Homeಮುಖಪುಟತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜಕೀಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಎಡ ಪಕ್ಷಗಳು ರಾಜಕೀಯ ಪ್ರತಿಸ್ಪರ್ಧಿಗಳಾಗಿದ್ದರೇ, ತಮಿಳುನಾಡಿನಲ್ಲಿ ಇಬ್ಬರು ಸತಿ-ಪತಿಗಳಾಗಿ ಜೊತೆಗೆ ನಡೆಯುವ ಪ್ರಮಾಣ ಮಾಡಿದ್ದಾರೆ. ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆದಿದೆ.

ಕಾಂಗ್ರೆಸ್ ಬೆಂಬಲಿಗರ ಕುಟುಂಬದ ಮದುಮಗಳು ಪಿ ಮಮತಾ ಬ್ಯಾನರ್ಜಿ, ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆಕೆಯ ಪೋಷಕರು ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ತುಂಬಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ, ಅಭಿಮಾನದಿಂದ ಈ ಹೆಸರಿಟ್ಟಿದ್ದಾರೆ.

29 ವರ್ಷದ ವರ ಬಿಕಾಂ ಪದವಿ ಪಡೆದಿದ್ದಾರೆ. ತಮಿಳುನಾಡಿನ ಸೇಲಂ ನಗರದ CPI ಕಾರ್ಯಕರ್ತರಾದ 52 ವರ್ಷದ ಮೋಹನ್ ಎಂಬುವವರ ಅಪ್ಪಟ ಕಮ್ಯುನಿಷ್ಟ್ ಹೋರಾಟಗಾರ ಮಗ. ತಮ್ಮ ಮೂರು ಜನ ಮಕ್ಕಳಿಗೆ ಕಮ್ಯುನಿಸಂ, ಲೆನಿನಿಸಂ ಹಾಗೂ ಸೋಶಿಯಲಿಸಂ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ: ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

“ನಾನು ಹತ್ತನೇ ತರಗತಿಯಲ್ಲಿದ್ದಾಗ, ನನ್ನ ಸ್ನೇಹಿತರು ನನ್ನ ಹೆಸರಿನ ಬಗ್ಗೆ ಮಾತನಾಡಲು ಪ್ರಾರಂಭಿಸಿದ ನಂತರ ನನಗೆ ಹೆಸರಿನ ಮಹತ್ವವನ್ನು ಅರ್ಥವಾಯಿತು. ಮಮತಾ ಬ್ಯಾನರ್ಜಿ ಪ್ರಬಲ ಮಹಿಳೆ ಎಂದು ಹೇಳಲು ಹೆಮ್ಮೆಯಾಗುತ್ತದೆ” ಎಂದು ಪಿ ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

ಸರಳ ಸಮಾರಂಭದಲ್ಲಿ ನಡೆದ ಮದುವೆ ಬಳಿಕ, ತಮ್ಮ ಹೆಸರುಗಳಿಗೆ ಅಂಟಿಕೊಂಡಿರುವ ರಾಜಕೀಯ ಪೈಪೋಟಿ ಜೀವನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

“ನಾವು ಒಟ್ಟಿಗೆ ಇರುವ ಬಗ್ಗೆ ಸಂತೋಷಪಡುತ್ತೇವೆ. ಸಂತೋಷದ ಸಮಯಗಳಲ್ಲಿ ಮತ್ತು ಕಠಿಣ ಸಮಯಗಳಲ್ಲಿ ನಾವು ಒಟ್ಟಿಗೆ ಜೊತೆಯಾಗುತ್ತೇವೆ. ಏನೇ ಆಗಲಿ, ನಮ್ಮ ಇಡೀ ಜೀವನವನ್ನು ನಾವು ಒಟ್ಟಿಗೆ ಕಳೆಯುತ್ತೇವೆ” ಎಂದು ವರ ಸೋಶಿಯಲಿಸಂ ಹೇಳಿದ್ದಾರೆ.

ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ ಈ ಇಬ್ಬರ ಹೆಸರುಗಳು ವಿಶೇಷವಾದ ಕಾರಣಕ್ಕೆ ಈ ವಿವಾಹದ ಸುದ್ದಿ ದೇಶಾದ್ಯಂತ ವೈರಲ್ ಆಗಿತ್ತು.


ಇದನ್ನೂ ಓದಿ: ಫೋನ್‌ ಕದ್ದಾಳಿಕೆ: ತಮ್ಮದೆ ಸರ್ಕಾರ ಮೇಲೆ ಸಂಶಯ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...