Homeಮುಖಪುಟಸಾಮಾಜಿಕ ಮಾಧ್ಯಮಗಳು ಭಯೋತ್ಪಾದಕರಿಗೆ ಸಾಧನವಾಗಿವೆ: ವಿದೇಶಾಂಗ ಸಚಿವ ಜೈಶಂಕರ್‌‌

ಸಾಮಾಜಿಕ ಮಾಧ್ಯಮಗಳು ಭಯೋತ್ಪಾದಕರಿಗೆ ಸಾಧನವಾಗಿವೆ: ವಿದೇಶಾಂಗ ಸಚಿವ ಜೈಶಂಕರ್‌‌

- Advertisement -
- Advertisement -

ಭಯೋತ್ಪಾದಕರು ತಮ್ಮ ಯೋಜಿತ ಪ್ರಚಾರಗಳನ್ನು ಮಾಡಲು, ನಾಗರಿಕರನ್ನು ತೀವ್ರಗಾಮಿಗೊಳಿಸಲು ಪ್ರಬಲ ಸಾಧನವಾಗಿ ಇಂಟರ್‌ನೆಟ್‌‌ ಮತ್ತು ಸಾಮಾಜಿಕ ಮಾಧ್ಯಮಗಳು ಬಳಕೆಯಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘ಭಯೋತ್ಪಾದನಾ ನಿಗ್ರಹ ಸಮಿತಿಯ ವಿಶೇಷ ಸಭೆ’ಯ ಸರ್ವಸದಸ್ಯರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಹಲವಾರು ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಿಗೆ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್‌ಗಳು ಮತ್ತು ಎನ್‌ಕ್ರಿಪ್ಟೆಡ್ ಮೆಸೇಜಿಂಗ್ ಸೇವೆಗಳಂತಹ ತಂತ್ರಜ್ಞಾನಗಳು ಭರವಸೆಯ ಭವಿಷ್ಯವನ್ನು ನೀಡುತ್ತವೆ. ಆದರೆ ಅವು ಸರ್ಕಾರಗಳಿಗೆ ಹೊಸ ಸವಾಲುಗಳನ್ನೂ ಒಡ್ಡುತ್ತವೆ ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ಗುಂಪುಗಳು, ಅವರ ಸೈದ್ಧಾಂತಿಕ ಒಡನಾಡಿಗಳು ಈ ತಂತ್ರಜ್ಞಾನಗಳಿಗೆ ಪ್ರವೇಶವನ್ನು ಪಡೆಯುವ ಮೂಲಕ ತಮ್ಮ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದಾರೆ” ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ. “ಭಯೋತ್ಪಾದಕರು ತಂತ್ರಜ್ಞಾನ ಮತ್ತು ಹಣವನ್ನು ಸಮಾಜಗಳ ನೀತಿ, ಸ್ವಾತಂತ್ರ್ಯ, ಸಹಿಷ್ಣುತೆ ಮತ್ತು ಪ್ರಗತಿಯ ಮೇಲೆ ದಾಳಿ ಮಾಡಲು ಬಳಸುತ್ತಿದ್ದಾರೆ” ಎಂದಿದ್ದಾರೆ.

ಭಯೋತ್ಪಾದನೆಯು ಮಾನವೀಯತೆಗೆ ಬಹುದೊಡ್ಡ ಬೆದರಿಕೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ಬಣ್ಣಿಸಿದ್ದಾರೆ.

“ವಿಶ್ವಸಂಸ್ಥೆಯ ಸೆಕ್ಯುರಿಟಿ ಕೌನ್ಸಿಲ್ ಕಳೆದ ಎರಡು ದಶಕಗಳಲ್ಲಿ ಈ ಬೆದರಿಕೆಗಳ ನಿರ್ಮೂಲನೆಗೆ ಕ್ರಮಗಳನ್ನು ಜರುಗಿಸಿದೆ. ಭಯೋತ್ಪಾದನೆಯನ್ನು ಸರ್ಕಾರಿ-ಅನುದಾನಿತ ಉದ್ಯಮವಾಗಿ ಪರಿವರ್ತಿಸಿದ ಆ ದೇಶಗಳನ್ನು ಗಮನಕ್ಕೆ ತರುವಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಯೋತ್ಪಾದಕರು ಮಾನವರಹಿತ ವೈಮಾನಿಕ ವ್ಯವಸ್ಥೆಗಳನ್ನು ಬಳಸುತ್ತಿದ್ದಾರೆ. ಇದು ವಿಶ್ವದಾದ್ಯಂತ ಸರ್ಕಾರಗಳಿಗೆ ಹೆಚ್ಚುವರಿ ಚಿಂತೆಯಾಗಿ ಪರಿಣಮಿಸಿದೆ ಎಂದು ಜೈಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ಗುಂಪುಗಳು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಗಡಿಯಾಚೆಗೆ ಕಳ್ಳಸಾಗಣೆ ಮಾಡಲು ಡ್ರೋನ್‌ಗಳು ಮತ್ತು ಕ್ವಾಡ್‌ಕಾಪ್ಟರ್‌ಗಳನ್ನು ಬಳಸುತ್ತಿವೆ ಎಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳನ್ನು, ವಿಶ್ವಸಂಸ್ಥೆಯ ಶಾಂತಿಪಾಲಕರ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಅಂತಹ ಸಂಘಟನೆಗಳು ಡ್ರೋನ್‌ಗಳನ್ನು ಆಫ್ರಿಕಾದಲ್ಲಿ ಬಳಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವರು ಭಯೋತ್ಪಾದನಾ ನಿಗ್ರಹ ಸಮಿತಿ ಉದ್ದೇಶಿಸಿ ಶುಕ್ರವಾರ ಮಾತನಾಡಿದ್ದರು. “ರಾಷ್ಟ್ರೀಯ ಸಂಘಟಿತ ಅಪರಾಧ, ಅಕ್ರಮ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯೊಂದಿಗೆ ಭಯೋತ್ಪಾದನೆಯ ನಂಟು ಈಗ ಉತ್ತಮವಾಗಿ ಸ್ಥಾಪಿತವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಅಂತೂ a ಸತ್ಯ ಒಪ್ಪಿದ ಕಮಲ ನಾಯಕ. ಆದ್ರೆ ನೇರವಾಗಿ ಒಪ್ಪಿಕೊಳ್ಳಲಿಲ್ಲ. ಬಿಜೆಪಿ rss ನವರು ಕೂಡಾ ಬಾಯೋತ್ಪದಕರು ಅಂತ ಒಳ್ಳೆ ಬೆಳವಣಿಗೆ ಹಾಗಾಗಿ ಈ ಬಾಯೋತ್ಪದಕ ಸಂಘಟನೆ ಆರೆಸಸ್ ಅನ್ನೂ ನಿಕ್ಷೇದ ಮಾಡಿ ಅಂತ ಪ್ರಧಾನಿ ಅವರಿಗೆ ಹೇಳಿ ಜೈ ಶಂಕರ್ ಅವರೇ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...