Homeಕರ್ನಾಟಕಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ 'ಸಹಯೋಗ್‌ ಪೋರ್ಟಲ್‌' ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದಾರೆ.

“ಮಾಹಿತಿಯನ್ನು ಎಲ್ಲಾ ಸಂದರ್ಭಗಳಲ್ಲಿಯೂ ನಿಯಂತ್ರಿಸಲಾಗಿದೆ. ಆರಂಭಿಕ ದಿನಗಳಲ್ಲಿ ಸಂದೇಶವಾಹಕರ ಮೂಲಕವಾಗಲಿ, ಅಂಚೆಯ ಮೂಲಕವಾಗಲಿ ಅಥವಾ ಇಂದಿನ ಡಿಜಿಟಲ್ ಯುಗದಲ್ಲಿ ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ವೇದಿಕೆಗಳ ಮೂಲಕವಾಗಲಿ, ಎಲ್ಲಾ ರೀತಿಯ ಮಾಹಿತಿಯನ್ನು ವಿಶ್ವದಾದ್ಯಂತ ಮತ್ತು ಸ್ಥಳೀಯವಾಗಿ ವಿವಿಧ ಆಡಳಿತ ವ್ಯವಸ್ಥೆಗಳಿಂದ ನಿಯಂತ್ರಿಸಲಾಗಿದೆ ಎಂದಿದ್ದಾರೆ.

ಸಂವಿಧಾನದ ವಿಧಿ 19(1)(ಎ) ಅಡಿ ಅರ್ಜಿದಾರರು ಮಂಡಿಸಿದ್ದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕು ವಿಧಿ 19(2) ಅಡಿ ಕೆಲವು ನಿರ್ಬಂಧಗಳೊಂದಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

“19(1)(ಎ) ವಿಧಿಯು ತನ್ನ ಭರವಸೆಯಲ್ಲಿ ಪ್ರಕಾಶಮಾನವಾಗಿದೆ. ಆದರೆ, ನಾಗರಿಕರಿಗೆ ಮಾತ್ರ ನೀಡಲಾದ ಹಕ್ಕುಗಳ ಸನ್ನದಾಗಿ ಉಳಿದಿದೆ. ನಾಗರಿಕನಲ್ಲದ ಅರ್ಜಿದಾರರು ಅದರ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

‘ಸಹಯೋಗ್’ ಪೋರ್ಟಲ್ ಎನ್ನುವುದು ನಾಗರಿಕರ ಮತ್ತು ಮಧ್ಯವರ್ತಿಗಳ (ಸಾಮಾಜಿಕ ಮಾಧ್ಯಮ ವೇದಿಕೆಗಳ) ನಡುವಿನ ಸಹಕಾರದ ದೀಪಸ್ತಂಭವಾಗಿದೆ. ಇದು ರಾಜ್ಯವು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ರೂಪಿಸಿದ ಒಂದು ಕಾರ್ಯವಿಧಾನವಾಗಿದೆ. ಈ ಪೋರ್ಟಲ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸುವುದು ಎಂದರೆ ಅದರ ಉದ್ದೇಶವನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಾಗಿದೆ” ಎಂದು ಹೇಳಿದ್ದಾರೆ.

“ಆಧುನಿಕ ವಿಚಾರಗಳ ಆಡುಂಬೊಲವಾಗಿರುವ ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ” ಎಂದಿರುವ ನ್ಯಾಯಾಲಯವು, ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ ಎಂದಿದೆ.

ತನ್ನ ಮೂಲಸ್ಥಾನವಾದ ಅಮೆರಿಕಾದಲ್ಲಿ ಎಕ್ಸ್‌ ಕಾರ್ಪ್‌ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಅದನ್ನು ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಕೃತ್ಯ ಎಂದು ನಿರ್ಧರಿಸಲಾಗುತ್ತದೆ. ಅದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತದೆ. ಇದಕ್ಕೆ ಸಾಧಾರವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯು ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ತಿಳಿಸಿದೆ.

ನಿಯಂತ್ರಣವಿಲ್ಲದ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಹೆಸರಿನಲ್ಲಿ ಅನುಮತಿಸಿದರೆ ಅದು ಕಾನೂನುಬಾಹಿರತೆಗೆ ದಾರಿಮಾಡಿಕೊಡುತ್ತದೆ ಎಂದ ನ್ಯಾಯಾಲಯ, ಇದಕ್ಕೆ ವಿರುದ್ಧವಾಗಿ, ನಿಯಂತ್ರಿತ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುವ್ಯವಸ್ಥೆ ಎರಡನ್ನೂ ಕಾಪಾಡುತ್ತದೆ ಎಂದು ಹೇಳಿದೆ. ಈ ಎರಡೂ ಗುಣಗಳು ಪ್ರಜಾಪ್ರಭುತ್ವದ ಎರಡು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಗೃಹ ಸಚಿವಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪರಿಚಯಿಸಿದ ‘ಸಹಯೋಗ್ ಪೋರ್ಟಲ್’, ಸರ್ಕಾರ ಅಥವಾ ಅದರ ಯಾವುದೇ ಏಜೆನ್ಸಿಗಳು ಮಧ್ಯವರ್ತಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಯಾವುದೇ ವಿಷಯವನ್ನು ಮೂರನೇ ವ್ಯಕ್ತಿಯಿಂದ ತೆಗೆದುಹಾಕಲು ಆದೇಶಿಸಲು ಅನುಮತಿಸುತ್ತದೆ. ತೆಗೆದುಹಾಕುವಿಕೆಯ ಆದೇಶವನ್ನು ಪಾಲಿಸಲು ನಿರಾಕರಿಸಿದರೆ ಮಧ್ಯವರ್ತಿಯು ಅಂತಹ ವಿಷಯಕ್ಕೆ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ.

ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, 2000ರ ಸೆಕ್ಷನ್ 2(1)(w) ಪ್ರಕಾರ, “ಮಧ್ಯವರ್ತಿ” ಎಂದರೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾಗಿದ್ದು, ಅವರು ಬೇರೊಬ್ಬರ ಪರವಾಗಿ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸ್ವೀಕರಿಸುತ್ತಾರೆ, ಶೇಖರಿಸುತ್ತಾರೆ, ಅಥವಾ ರವಾನಿಸುತ್ತಾರೆ, ಅಥವಾ ಈ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುತ್ತಾರೆ. ಉದಾಹರಣೆಗೆ, ಸಾಮಾಜಿಕ ಮಾಧ್ಯಮ ವೇದಿಕೆಗಳು, ಇ-ಕಾಮರ್ಸ್ ವೇದಿಕೆಗಳು ಮತ್ತು ಟೆಲಿಕಾಂ ಸೇವಾ ಒದಗಿಸುವವರು.

ಸರಳವಾಗಿ ಹೇಳುವುದಾದರೆ, ಮಧ್ಯವರ್ತಿಗಳು ಎಂದರೆ ಇತರರ ಎಲೆಕ್ಟ್ರಾನಿಕ್ ಮಾಹಿತಿಯನ್ನು ನಿರ್ವಹಿಸುವ ಅಥವಾ ಸಂಬಂಧಿತ ಸೇವೆಗಳನ್ನು ನೀಡುವ ವ್ಯಕ್ತಿಗಳು ಅಥವಾ ಕಂಪನಿಗಳು, ಉದಾಹರಣೆಗೆ ಫೇಸ್‌ಬುಕ್, ಅಮೆಜಾನ್, ಅಥವಾ ಏರ್‌ಟೆಲ್‌ನಂತಹ ಟೆಲಿಕಾಂ ಕಂಪನಿಗಳು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...