Homeಮುಖಪುಟಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!

- Advertisement -
- Advertisement -

ಇದೇ ಭಾನುವಾರ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆಯಲಿದೆ. ಈ ಇಬ್ಬರ ಹೆಸರುಗಳು ವಿಶೇಷವಾದ ಕಾರಣಕ್ಕೆ ಈ ವಿವಾಹದ ಸುದ್ದಿ ಈಗ ದೇಶಾದ್ಯಂತ ವೈರಲ್ ಆಗಿವೆ. ವರನ ತಂದೆ ಅಪ್ಪಟ ಕಮ್ಯುನಿಷ್ಟ್ ಸಿದ್ದಾಂತ ಪ್ರೇಮಿಯಾದುದ್ದೇ ಈ ವಿವಾಹ ಇಂದು ದೇಶಾದ್ಯಂತ ಚರ್ಚೆಗೊಳಗಾಗಲು ಕಾರಣವಾಗಿವೆ.

ತಮಿಳುನಾಡಿನ ಸೇಲಂ ನಗರದ CPI ಕಾರ್ಯಕರ್ತರಾದ 52 ವರ್ಷದ ಮೋಹನ್ ಎಂಬುವವರು ಅಪ್ಪಟ ಕಮ್ಯುನಿಷ್ಟ್ ಹೋರಾಟಗಾರರು. ಅವರ ತಂದೆ ಮತ್ತು ತಾತ ಕೂಡ ಕಮ್ಯುನಿಷ್ಟರೆ.. ಅದೇ ಹಾದಿಯಲ್ಲಿ ಬೆಳೆದ ಮೋಹನ್ ಸೋವಿಯತ್ ರಷ್ಯಾ ವಿಭಜನೆ ಸಂದರ್ಭದಲ್ಲಿ ಕಮ್ಯುನಿಷ್ಟ್ ಸಿದ್ದಾಂತ ಮುಗಿದ ಅಧ್ಯಾಯ ಎಂಬ ಟೀಕೆಗಳನ್ನು ಕೇಳಿ ಬೇಸರಗೊಂಡಿದ್ದರು. ಆಗ ಅವರು ತಮ್ಮ ಮಕ್ಕಳಿಗೆ ತಾನು ನಂಬಿದ್ದ ಸಿದ್ದಾಂತದ ಹೆಸರಿಡಲು ದೃಢ ನಿರ್ಧಾರ ಮಾಡಿದರು. ಅಂತೆಯೇ ತಮ್ಮ ಮೂರು ಜನ ಮಕ್ಕಳಿಗೆ ಕಮ್ಯುನಿಸಂ, ಲೆನಿನಿಸಂ ಹಾಗೂ ಸೋಶಿಯಲಿಸಂ ಎಂದು ಹೆಸರಿಟ್ಟಿದ್ದಾರೆ. “ನಾವು ಒಂದು ದಿನ ಸಾಯಬಹುದು. ಆದರೆ ಈ ಹೆಸರುಗಳು ನಮ್ಮ ಸಿದ್ದಾಂತವನ್ನು ಯಾವಾಗಲೂ ಪ್ರತಿಬಿಂಬಿಸುತ್ತವೆ” ಎಂದು ಮೋಹನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ.

ಈಗ ಸೋಶಿಯಲಿಸಂ ಎಂಬ ಹೆಸರಿನ ಮೂರನೇ ಮಗನಿಗೆ ಮದುವೆ ನಿಶ್ಚಯವಾಗಿದೆ. ಆದರೆ ಅದರಲ್ಲೂ ವಿಶೇಷವಿದೆ. ಅದೇನೆಂದರೆ ಆತ ಮದುವೆಯಾಗುತ್ತಿರುವ ಮದುಮಗಳ ಹೆಸರು ಮಮತಾ ಬ್ಯಾನರ್ಜಿ!. ಈ ಮಮತಾ ಬ್ಯಾನರ್ಜಿಯ ಕುಟುಂಬ ಸದಸ್ಯರೆಲ್ಲರೂ ಅನಾದಿ ಕಾಲದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ. ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ತುಂಬಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ, ಅಭಿಮಾನದಿಂದ ಈ ತಮಿಳುನಾಡಿನ ಕಾಂಗ್ರೆಸ್ ಕುಟುಂಬ ತಮ್ಮ ಮನೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಮಮತಾ ಬ್ಯಾನರ್ಜಿ ಎಂದು ಹೆಸರಿಟ್ಟಿದ್ದರಂತೆ. ಆ ಹೆಣ್ಣು ಮಗು ಸದ್ಯದ ಮದುಮಗಳು.. ಇವರಿಬ್ಬರ ಮದುವೆಯ ಆಮಂತ್ರಣ ಪತ್ರಿಕೆ ಈಗ ಇಡೀ ದೇಶದಲ್ಲಿ ವೈರಲ್ ಆಗುತ್ತಿದೆ!

ಇವರಿಬ್ಬರ ಮದುವೆ ಭಾನುವಾರದಂದು ಸೇಲಂನಲ್ಲಿ ಜರುಗಲಿದೆ. ತಮಿಳುನಾಡಿನ ಸಿಪಿಐ ರಾಜ್ಯ ಕಾರ್ಯದರ್ಶಿ ಆರ್.ಮುಥಾರಸನ್ ಪಾಲ್ಗೊಳ್ಳಿದ್ದಾರೆ. ಈ ವಿವಾಹಕ್ಕೆ ನೂರಾರು ಜನ ಶುಭ ಹಾರೈಸಿದ್ದಾರೆ. ಇನ್ನು ಕೊನೆಯದಾಗಿ ಒಂದು ವಿಷಯವೆಂದರೆ ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!


ಇದನ್ನೂ ಓದಿ; 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...