ಅಲೆಮಾರಿ ಸಮುದಾಯಗಳ ಯುವಕರಿಗೆ ಸೂಕ್ತ ಹಣಕಾಸಿನ ನೆರವನ್ನು ನೀಡಬೇಕು.
  8. ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳಿಗೆ ಸೇರಿದ ಹಲವು ಸಮುದಾಯಗಳ ಪಾರಂಪರಿಕ ಕೌಶಲ್ಯ ಮತ್ತು ಕಲೆಗಳನ್ನು ಆಧುನಿಕಗೊಳಿಸಲು ಈ ಸಮುದಾಯಗಳಿಗೆ ತರಬೇತಿ ನೀಡಬೇಕು. ಪ್ರತಿ ವ್ಯಕ್ತಿಗೆ 10 ಲಕ್ಷಗಳ ರೂಪಾಯಿಗಳ ಸಾಲ ಸೌಲಭ್ಯವನ್ನು ನೀಡಬೇಕು. ಇದಲ್ಲದೆ, ಸ್ವಯಂಸಾರಥಿ ಯೋಜನೆಯಲ್ಲಿ ಸಾಲ ಸೌಲಭ್ಯವನ್ನು ನೀಡುವ ಅನುದಾನ ಹೆಚ್ಚಿಸಿ, ಜಿಲ್ಲೆಯೊಂದರಲ್ಲಿ ಅಲೆಮಾರಿ ಸಮುದಾಯಗಳಿಗೆ ಸೇರಿದ ಕನಿಷ್ಟ 100 ಜನರಿಗೆ ಸಾಲ ಸೌಲಭ್ಯಗಳು ಸಿಗುವಂತೆ ಮಾಡಬೇಕು.
  9. ಸಂಸ್ಕೃತಿ, ಕಲೆಗಳ ರಕ್ಷಣೆ: ಅಲೆಮಾರಿ ಸಮುದಾಯಗಳ ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಸಲುವಾಗಿ ಅಲೆಮಾರಿ ಸಮುದಾಯಗಳ ಭಾಷೆ, ಕಲೆ ಮತ್ತು ಸಂಸ್ಕೃತಿ ಅಕಾಡೆಮಿ’ಯನ್ನು, ಅಲೆಮಾರಿ ಸಮುದಾಯಗಳ ಅಧ್ಯಯನಕ್ಕಾಗಿಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಸಂಶೋಧನಾ ಕೇಂದ್ರ’ವನ್ನು ಸ್ಥಾಪಿಸಬೇಕು.
  10. `ಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಆಯೋಗ’ವನ್ನು ರಾಜ್ಯದಲ್ಲಿ ಸ್ಥಾಪಿಸಬೇಕು. ಅಲೆಮಾರಿ ಮತ್ತು ವಿಮುಕ್ತ ಸಮುದಾಗಳಿಗೆ ಸೇರಿದ ವ್ಯಕ್ತಿಗಳು ಈ ಆಯೋಗಕ್ಕೆ ಅಧ್ಯಕ್ಷ ಮತ್ತು ಪದಾಧಿಕಾರಿಗಳಾಗಬೇಕು.

    “ಈ ಮೇಲಿನ ಹತ್ತು ಬೇಡಿಕೆಗಳನ್ನು ನಾವು ಮಾನ್ಯ ಮುಖ್ಯಮಂತ್ರಿಗಳ ಮತ್ತು ಸಮಾಜ ಕಲ್ಯಾಣ ಸಚಿವರ ಬಜೆಟ್‌ಪೂರ್ವ ಸಭೆಯಲ್ಲಿ ಮಂಡಿಸಿದ್ದೆವು. ಈ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳು ಮತ್ತು ಸಮಾಜ ಕಲ್ಯಾಣ ಸಚಿವರು ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳು ಮಂಡಿಸಿದ ಅಯವ್ಯಯದಲ್ಲಿ ನಮ್ಮ ಯಾವ ಬೇಡಿಕೆಗಳನ್ನೂ ಈಡೇರಿಸದೆ ಅಲೆಮಾರಿಗಳಿಗೆ ಅನ್ಯಾಯವೆಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

    “ನಮ್ಮ ಹಕ್ಕುಗಳಿಗಾಗಿನ ಹೋರಾಟವು ನಿಲ್ಲುವುದಿಲ್ಲ. ನಾವು ಸಂಖ್ಯೆಯಲ್ಲಿ ಕಡಿಮೆ ಇರಬಹುದು. ನಿಮ್ಮನ್ನು ಚುನಾವಣೆಗಳಲ್ಲಿ ಗೆಲ್ಲಿಸಲು ಬೇಕಾದ ಸಂಖ್ಯೆ ನಮ್ಮಲ್ಲಿ ಇಲ್ಲದೇ ಇರಬಹುದು. ಆದರೆ, ನೀವು ಮಾಡುತ್ತಿರುವ ಬಲಾಢ್ಯರ ಪರವಾದ ರಾಜಕಾರಣವನ್ನು ನಾವು ರಾಜ್ಯದ ಜನರ ಮುಂದೆ ಬಯಲುಗೊಳಿಸುವ ಶಕ್ತಿ ನಮಗಿದೆ. ಒಳಮೀಸಲಾತಿಯಲ್ಲಿ ಸರಿಯಾದ ಪಾಲನ್ನು ಪಡೆಯಲು ನಾವು ಬೀದಿ ಹೋರಾಟಗಳನ್ನು ಮುಂದುವರೆಸುತ್ತೇವೆ. ಹಾಗೆಯೇ ನ್ಯಾಯಾಲಯದಲ್ಲಿ ನಮ್ಮ ನ್ಯಾಯಬದ್ಧ ಹಕ್ಕಿಗಾಗಿ ಹೋರಡುತ್ತಲೇ ಇರುತ್ತೇವೆ. ಕರ್ನಾಟಕದಲ್ಲಿನ ನ್ಯಾಯಪ್ರಜ್ಞೆಯುಳ್ಳ ಜನ ನಮ್ಮ ಸಹಾಯಕ್ಕೆ ಬರುತ್ತಾರೆ ಎಂಬ ವಿಶ್ವಾಸದಲ್ಲಿ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ಹಾಗೇಯೇ ಎಲ್ಲಾ ಪಕ್ಷದಲ್ಲಿರುವ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವ ಶಾಸಕರು ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳ ಪರ ದನಿ ಎತ್ತಬೇಕೆಂದು ಕೋರುತ್ತೇವೆ” ಎಂದು ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...