Homeಅಂತರಾಷ್ಟ್ರೀಯ16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಅಸ್ಟ್ರೇಲಿಯದಲ್ಲಿ  ಮಸೂದೆಗೆ ಅಂಗೀಕಾರ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಅಸ್ಟ್ರೇಲಿಯದಲ್ಲಿ  ಮಸೂದೆಗೆ ಅಂಗೀಕಾರ

- Advertisement -
- Advertisement -

ಸಿಡ್ನಿ: 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ನಿಷೇಧಗೊಳಿಸುವ ಮಸೂದೆಗೆ ಅಸ್ಟ್ರೇಲಿಯಾದ ಜನಪ್ರತಿನಿಧಿಗಳ ಸಭೆಯು ಇಂದು ಅಂಗೀಕರಿಸಿದೆ.

ಪ್ರಮುಖ ಜಾಲತಾಣಗಳಾದ ಟಿಕ್‌ಟಾಕ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್ ಮುಂತಾದವುಗಳು ತಮ್ಮ ಜಾಲತಾಣದಲ್ಲಿ ಚಿಕ್ಕ ಮಕ್ಕಳು ಖಾತೆಗಳನ್ನು ಹೊಂದುವುದನ್ನು ನಿಷೇಧಿಸುವುದು ಕಡ್ಡಾಯವಾಗಿದೆ. ಇದಕ್ಕೆ ತಪ್ಪಿದ ಜಾಲತಾಣಗಳಿಗೆ  50 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ಗಳವರೆಗೆ ($ 33 ​​ಮಿಲಿಯನ್) ದಂಡ ತೆತ್ತಾಬೇಕಿದೆ.

ಜನ ಪ್ರತಿನಿಧಿಗಳ ಸಭೆಯು ಇದನ್ನು ಮಸೂದೆಗೊಳಿಸಲು ಸೆನೆಟ್‌ಗೆ ವರ್ಗಾಯಿಸಿದೆ.

ಕಾಯ್ದೆಯ ಪರ 102 ಮತಗಳು ಬಿದ್ದರೆ ವಿರುದ್ಧವಾಗಿ 13 ಮತಗಳು ಚಲಾವಣೆಯಾಗಿದ್ದವು.  ಜಾಲತಾಣಗಳಿಗೆ ವಯಸ್ಸಿನ ನಿರ್ಬಂಧವನ್ನು ಹೇಎ ಕಾರ್ಯಾಚರಣೆಗೆ ತರಬೇಕೆಂದು ಖಚಿತಪಡಿಸಲು ಒಂದು ವರ್ಷಗಳ ಕಾಲಾವಕಾಶವನ್ನು ನೀಡಲಾಗುತ್ತದೆ ಎಂದು ಜನ ಪ್ರತಿನಿಧಿಗಳ ಸಭೆಯು ಹೇಳಿದೆ.

ಈ ಮಸೂದೆ ಕುರಿತು ಸೆನೆಟ್ ಚರ್ಚಿಸಲಿದೆ ಎಂದು ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಹೇಳಿದ್ದಾರೆ.

ನಿಷೇಧವು ಮಕ್ಕಳನ್ನು ಪ್ರತ್ಯೇಕಿಸುತ್ತದೆ, ಸಾಮಾಜಿಕ ಮಾಧ್ಯಮದ ಸಕಾರಾತ್ಮಕ ಅಂಶಗಳಿಂದ ವಂಚಿತರನ್ನಾಗಿಸುತ್ತದೆ ಎಂದು ವಿಮರ್ಶಕರು ವಾದಿಸುತ್ತಿದ್ದಾರೆ.

ಆಧುನಿಕತೆ ಹೆಚ್ಚಾಗುತ್ತಾ ಹೋದಂತೆ ಜನರು ಹೊಸ ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಬಳಕೆಯೂ ಅಧಿಕವಾಗಿದ್ದು, ಮಕ್ಕಳು ಆನ್ಲೈನ್ ಪೋರ್ಟಲ್ ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಜನಪ್ರತಿನಿಧಿಗಳ ಸಭೆಯು ಹೇಳಿದೆ.

ಇತ್ತೀಚೆಗಿನ ದಿನಗಳಲ್ಲಿ ಮಕ್ಕಳು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಈ ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ಸಾಕಷ್ಟು ಗಂಭೀರ ಪರಿಣಾಮಗಳನ್ನು ಬೀರುತ್ತಿದೆ. ಇದು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಹಿನ್ನಲೆಯಲ್ಲಿ ಆಸ್ಟ್ರೇಲಿಯಾದಲ್ಲಿ ಇದೀಗ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವುದನ್ನು ನಿಷೇಧಿಸಲಾಗುತ್ತಿದೆ ಎಂದು ಅದು ಹೇಳಿದೆ.

ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೋನಿ ಆಲ್ಬನೀಸ್ ಈ ಬಗ್ಗೆ ಮಾತನಾಡಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಕಾನೂನು ರೂಪಿಸುತ್ತೇವೆ. ಈ ಹಿನ್ನಲೆಯಲ್ಲಿ ವಯಸ್ಸಿನ ಮಿತಿಯನ್ನು ಪರಿಶೀಲಿಸುತ್ತಿದ್ದೇವೆ. ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ನಮ್ಮ ಮಕ್ಕಳಿಗೆ ಹಾನಿ ಮಾಡುತ್ತಿದೆ. ಇದರ ಅತಿಯಾದ ಬಳಕೆಯಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಮೋಸ, ವಂಚನೆ ಸೇರಿದಂತೆ ಮಕ್ಕಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಮಕ್ಕಳನ್ನು ದೂರವಿಡುವ ಸಲುವಾಗಿ ಈ ಮಸೂದೆಗೆ ಅಂಗೀಕರ ನೀಡಲಾಗಿದೆ.. ನಾವು ಅಂಗೀಕರಿಸಿದ 12 ತಿಂಗಳ ನಂತರವೇ ಈ ಕಾನೂನು ಜಾರಿಗೆ ಬರಲಿವೆ ಎಂದು ಜನಪ್ರತಿನಿಧಿ ಸಭೆ ತಿಳಿಸಿದೆ.

ಮಕ್ಕಳು ಜಾಲತಾಣಗಳ ಬಳಕೆ ಮಾಡದಂತೆ ನಿರ್ಬಂಧಿಸುವ ಜವಾಬ್ದಾರಿ ಸಾಮಾಜಿಕ ಜಾಲತಾಣಗಳ ಸಂಸ್ಥೆಗಳ ಮೇಲಿದೆ. ಈ ಜವಾಬ್ದಾರಿ ಪೋಷಕರಾಗಲಿ ಅಥವಾ ಯುವಜನತೆಯ ಮೇಲೆ ಇರುವುದಿಲ್ಲ ಎಂದು ಪ್ರಧಾನಿ ಸ್ಪಷ್ಟ ಪಡಿಸಿದ್ದಾರೆ.

ಕಳೆದ ವರ್ಷ ಫ್ರಾನ್ಸ್ 15 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ ಪ್ರಸ್ತಾಪಿಸಿತ್ತು. ಅಮೆರಿಕದಲ್ಲಿ 13 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಪ್ರವೇಶಿಸಲು ಪೋಷಕರ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯವಾಗಿದೆ.

ಇದನ್ನೂ ಓದಿ...ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...